ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರವೇ ತಪ್ಪೊಪ್ಪಿಕೊಂಡರೂ ಪ್ರತಿಭಟನೆ ನಿಲ್ಲಲ್ಲ, ವೈದ್ಯರ ಹಠ

|
Google Oneindia Kannada News

ಬೆಂಗಳೂರು, ನವೆಂಬರ್ 8: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಪ್ಪೊಪ್ಪಿಕೊಂಡರೂ ನಾವು ನಮ್ಮ ಪ್ರತಿಭಟನೆ ಮುಂದುವರೆಸುತ್ತೇವೆ, ಒಪಿಡಿ ಬಂದ್ ಮಾಡಿಯೇ ಮಾಡುತ್ತೇವೆ ಎಂದು ಕಿರಿಯ ವೈದ್ಯರ ಹಠ ಹಿಡಿದಿದ್ದಾರೆ.

ಮಿಂಟೋ ವೈದ್ಯರ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿರುವ ಹಲ್ಲೆ ಕುರಿತಂತೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರು ಕಾರ್ಯಕರ್ತರು ಪೊಲೀಸರಿಗೆ ಶರಣಾಗುತ್ತಾರೆ ಎಂದು ಹೇಳಿಕೆ ನೀಡಿದ್ದರೂ ಕೂಡ ಯಾವುದೇ ಕಾರಣಕ್ಕೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಕಿರಿಯ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಕರವೇ ನಾರಾಯಣಗೌಡರು ಹೇಳುವುದೇನು?

ಕರವೇ ನಾರಾಯಣಗೌಡರು ಹೇಳುವುದೇನು?

ಕರವೇ ಕಾರ್ಯಕರ್ತರು ಜನರಿಗೆ ತೊಂದರೆಯಾಗದಿರಲು ತೀರ್ಮಾನಿಸಿದ್ದಾರೆ. ಶುಕ್ರವಾರ ಪೊಲೀಸರ ಮುಂದೆ ಶರಣಾಗಲಿದ್ದಾರೆ. "ವೈದ್ಯರ ಮುಷ್ಕರಕ್ಕೆ ಹೆದರಿ ಈ ತೀರ್ಮಾನವನ್ನು ತೆಗೆದುಕೊಳ್ಳುತ್ತಿಲ್ಲ. ಜನರಿಗೆ ತೊಂದರೆಯಾಗದಿರಲು ಈ ತೀರ್ಮಾನ ಮಾಡಿದ್ದೇವೆ" ಎಂದು ಸ್ಪಷ್ಟಪಡಿಸಿದರು. ಕರವೇ ಕಾರ್ಯಕರ್ತರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ನಡೆಸುತ್ತಿರುವ ಮುಷ್ಕರ 8ನೇ ದಿನಕ್ಕೆ ಕಾಲಿಟ್ಟಿದೆ.

ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು : ನಾರಾಯಣ ಗೌಡಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು : ನಾರಾಯಣ ಗೌಡ

ರಾಜ್ಯದಾದ್ಯಂತ ಆಸ್ಪತ್ರೆಗಳ ಒಪಿಡಿ ಬಂದ್

ರಾಜ್ಯದಾದ್ಯಂತ ಆಸ್ಪತ್ರೆಗಳ ಒಪಿಡಿ ಬಂದ್

ಕಿರಿಯ ವೈದ್ಯರು ಕಳೆದ ಒಂದು ವಾರದಿಂದ ನಡೆಸುತ್ತಿರುವ ಪ್ರತಿಭಟನೆಗೆ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಂಬಲ ನೀಡಲಿವೆ. ರಾಜ್ಯಾದ್ಯಂತ ಶುಕ್ರವಾರ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಬಂದ್ ಮಾಡಿ ಪ್ರತಿಭಟನೆ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ.

ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ, ಫನಾ ಸೇರಿದಂತೆ ವಿವಿಧ ಸಂಘಟನೆಗಳು ಸಾಥ್ ನೀಡುತ್ತಿವೆ. ಶುಕ್ರವಾರ ಬೆಳಗ್ಗೆ 6ರಿಂದ ಒಪಿಡಿ ಬಂದ್ ಮಾಡಲು ಐಎಂಎ ಕರೆ ನೀಡಿದೆ.

ವೈದ್ಯರ ನಡೆಯಿಂದ ರೋಗಿಗಳಿಗೆ ತೊಂದರೆ

ವೈದ್ಯರ ನಡೆಯಿಂದ ರೋಗಿಗಳಿಗೆ ತೊಂದರೆ

ಕರವೇ ಹಾಗೂ ವೈದ್ಯರ ಜಗಳದಿಂದ ಚಿಕಿತ್ಸೆಗೆ ಬರುತ್ತಿರುವ ರೋಗಿಗಳಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದಾರೆ. ಇನ್ನೂ ಶುಕ್ರವಾರದವರೆಗೆ ಕಾದು ನೋಡಲು ನಿರ್ಧರಿಸಿರುವ ಕಿರಿಯ ವೈದ್ಯರು, ಶುಕ್ರವಾರದೊಳಗೆ ಬೇಡಿಕೆ ಈಡೇರದಿದ್ದರೆ, ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡುವ ನಿರ್ಧಾರ ಮಾಡಿದ್ದಾರೆ.

ಗಂಭೀರ ಸ್ವರೂಪ ಪಡೆದ ವೈದ್ಯರ ಮುಷ್ಕರ: ನಾಳೆ ರಾಜ್ಯದಾದ್ಯಂತ ಒಪಿಡಿ ಬಂದ್ಗಂಭೀರ ಸ್ವರೂಪ ಪಡೆದ ವೈದ್ಯರ ಮುಷ್ಕರ: ನಾಳೆ ರಾಜ್ಯದಾದ್ಯಂತ ಒಪಿಡಿ ಬಂದ್

ಪ್ರತಿಭಟನೆ ಮುಂದುವರಿಕೆ

ಪ್ರತಿಭಟನೆ ಮುಂದುವರಿಕೆ

ಕರ್ನಾಟಕ ರಕ್ಷಣಾ ವೇದಿಕೆಯವರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಇಂದು ಮತ್ತೆ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ವಾಣಿವಿಲಾಸ, ವಿಕ್ಟೋರಿಯಾ, ಮಿಂಟೋ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ವೈದ್ಯರ ಮುಷ್ಕರ ದಿನೇ ದಿನೇ ತಾರಕಕ್ಕೇರುತ್ತಿದೆ. ಇಂದು ವೈದ್ಯರು ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಿದ್ದಾರೆ. ನವೆಂಬರ್​ 8ರಂದು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್​ ಮಾಡುವ ಸಾಧ್ಯತೆ ಇದೆ. ಸರ್ಕಾರಿ ವೈದ್ಯರಿಗೆ ಖಾಸಗಿ ವೈದ್ಯರು ಸಹ ಬೆಂಬಲ ನೀಡುತ್ತಿದ್ದಾರೆ.

English summary
Minto Hospital Doctors Said that If Karave Pleaded Guilty But Protest Did Not Stop.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X