• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕನ್ನಡದ ಮೊದಲ ವಿಜ್ಞಾನ ಪತ್ರಿಕೆಗೆ ನೂರು ವರ್ಷ: ಸಂವಾದ

|

ಬೆಂಗಳೂರು, ನವೆಂಬರ್ 05: ಕನ್ನಡದ ಮೊದಲ ವಿಜ್ಞಾನ ಪತ್ರಿಕೆ 'ವಿಜ್ಞಾನ' ಪ್ರಕಟವಾಗಿ ಇದೀಗ ನೂರು ವರ್ಷ ಸಂದಿದೆ. ಈ ಸಂದರ್ಭದಲ್ಲಿ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಬಿ. ವಿ. ಜಗದೀಶ್ ವಿಜ್ಞಾನ ಕೇಂದ್ರವು ಇಜ್ಞಾನ ಟ್ರಸ್ಟ್ ಹಾಗೂ ಉದಯಭಾನು ಕಲಾಸಂಘದ ಸಹಯೋಗದೊಡನೆ ಸಂವಾದ ಕಾರ್ಯಕ್ರಮವೊಂದನ್ನು ಏರ್ಪಡಿಸಿದೆ.

ಬೆಂಗಳೂರು ಮೂಲದ ವಿಜ್ಞಾನಿಗೆ ಅಮೆರಿಕದಲ್ಲಿ ಪ್ರತಿಷ್ಠಿತ ಪ್ರಶಸ್ತಿ

ಈ ಕಾರ್ಯಕ್ರಮ ನವೆಂಬರ್ 11ರಂದು ಬೆಳಿಗ್ಗೆ 10ಗಂಟೆಯಿಂದ ಜಯನಗರದ ನ್ಯಾಷನಲ್ ಕಾಲೇಜು ಆವರಣದಲ್ಲಿರುವ ಬಿ. ವಿ. ಜಗದೀಶ್ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.

ಕನ್ನಡದ ಮುದ್ರಣ ಮಾಧ್ಯಮ, ಟೀವಿ, ರೇಡಿಯೋ ಹಾಗೂ ಜಾಲತಾಣಗಳಲ್ಲಿ ವಿಜ್ಞಾನ ಸಂವಹನದ ಸ್ಥಿತಿ-ಗತಿಗಳನ್ನು ಕುರಿತು ಆಯಾ ಕ್ಷೇತ್ರದ ಪರಿಣತರೊಡನೆ ಈ ಸಂದರ್ಭದಲ್ಲಿ ಚರ್ಚೆಗೆ ಅವಕಾಶ ಇರಲಿದೆ.

ದಿವಂಗತ ಬೆಳ್ಳಾವೆ ವೆಂಕಟನಾರಣಪ್ಪ ಹಾಗೂ ನಂಗಪುರಂ ವೆಂಕಟೇಶ ಅಯ್ಯಂಗಾರರು 1918ರಲ್ಲಿ ಪ್ರಾರಂಭಿಸಿದ್ದ 'ವಿಜ್ಞಾನ' ಪತ್ರಿಕೆ ಕನ್ನಡ ಪತ್ರಿಕೋದ್ಯಮದಲ್ಲೊಂದು ಮಹತ್ವದ ಮೈಲಿಗಲ್ಲು.

ದೀಪಾವಳಿ ವಿಶೇಷ ಪುರವಣಿ

ವಿಜ್ಞಾನ ಬರಹಗಳನ್ನು ಸಾಮಾನ್ಯ ಓದುಗರಿಗೂ ಪರಿಚಯಿಸಿದ ಈ ಅಪರೂಪದ ಪ್ರಯತ್ನದ ಕುರಿತು ಇದೇ ಸಂದರ್ಭದಲ್ಲಿ ಪ್ರೊ. ಎಚ್. ಆರ್. ರಾಮಕೃಷ್ಣರಾವ್ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ ejnana.trust@gmail.com ಅನ್ನು ಸಂಪರ್ಕಿಸಬಹುದು ಎಂದು ಇಜ್ಞಾನ ಟ್ರಸ್ಟ್ ನ ಕಾರ್ಯದರ್ಶಿ ಟಿ. ಜಿ. ಶ್ರೀನಿಧಿ ಹೇಳಿದ್ದಾರೆ.

English summary
Vijnana- Kannada languages first science magazine or a periodical publication turned 100. A celebration cum discussion will be held at Sir BV Jagadish Science center, Jayanagar National College, Bengaluru on November 11.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X