ಕನ್ನಡ ಕಿರುತೆರೆ ನಟಿ ರಚನಾ, ನಟ ಜೀವನ್ ದುರ್ಮರಣ
Recommended Video

ಬೆಂಗಳೂರು, ಆಗಸ್ಟ್ 24: ಕನ್ನಡ ಕಿರುತೆರೆ ನಟಿ ರಚನಾ, ನಟ ಜೀವನ್ ದುರಂತ ಅಂತ್ಯಕಂಡಿದ್ದಾರೆ. ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿ ಬೆಂಗಳೂರಿಗೆ ವಾಪಸ್ ಬರುವಾಗ ಅವರಿದ್ದ ವಾಹನ ಅಪಘಾತಕ್ಕೀಡಾಗಿದೆ.
ಈ ದುರ್ಘಟನೆಯಲ್ಲಿ ಮಹಾನದಿ ಸೀರಿಯಲ್ ಖ್ಯಾತಿಯ ರಚನಾ(23) ಹಾಗೂ ಸಹನಟ ಜೀವನ್(25) ಮೃತಪಟ್ಟಿದ್ದಾರೆ.
ಮಾಗಡಿ ತಾಲೂಕು ಸೋಲೂರು ಬಳಿ ರಚನಾ ಹಾಗೂ ಜೀವನ್ ಅವರಿದ್ದ ಸಫಾರಿ ಕಾರು ಅಪಘಾತವಾಗಿದೆ. ನಿಂತಿದ್ದ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಟಿ ರಚನಾ ಹಾಗೂ ಜೀವನ್ ಅವರ ದುರಂತ ಅಂತ್ಯಕ್ಕೆ ಕಿರುತೆರೆ ಹಾಗೂ ಹಿರಿತೆರೆ ಕ್ಷೇತ್ರ ಕಂಬನಿ ಮಿಡಿದಿದೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಬಿಗ್ ಬಾಸ್' ರಿಯಾಲಿಟಿ ಶೋ ನ 5ನೇ ಆವೃತ್ತಿಯಲ್ಲಿ ಕಾಮನ್ ಮ್ಯಾನ್ ವಿಭಾಗದಲ್ಲಿ ಸ್ಪರ್ಧೆ ಮಾಡಲು ಜೀವನ್ ಆಸೆ ಹೊಂದಿದ್ದರು. ನೂರಕ್ಕೂ ಹೆಚ್ಚು ಸಿನಿಮಾ, 40 ಧಾರಾವಾಹಿಗಳಲ್ಲಿ ನಟಿಸಿದ ಅನುಭವ ಹೊಂದಿದ್ದ ಜೀವನ್ ಅವರಿಗೆ ಹಾಸ್ಯನಟನಾಗಿ ಬೆಳೆಯುವ ಕನಸಿತ್ತು.

ಮಹಾನದಿ ನಟಿ ರಚನಾ
23 ವರ್ಷ ವಯಸ್ಸಿನ ರಚನಾ ಹಾಗೂ 25 ವರ್ಷ ವಯಸ್ಸಿನ ಜೀವನ್ ಅವರು ಅಪಘಾತ ನಡೆದ ಸಂದರ್ಭದಲ್ಲೇ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದ ಬಿಎಸ್ ರಂಜಿತ್, ಉತ್ತಮ್, ಹೊನ್ನೇಶ್, ಕಾರ್ತಿಕ್, ಮತ್ತು ಎರಿಕ್ ಎಂಬುವರು ಗಾಯಗೊಂಡಿದ್ದಾರೆ. ನೆಲಮಂಗಲ ಬಳಿಯ ಹರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಚನಾ ಸ್ಥಳದಲ್ಲೇ ಸಾವು
ಕುಕ್ಕೆ ಸುಬ್ರಮಣ್ಯ ದೇಗುಲಕ್ಕೆ ಹೋಗಿದ್ದ ರಚನಾ(23) ಹಾಗೂ ಇತರರು ಗೆಳೆಯ ಕಾರ್ತಿಕ್ ಅವರ ಹುಟ್ಟುಹಬ್ಬ ಆಚರಿಸಿಕೊಂಡು ಬೆಂಗಳೂರಿಗೆ ಹಿಂತಿರುಗುತ್ತಿದ್ದರು. ಗುರುವಾರ ಮುಂಜಾನೆ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ.

ಸಫಾರಿ ವಾಹನ ನುಜ್ಜು ಗುಜ್ಜು
ಮಹಾನದಿ, ತ್ರಿವೇಣಿ ಸಂಗಮ, ಮಧು ಬಾಲಾ ಕನ್ನಡ ಧಾರಾವಾಹಿಗಳಲ್ಲಿ ನಟಿಸಿದ್ದ ರಚನಾ ಅವರಿಗೆ ತ್ರಿವೇಣಿ ಸಂಗಮದಲ್ಲಿ ಲೀಡ್ ರೋಲ್ ಮಾಡುವ ಅವಕಾಶ ಲಭಿಸಿತ್ತು. ಕಥಾ ವಿಸ್ತರಣೆಗೊಂಡಿದ್ದು, ರಚನಾ(ಅನು ಪ್ರಭಾಕರ್ ಮಗಳ ಪಾತ್ರ)ಗೆ ಮುಖ್ಯ ಪಾತ್ರ ಸಿಕ್ಕಿತ್ತು. ಆದರೆ, ಇಂದು ಅವರ ಅಭಿಮಾನಿಗಳಿಗೆ ದುಃಖದ ವಾರ್ತೆ ಸಿಕ್ಕಿದೆ.

ಬೆಂಗಳೂರಿನ ನಿವಾಸಿ ರಚನಾ
ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ ರಚನಾ ಎಂ.ಜಿ ಅವರ ಮೃತದೇಹವನ್ನು ಬುಧವಾರ(ಆಗಸ್ಟ್ 24) ದಂದು ಮನೆ ಪಕ್ಕದ ಪಾರ್ಕಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು, ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications