ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2023: ನಾಳೆ ಅ.26ರಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ
ಬೆಂಗಳೂರು, ಅಕ್ಟೋಬರ್ 25: ಕರ್ನಾಟಕ ರಾಜ್ಯೋತ್ಸವ 2023 ಆಚರಣೆಗೆ ಆರು ದಿನಗಳು ಮಾತ್ರವೇ ಬಾಕಿ ಉಳಿದಿದೆ. ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದವರ ಪಟ್ಟಿ ಪ್ರಕಟವಾಗಬೇಕಿದೆ. ಈ ಸಂಬಂಧ ಗುರುವಾರ ಅಕ್ಟೋಬರ್ 26 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಅಂದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ರಚಿಸಿರುವ ಪ್ರಶಸ್ತಿ ಸಲಹಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಾಧಕರನ್ನು ಆಯ್ಕೆ ಮಾಡುವ ಸಲುವಾಗಿ ಹಲವು ಸಭೆಗಳನ್ನು ನಡೆಸಿದ್ದಾರೆ. ಸಾಧರಕ ಆಯ್ಕೆಗೆ ಇರುವ ಈ ಸಮಿತಿಯು 30 ಸದಸ್ಯರನ್ನು ಒಳಗೊಂಡಿದೆ.

ಜಿಲ್ಲಾವಾರು ಶಿಫಾರಸುಗಳು ಬಂದಿವೆ. ಅಲ್ಲದೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಭೌತಿಕವಾಗಿ 25000ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ ಆಗಿವೆ. ಸೇವಾ ಸಿಂಧು ಮೂಲಕ ಸಲ್ಲಿಕೆ ಆಗಿರುವ 25000ಕ್ಕೂ ಅಧಿಕ ಅರ್ಜಿಗಳನ್ನು ಪರಿಶೀಲಿಸಲಾಗಿದೆ.
ಸಾಧಕರ ಆಯ್ಕೆಗೆ ಇರುವ ಸಲಹಾ ಸಮಿತಿ ತಜ್ಞರ ಸಮಿಯು ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು 1:2 ಅನುಪಾತದಲ್ಲಿ ಸಿದ್ಧಪಡಿಸಲಾಗಿದೆ. ಈ ಪಟ್ಟಿಯಲ್ಲಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಿದ್ದಾರೆ. ಪಟ್ಟಿ ಅಂತಿಮಗೊಂಡರೆ ನಾಳೆಯ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಗೊಳ್ಳಲಿದೆ.
ಪ್ರಸಕ್ತ ವರ್ಷ ಒಟ್ಟು 68 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಕಳೆದ 2022ರ ಸಾಲಿನಲ್ಲಿ 67 ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು












Click it and Unblock the Notifications