Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ, 5 ಲಕ್ಷಕ್ಕೂ ಹೆಚ್ಚು ಜನರ ನಿರೀಕ್ಷೆ
ಬೆಂಗಳೂರು, ಏಪ್ರಿಲ್. 06: ಐತಿಹಾಸಿಕ ಬೆಂಗಳೂರಿನ ಪ್ರಮುಖ ಕರಗ ಉತ್ಸವಕ್ಕೆ 5 ಲಕ್ಷಕ್ಕೂ ಹೆಚ್ಚು ಜನರು ಸಾಕ್ಷಿಯಾಗುವ ನಿರೀಕ್ಷೆಯಿದೆ. ಕರಗಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಹಿಂದೂ ಪಂಚಾಂಗದ ಪ್ರಕಾರ ಚಿತ್ರ ಪೌರ್ಣಮಿಯಂದು ಗುರುವಾರ ಮಧ್ಯರಾತ್ರಿ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಲಿದೆ.
ಈಗಾಗಲೇ ಗುರುವಾರ ಬೆಳಗ್ಗೆ 10.30 ಕ್ಕೆ ಕಬ್ಬನ್ ಪಾರ್ಕ್‌ನಲ್ಲಿರುವ ಕರಗದ ಕುಂಟೆಯಲ್ಲಿ ದ್ರೌಪದಿ ದೇವಿಗೆ ಅರಿಶಿನ ಬಣ್ಣದ ಸೀರೆ ಉಟ್ಟು ಬಳೆಗಳನ್ನು ತೊಟ್ಟ ಕರಗ ಹೊತ್ತ ಅರ್ಚಕರು ಗಂಗಾಪೂಜೆ ಸಲ್ಲಿಸಿದ್ದಾರೆ. ಇಲ್ಲಿಂದ ಹಸಿ ಕರಗವನ್ನು ಮಂಟಪಕ್ಕೆ ತಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಗುರುವಾರ ಮಧ್ಯರಾತ್ರಿ 12.30ಕ್ಕೆ ಕರಗದ ಮೆರವಣಿಗೆ ದೇವಸ್ಥಾನದಿಂದ ಹೊರ ಬರಲಿದೆ.

ಪ್ರತಿ ವರ್ಷ ಲಕ್ಷಾಂತರ ಮಂದಿ ಕರಗವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಇತಿಹಾಸ ಪ್ರಸಿದ್ಧ ಕರಗವನ್ನು ಕೊರೊನಾ ಸಮಯದಲ್ಲಿ ಜನರ ದರ್ಶನಕ್ಕೆ ಅವಕಾಶ ನಿಡದೇ ನಡೆಸಲಾಗಿತ್ತು. ಕೋವಿಡ್ ಬಳಿಕ ಮತ್ತೆ ಕರಗ ಉತ್ಸವಕ್ಕೆ ಹೊಸ ಚೈತನ್ಯ ಬಂದಿದ್ದು, ಜನರು ಉತ್ಸಾಹದಿಂದ ಈ ಹಬ್ಬದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಲಕ್ಷಾಂತರ ಜನರು ಭಾಗವಹಿಸುವ ಕಾರಣ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದೆ. ಕರಗ ಮೆರವಣಿಗೆಗೆ ಸುಮಾರು 6 ರಿಂದ 8 ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದು ಕರಗಹ ಸಮಿತಿ ಮಾಹಿತಿ ನೀಡಿದೆ.
ಹೆಚ್ಚಿನ ಜನ ಸೇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕರಗ ಉತ್ಸವಕ್ಕೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಲವು ಕಡೆಗಳಲ್ಲಿ ಸಿಸಿ ಕ್ಯಾಮರಾಗಳ ಅಳವಡಿಸಲಾಗಿದೆ. ಕರಗ ಹೊರಡುವ ಮಾರ್ಗದ ರಸ್ತೆ, ಪಾದಚಾರಿ ಮಾರ್ಗಗಳು, ಒಳಚರಂಡಿಗಳ ದುರಸ್ಥಿ ಕಾರ್ಯ ನಡೆಸಲಾಗಿದೆ. ಉತ್ಸವಕ್ಕೆ ಬರುವ ಸಾರ್ವಜನಿಕರ ಉಪಯೋಗಕ್ಕಾಗಿ ಇ-ಶೌಚಾಲಯಗಳ ವ್ಯವಸ್ಥೆ ಮಡಲಾಗಿದೆ. ಸಂಚಾರ ದಟ್ಟಣೆಯಾಗದಂತೆ ವಾಹನಗಳ ನಿಲುಗಡೆಗೆ ಸ್ಥಳಗಳನ್ನು ನಿಗದಿ ಪಡಿಸಲಾಗಿದೆ.

ಪುಷ್ಪ ಕರಗವನ್ನು ಕಳೆದ 12 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಅರ್ಚಕ ಜ್ಞಾನೇಂದ್ರ ವಹ್ನಿಕುಲ ಗೌಡ ಅವರು ಈ ಬಾರಿಯೂ ನೆರವೇರಿಸಲಿದ್ದಾರೆ. ಕರಗದ ಮೆರವಣಿಗೆಯು ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ, ಬಳೆಪೇಟೆ, ದೊಡ್ಡಪೇಟೆ, ಕುಂಬಾರಪೇಟೆ, ಗೊಲ್ಲರಪೇಟೆ, ಹಲಸೂರು, ಕೆಆರ್‌ಮಾರುಕಟ್ಟೆ, ಕಾಟನ್‌ಪೇಟೆ ಮತ್ತಿತರ ಪ್ರದೇಶಗಳಲ್ಲಿ ಸುಮಾರು 38 ಕಿ.ಮೀ. ಸಂಚರಿಸಲಿದೆ. 10 ಸಾವಿರಕ್ಕೂ ಹೆಚ್ಚು ಮಹಿಳಾ ಭಕ್ತರು ಆರತಿ ದೀಪೋತ್ಸವವನ್ನು ನೆರವೇರಿಸಲಿದ್ದಾರೆ.
ಹಜರತ್ ತವಕ್ಕಲ್ ಮಸ್ತಾನ್ ಸಾಹೇಬ್ ದರ್ಗಾಕ್ಕೆ ಕೆಗ ತೆರಳುವುದಕ್ಕೆ ಕೆಲವು ಬಲಪಂಥೀಯ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಆದರೆ, ಇದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಾಗಿದ್ದು, ಧಾರ್ಮಿಕ ಸೌಹಾರ್ದತೆಯ ದ್ಯೋತಕವಾಗಿದ್ದು, ಯಾವುದೇ ಬದಲಾವಣೆಯಿಲ್ಲದೆ ಆಚರಣೆ ಮುಂದುವರಿಯಲಿದೆ ಎಂದು ಬೆಂಗಳೂರು ಕರಗ ಸಮಿತಿ ಸ್ಪಷ್ಟಪಡಿಸಿದೆ.
ಕರಗ ಮೆರವಣಿಗೆ ನಡೆಯುವ ದಾರಿಯಲ್ಲಿ ಹಿಂದೂ ದೇವಾಲಯಗಳಿಗೆ ಹೇಗೆ ಭೇಟಿ ನೀಡುತ್ತದೋ ಹಾಗೆಯೇ ಕರಗ ದರ್ಗಾಕ್ಕೂ ಭೇಟಿ ನೀಡಲಿದೆ ಎಂದು ಬೆಂಗಳೂರು ಕರಗ ಸಮಿತಿ ಸದಸ್ಯರು ತಿಳಿಸಿದ್ದಾರೆ. ಯಾವುದೇ ರಾಜಕೀಯ ಭಾಷಣ ಅಥವಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಬಾರದು ಎಂದು ಸಂಘಟಕರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications