ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

|
Google Oneindia Kannada News

ಬೆಂಗಳೂರು ಫೆಬ್ರವರಿ 25: ಉಕ್ರೇನ್ ಮೇಲೆ ರಷ್ಯಾ ದಾಳಿ ಬೇರೆ ದೇಶಗಳಲ್ಲಿ ಆತಂಕ ಹೆಚ್ಚಿಸಿದೆ. ಬೇರೆ ಬೇರೆ ದೇಶಗಳಿಂದ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ನಲ್ಲಿ ನೆಲೆಸಿದ ಜನರ ಬಗ್ಗೆ ಕಳವಳ ಹೆಚ್ಚಾಗಿದೆ. ಭಾರತದಿಂದ ಅದರಲ್ಲೂ ಕರ್ನಾಟಕದಿಂದಲೂ ವಿದ್ಯಾರ್ಥಿಗಳು ನಾಗರೀಕರು ಉಕ್ರೇನ್‌ನಲ್ಲಿ ನೆಲೆಸಿದ್ದು ಅವರನ್ನು ಭಾರತಕ್ಕೆ ಕರೆತರಬೇಕು ಎಂದು ವಿಪಕ್ಷಗಳು ಕರ್ನಾಟಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಿಸಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್‌ಲಿಫ್ಟ್‌ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನು ಒತ್ತಾಯ ಮಾಡಿದ್ದಾರೆ.

ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿಂದು ಜಾತ್ಯತೀತ ಜನತಾದಳ ಪಕ್ಷದ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಷ್ಯಾ ಆಕ್ರಮಣದಿಂದ ತತ್ತರಿಸಿರುವ ಕನ್ನಡಿಗರು ಉಕ್ರೇನ್‌ನಲ್ಲಿ ಜೀವಭಯದಿಂದ ತತ್ತರಿಸಿದ್ದಾರೆ. ಕೂಡಲೇ ಅವರನ್ನು ರಕ್ಷಿಸಿ ಕರೆತರುವ ಕೆಲಸ ಆಗಬೇಕು ಎಂದರು.

ಉಕ್ರೇನ್‌ನಲ್ಲಿ ಭಾರತೀಯರಿಗೆ ಸಹಾಯವಾಣಿ: ಇಲ್ಲಿದೆ ವಿವರ
ಅಲ್ಲದೆ, ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, "ಕೇಂದ್ರ ಸರಕಾರವು ಎಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಹುಡುಕಿ ಕನ್ನಡಿಗರನ್ನು ವಾಪಸ್‌ ಕರೆತರಬೇಕು" ಎಂದಿದ್ದಾರೆ. ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್ʼನಲ್ಲಿ ರಾಜ್ಯದ ನೂರಾರು ವಿದ್ಯಾರ್ಥಿಗಳು ಸಿಲುಕಿರುವ ಮಾಹಿತಿಯನ್ನು ಸರಕಾರವೇ ನೀಡಿದೆ. ಆ ದೇಶದ ಕೀವ್ ನಗರ ಸೇರಿ ವಿವಿಧೆಡೆ ಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಎಲ್ಲ ತುರ್ತು ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಬೇಕು.


ಶೆಲ್, ಕ್ಷಿಪಣಿ, ಬಾಂಬ್ ದಾಳಿ ಭೀತಿಯಿಂದ ವಿದ್ಯಾರ್ಥಿಗಳು ಬಂಕರ್‌ಗಳಲ್ಲಿ & ಮೆಟ್ರೋ ರೈಲು ಅಂಡರ್ʼಗ್ರೌಂಡ್ʼನಲ್ಲಿ ಆಶ್ರಯ ಪಡೆದಿದ್ದಾರೆ. ಆ ದೃಶ್ಯಗಳು ಕಳವಳಕಾರಿ. ಸ್ಫೋಟದ ಸದ್ದು ಕೇಳಿಸಿಕೊಂಡು ಕ್ಷಣಕ್ಷಣಕ್ಕೂ ಭಯಭೀತಿಯಲ್ಲಿರುವ ಅವರೆಲ್ಲರನ್ನು ನೋಡಿದರೆ ಯುದ್ಧದ ಭೀಕರತೆ ಎಂಥದ್ದು ಎಂಬುದನ್ನು ಅರಿಯಬಹುದು.


ಅಲ್ಲಿ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರೆ, ಇಲ್ಲಿ ಅವರ ತಂದೆ-ತಾಯಿ ಮಕ್ಕಳ ಬಗ್ಗೆ ತೀವ್ರ ಆತಂಕದಲ್ಲಿದ್ದಾರೆ. ಉಕ್ರೇನ್ʼನಲ್ಲಿ ಬಾಂಬ್ʼಗಳ ಮೊರೆತಕ್ಕೆ ಅವರು ಮತ್ತಷ್ಟು ಕಂಗಾಲಾಗುತ್ತಿದ್ದಾರೆ. ನಾನು ಕೂಡ ಕನ್ನಡಿಗರ ರಕ್ಷಣೆಗೆ ನೇಮಕಗೊಂಡಿರುವ ಉಸ್ತುವಾರಿ ಅಧಿಕಾರಿ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕೇಂದ್ರ ಸರಕಾರವು ತನ್ನೆಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಬಳಸಿಕೊಂಡು ಉಕ್ರೇನ್ʼನಲ್ಲಿರುವ ಎಲ್ಲ ಕನ್ನಡಿಗರನ್ನೂ ಏರ್ʼಲಿಫ್ಟ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

Kannadigas Stuck in Ukraineʼ HD Kumaraswamy Demands Protection
ಇನ್ನೂ ಭಾರತ ದೇಶದಾದ್ಯಂತ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ರಕ್ಷಣೆಗಾಗಿ ಒತ್ತಾಯಗಳು ಹೆಚ್ಚಾಗುತ್ತಿದೆ.

ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಉಕ್ರೇನ್‌ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು. ರಷ್ಯಾ ಮತ್ತು ನ್ಯಾಟೋ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಮಾತುಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂಬ ನಮ್ಮ ನಂಬಿಕೆಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.


ಜೊತೆಗೆ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಪಿಎಂ ಮೋದಿ ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಗೆ ಮನವಿ ಮಾಡಿದರು. ಮಾತ್ರವದಲ್ಲೆ ಅವರು ಸಂವಾದದ ಹಾದಿಗೆ ಮರಳಲು ಕರೆ ನೀಡಿದರು ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿದೆ.

ನಿನ್ನೆ ಬೆಳಿಗ್ಗೆ ಉಕ್ರೇನ್ ವಿರುದ್ಧ ರಷ್ಯಾದ ಮಿಲಿಟರಿ ಕಾರ್ಯಾಚರಣೆಗಳು ಪ್ರಾರಂಭವಾಗಿ ಅಪಾರ ಸಾವು ನೋವು ಸಂಭವಿಸಿದೆ. ಹಲವಾರು ಭಾರತೀಯರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. NATOದೊಂದಿಗೆ ಉಕ್ರೇನ್‌ನ ಸಾಮೀಪ್ಯದಿಂದಾಗಿ ತಿಂಗಳುಗಳ ಕಾಲ ಉದ್ವಿಗ್ನತೆಯ ನಂತರ ರಷ್ಯಾ ಇಂದು ಬೆಳಿಗ್ಗೆ ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಸಂಜೆಯ ಹೊತ್ತಿ ಗೆಉಕ್ರೇನ್‌ನಲ್ಲಿ 11 ಏರ್‌ಫೀಲ್ಡ್‌ಗಳು ಸೇರಿದಂತೆ 70 ಕ್ಕೂ ಹೆಚ್ಚು ಮಿಲಿಟರಿ ನೆಲೆಗಳನ್ನು ನಾಶಪಡಿಸಿದೆ ಎಂದು ರಷ್ಯಾ ಹೇಳಿದೆ.

English summary
Russia's attack on Ukraine has increased anxiety in other countries. Kannadigas stuck in Ukraineʼ HD Kumaraswamy demands protection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X