ಕನ್ನಡ ಪುಸ್ತಕ ಪ್ರಾಧಿಕಾರ: ಪ್ರಕಾಶಕರ ನೋಂದಣಿಗೆ ಅರ್ಜಿ ಆಹ್ವಾನ
ಬೆಂಗಳೂರು, ಫೆಬ್ರವರಿ 14 : ರಾಜ್ಯದಲ್ಲಿ ನೂರಾರು ಪ್ರಕಾಶಕರು ಇದ್ದು, ದಿನವಿಡಿ ಹತ್ತಾರು ಪುಸ್ತಕಗಳು ಪ್ರಕಟವಾಗುತ್ತವೆ. ರಾಜ್ಯದಲ್ಲಿ ಪ್ರಕಟಿತ ಪುಸ್ತಕಗಳ ಹಾಗೂ ಪುಸ್ತಕ ಪ್ರಕಾಶಕರ ವಿವರಗಳು ಒಂದೆಡೆ ಲಭ್ಯವಾದಲ್ಲಿ ಸಾಹಿತ್ಯಾಸಕ್ತರಿಗೆ ಅನುಕೂಲವಾಗುವ ದೃಷ್ಟಿಕೋನದಿಂದ ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಾಶಕರ ನೋಂದಣಿ ಯೋಜನೆಯೊಂದನ್ನು ಆರಂಭಿಸುತ್ತಿದೆ.
ಈ ದಿಸೆಯಲ್ಲಿ ರಾಜ್ಯದೆಲ್ಲಡೆ ಇರುವ ಪ್ರಕಾಶಕರು ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಹೆಸರು ನೋಂದಾಯಿಸಿಕೊಳ್ಳಲು ತಿಳಿಸಿದೆ. ನಿಗದಿತ ಅರ್ಜಿ ನಮೂನೆಗಾಗಿ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ. ಅರ್ಜಿಯನ್ನು ಫೆ.20 ರೊಳಗೆ ಸಲ್ಲಿಸಬೇಕು.

ವಿಳಾಸ :
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ,
ಜೆಸಿರಸ್ತೆ ಬೆಂ.560002.
ವೆಬ್ ಸೈಟ್- www.kannadapustakapradhikara.com












Click it and Unblock the Notifications