ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು: ಪ್ರತಿಭಟನೆ ಕೈಬಿಟ್ಟ ವೈದ್ಯರು
ಬೆಂಗಳೂರು, ನವೆಂಬರ್ 8: ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಿಯ ವೈದ್ಯರು ಹಮ್ಮಿಕೊಂಡಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆಯ 13 ಕಾರ್ಯಕರ್ತರು ಪೊಲೀಸರಿಗೆ ಶರಣಾಗಿರುವ ಕಾರಣ ಪ್ರತಿಭಟನೆ ಹಿಂಪಡೆಯುತ್ತಿದ್ದೇವೆ ಎಂದು ಬಿಎಂಸಿಎ ಡೀನ್ ಡಾ. ಜಯಂತಿ ತಿಳಿಸಿದ್ದಾರೆ.
ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅನೇಕ ರೋಗಿಗಳು ಕಣ್ಣು ಕಳೆದುಕೊಂಡಿದ್ದಾರೆ ಎಂದು ಆರೋಪಿಸಿ ಕರವೇ ಕಾರ್ಯಕರ್ತರು ಮಿಂಟೋ ಆಸ್ಪತ್ರೆಗೆ ನುಗ್ಗಿದ್ದರು. ಆ ಸಂದರ್ಭದಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವೈದ್ಯರು ವಿವಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Recommended Video

ನಾವು ವೈದ್ಯರ ಮುಷ್ಕರಕ್ಕೆ ಹೆದರಿ ಶರಣಾಗುತ್ತಿಲ್ಲ, ಆದರೆ ರೋಗಿಗಳ ಹಿತದೃಷ್ಟಿಯಿಂದ ಶರಣಾಗುತ್ತಿದ್ದೇವೆ ಎಂದು ಕರವೇ ಕಾರ್ಯಕರ್ತರು ತಿಳಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತೆ ಅಶ್ವಿನಿ ಗೌಡ ಜೊತೆ 13 ಮಂದಿ ಪೊಲೀಸರಿಗೆ ಶರಣಾಗಿದ್ದಾರೆ.
ಇದೀಗ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣಾಗಿರುವ ಕಾರಣ ವೈದ್ಯರು ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ.












Click it and Unblock the Notifications