Get Updates
Get notified of breaking news, exclusive insights, and must-see stories!

ಶಿವಸೇನೆಯಿಂದ ಕನ್ನಡ ಬಾವುಟಕ್ಕೆ ಬೆಂಕಿ; ಬೆಂಗಳೂರಿನಲ್ಲಿ ಕರವೇ ಪ್ರತಿಭಟನೆ

ಬೆಂಗಳೂರು, ಡಿಸೆಂಬರ್ 15: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕರ್ನಾಟಕದ ರಾಜ್ಯ ಬಾವುಟವನ್ನು ಸುಟ್ಟು ಹಾಕಿ ಶಿವಸೇನೆಯ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ. ಎಂಇಎಸ್ ಕಾರ್ಯಕರ್ತನ ಮುಖಕ್ಕೆ ಮಸಿ ಬಳಿದ ಪ್ರತೀಕವಾಗಿ ಕನ್ನಡ ಬಾವುಟವನ್ನು ಸುಟ್ಟು ಹಾಕಿದ್ದಾರೆ. ಇದರಿಂದ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಬೆಳಗಾವಿಯಲ್ಲಿ ಸದ್ಯ ಚಳಿಗಾಲದ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಇದರ ಮಧ್ಯೆಯೇ ನಗರದಲ್ಲಿ ಎಂಇಎಸ್ ಕಾರ್ಯಕರ್ತರು ಮಹಾಮೇಳಾವ ನಡೆಸಲು ತಯಾರಿ ನಡೆಸಿದ್ದರು. ಇದಕ್ಕಾಗಿ ಕನ್ನಡಪರ ಕಾರ್ಯಕರ್ತರು ಎಂಇಎಸ್ ಕಾರ್ಯಕರ್ತನ ಮುಖಕ್ಕೆ ಮಸಿ ಬಳಿದಿದ್ದಾರೆ.

ಅತ್ತ ಶಿವಸೇನೆಯ ಪುಂಡ ಕಾರ್ಯಕರ್ತರು ಗೂಂಡಾಗಿರಿ ಮೆರೆದಿದ್ದು, ಕನ್ನಡಿಗರ ಸ್ವಾಭಿಮಾನವನ್ನು ಕೆಣಕುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಪ್ರತಿಭಟನೆ ನೆಪದಲ್ಲಿ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವುದು ಕನ್ನಡಿಗರ ಹಾಗೂ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Kannada flag set on fire: Karave Stage Protest Against Shiv Sena in Bengaluru

ಈ ಕುರಿತು ಮಾತನಾಡಿರುವ ವಾಟಾಳ್ ನಾಗರಾಜ್, ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಕರ್ನಾಟಕದ ರಾಜಕೀಯ ಪಕ್ಷಗಳು ಮತಗಳಿಗಾಗಿ, ರಾಜಕೀಯ ಲಾಭಕ್ಕಾಗಿ ಬೆಳಗಾವಿಯಲ್ಲಿ ಮರಾಠಿಗರನ್ನು ಬೆಳೆಸುತ್ತಿದ್ದಾರೆ. ಇವರಿಗೆ ರಾಜ್ಯದ ರಕ್ಷಣೆ ಬೇಕಿಲ್ಲ ಎಂದು ಆರೋಪಿಸಿದರು.

ಸದ್ಯ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವ ಬಗ್ಗೆ ಮಾತನಾಡಲು ಯಾರೂ ಇಲ್ಲ ಎಂದು ಕಿಡಿಕಾರಿದರು.

ಶಿವಸೇನೆ ಮತ್ತು ಎಂಇಎಸ್ ಭೂತದಹನ: ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಗಳನ್ನು ಸುಟ್ಟ ಶಿವಸೇನೆ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಮತ್ತು ಬೆಳಗಾವಿಯಲ್ಲಿ ಕನ್ನಡಿಗರ, ಕನ್ನಡ ಹೋರಾಟಗಾರರ ಮೇಲೆ ದಾಳಿ ನಡೆಸುತ್ತಿರುವ ನಾಡದ್ರೋಹಿ ಎಂಇಎಸ್ ಸಂಘಟನೆ ನಿಷೇಧಿಸಲು ಒತ್ತಾಯಿಸಿ ಇಂದು (15-12-2021) ಸಂಜೆ 5 ಗಂಟೆಗೆ ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಯುವಘಟಕದ ವತಿಯಿಂದ ಪ್ರತಿಭಟನೆ, ಭೂತದಹನ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವಘಟಕ ಅಧ್ಯಕ್ಷ ಟಿ.ಎ. ಧರ್ಮರಾಜ್ ಗೌಡ ತಿಳಿಸಿದ್ದಾರೆ.

Kannada flag set on fire: Karave Stage Protest Against Shiv Sena in Bengaluru

ಚನ್ನಪಟ್ಟಣದಲ್ಲಿ ಪ್ರತಿಭಟನೆ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕರ್ನಾಟಕದ ರಾಜ್ಯ ಬಾವುಟವನ್ನು ಸುಟ್ಟು ಹಾಕಿ ಪುಂಡಾಟಿಕೆ ಮಾಡಿರುವ ಶಿವಸೇನೆಯ ಕಾರ್ಯಕರ್ತರ ಪ್ರತಿಕೃತಿ ದಹಿಸಿ, ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡರ ನೇತೃತ್ವದಲ್ಲಿ ಇಂದು ಚನ್ನಪಟ್ಟಣದ ಕಾವೇರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+