ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಂಡನ್ To ಬೆಂಗಳೂರು: ವಿಶೇಷ ವಿಮಾನದಲ್ಲಿ ಸ್ವದೇಶಕ್ಕೆ 323 ಕನ್ನಡಿಗರು

|
Google Oneindia Kannada News

ಬೆಂಗಳೂರು, ಮೇ.10: ನೊವೆಲ್ ಕೊರೊನಾ ವೈರಸ್ ಹರಡುವಿಕೆ ಭೀತಿ ನಡುವೆಯೇ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲು ಕೇಂದ್ರ ಸರ್ಕಾರವು ವಂದೇ ಭಾರತ್ ಮಿಷನ್ ಆರಂಭಿಸಿದೆ.
ಲಂಡನ್ ನಲ್ಲಿ ಸಿಲುಕಿದ್ದ 323 ಕನ್ನಡಿಗರನ್ನು ಹೊತ್ತ ವಿಶೇಷ ವಿಮಾನವು ಮೇ.11ರ ಮಧ್ಯರಾತ್ರಿ 3 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಕನ್ನಡಿಗರ ಮೊದಲ ತಂಡವನ್ನು ಸ್ವಾಗತಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ವಿದೇಶದಿಂದ ಭಾರತಕ್ಕೆ ಬರಲು, ಇಲ್ಲಿಂದ ವಿದೇಶಕ್ಕೆ ತೆರಳಲು ಮಾರ್ಗಸೂಚಿವಿದೇಶದಿಂದ ಭಾರತಕ್ಕೆ ಬರಲು, ಇಲ್ಲಿಂದ ವಿದೇಶಕ್ಕೆ ತೆರಳಲು ಮಾರ್ಗಸೂಚಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಕನ್ನಡಿಗರು ಬಂದು ಇಳಿಯುತ್ತಿದ್ದಂತೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತದೆ. ಪ್ರಯಾಣಿಕರ ಸಂಪೂರ್ಣ ಪರೀಕ್ಷೆ, ಸ್ಕ್ರೀನಿಂಗ್ ವ್ಯವಸ್ಥೆಯ ಪರಿಶೀಲನೆಗೆ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಏರ್ ಪೋರ್ಟ್ ಗೆ ತೆರಳಲಿದ್ದಾರೆ.

Kannadigs Arrives In Bangalore By Special Flight From London

ಭಾರತಕ್ಕೆ ಆಗಮಿಸಿದ ಬಳಿಕ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ. ಒಂದೊಮ್ಮೆ ಸ್ಕ್ರೀನಿಂಗ್ ಸಂದರ್ಭದಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿದರೆ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. 14 ದಿನಗಳ ಕ್ವಾರಂಟೈನ್ ಅವಧಿ ಬಳಿಕ ನಡೆಸಿದ ತಪಾಸಣೆಯಲ್ಲಿ ಕೊರೊನಾ ವೈರಸ್ ನೆಗಟಿವ್ ಬಂದಿದ್ದಲ್ಲಿ ಮಾತ್ರ ಮನೆಗೆ ತೆರಳಲು ಅವಕಾಶ ನೀಡಲಾಗುತ್ತದೆ.


ಇನ್ನೊಂದಡೆ ಕೌಲಾಲಂಪುರದಿಂದ 177 ಭಾರತೀಯರನ್ನು ಹೊತ್ತ ಏರ್ ಇಂಡಿಯಾದ IX 683 ವಿಮಾನ ಕೇರಳದ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

English summary
Kannadig's Arrives In Bangalore By Special Flight From London. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X