• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಾಹಿತಿ, ರಂಗಭೂಮಿ ಕಲಾವಿದೆ ವಿಜಯಮ್ಮಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

|

ಬೆಂಗಳೂರು, ಡಿಸೆಂಬರ್ 18: ಸಾಹಿತಿ, ಲೇಖಕಿ, ರಂಗಭೂಮಿ ಕಲಾವಿದೆ ಡಾ.ವಿಜಯಾ (ವಿಜಯಮ್ಮ) ಅವರಿಗೆ 2019 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಾನ್ ಪಿಕ್ಸನ್ ನ ಕನ್ನಡ ಭಾಷಾ ವಿಭಾಗದಲ್ಲಿ ಅವರ 'ಕುದಿ ಎಸರು' ಆತ್ಮಕಥೆಗೆ ಈ ಪ್ರಶಸ್ತಿ ಸಂದಿದೆ.

ಕಾಂಗ್ರೆಸ್ ಮುಖಂಡ ಶಶಿ ತರೂರಗೆ ಪ್ರತಿಷ್ಠಿತ ಪ್ರಶಸ್ತಿ

ಕೇಂದ್ರ ಸಾಹಿತ್ಯ ಅಕಾಡೆಮಿಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ. ಇವರ ಜೊತೆ ದೇಶದ 21 ಭಾಷೆಯ 23 ಲೇಖಕರು, ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆಯವರಾದ ವಿಜಯಮ್ಮ ಅವರು ಬೆಂಗಳೂರಿನಲ್ಲಿ ನೆಲಸಿದ್ದಾರೆ. ಇಳಾ ಎಂಬ ಪುಸ್ತಕ ಪ್ರಕಾಶನ ಮೂಲಕ 200 ಕ್ಕೂ ಹೆಚ್ಚು ಲೇಖಕರ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಶ್ರೀರಂಗರ ನಾಟಕಗಳ ಕುರಿತು ಪಿ ಎಚ್ ಡಿ ಪಡೆದಿರುವ ವಿಜಯಮ್ಮ, ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಪ್ರಶಸ್ತಿಯೂ 1 ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. ಫೆಬ್ರುವರಿ 25, 2020 ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಸದ್ಯ ಕನ್ನಡಿಗ, ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

English summary
Book.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X