• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಿಕೆ

|

ಬೆಂಗಳೂರು, ಮೇ 4: ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ನಿಗದಿಯಂತೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಿಕೆಯಾಗಿದೆ.

   Corona ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ | Oneindia Kannada

   ಈ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಲಾಗಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ನೇರವಾಗಿ ಉತ್ತೀರ್ಣ ಮಾಡಲಾಗುವುದು. ಕೋವಿಡ್-19 ಪ್ರಕರಣ ಹೆಚ್ಚಳದಿಂದಾಗಿ ಎಲ್ಲ ಶಿಕ್ಷಕರು ಮನೆಯಿಂದ ಕೆಲಸ ಮಾಡಬೇಕೆ ಎಂದು ತಿಳಿಸಿದ್ದಾರೆ.

   ಈಗಾಗಲೇ ಶಿಕ್ಷಣ ಇಲಾಖೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಲು ತಯಾರಿ ಮಾಡಿಕೊಳ್ಳಲಾಗುತ್ತಿತ್ತು. ಆದರೆ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

   ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡುವ ಬಗ್ಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹಾಗೂ ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ ಅಧಿಕಾರಿಗಳ ಜತೆ ಇಂದು ಸಭೆ ಕರೆದಿದ್ದರು.

   ಮೇ 24ರಿಂದ ಆರಂಭವಾಗಬೇಕಾಗಿದ್ದ ಪಿಯುಸಿ ಪರೀಕ್ಷೆಯನ್ನು ಮುಂದೂಡುವ ನಿರ್ಧಾರವನ್ನು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ನಡೆಸಿದ ಬಳಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನಿರ್ಧಾರ ಕೈಗೊಂಡರು.

   ಮುಂದೂಡಿರುವ ಪರೀಕ್ಷೆಗೆ 15-20 ದಿನಗಳಿಗೂ ಮೊದಲೇ ದಿನಾಂಕ ಪ್ರಕಟಿಸುವುದಾಗಿ ಸುರೇಶ್ ಕುಮಾರ್ ಘೋಷಣೆ ಮಾಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಉತ್ತೀರ್ಣಗೊಳಿಸಲಯ ತೀರ್ಮಾನಿಸಲಾಯಿತು.

   English summary
   Due to the increasing number of coronavirus cases in Karnataka, the 2nd PUC Exam to be postponed.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X