ಕನ್ನಡ ಪ್ರಕಾಶಕಿ, ಸಾಹಿತಿ ಆಶಾ ರಘು ನಿಧನ
ಬೆಂಗಳೂರು, ಜನವರಿ 10: ಕನ್ನಡ ಪ್ರಕಾಶಕಿ ಮತ್ತು ಸಾಹಿತಿ ಆಶಾ ರಘು (46) ಅವರು ಶನಿವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಆಶಾ ಅವರು ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತಿ ಮೃತರಾದ ಬಳಿಕ ಅವರು ಮಾನಸಿಕವಾಗಿ ನೊಂದಿದ್ದು, ಮನೆಯ ಕೊಠಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕುಟುಂಬದ ಸದಸ್ಯರು ಬಾಗಿಲು ಒಡೆದು ನೋಡಿದಾಗ, ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಆಶಾ ಅವರಿಗೆ ಒಬ್ಬ ಪುತ್ರಿ ಇದ್ದಾರೆ. ಅವರ ಪತಿ ಕೆ.ಸಿ.ರಘು ಅವರು ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಪತಿಯ ಸಾವಿನ ನಂತರ ಆಶಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಮಲ್ಲೇಶ್ವರಂ ಪೊಲೀಸರು ತಿಳಿಸಿದ್ದಾರೆ. ಇನ್ನೂ ಇಂದು ಸಂಜೆಯೇ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ಹೇಳಿವೆ.
ಆಶಾ ರಘು ಅವರ ಹಿನ್ನೆಲೆ: ಆಶಾ ರಘು ಅವರು ಕಾದಂಬರಿಕಾರ್ತಿಯಾಗಿ ಪ್ರಸಿದ್ಧರಾಗಿದ್ದರು. ದೂರದರ್ಶನ ಕ್ಷೇತ್ರದಲ್ಲೂ ಸಂಭಾಷಣೆಕಾರ್ತಿಯಾಗಿ ಮತ್ತು ಸಹಾಯಕ ನಿರ್ದೇಶಕಿಯಾಗಿಯೂ ಕೆಲಸ ಮಾಡಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications