ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿನಿಂದ ಪಿಯುಸಿ ಪೂರಕ ಪರೀಕ್ಷೆ ಆರಂಭ: ಸಂಪೂರ್ಣ ವೇಳಾಪಟ್ಟಿ

|
Google Oneindia Kannada News

2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ. ಆಗಸ್ಟ್ 12 ರಿಂದ ಆಗಸ್ಟ್ 25ರ ವರೆಗೆ ಪರೀಕ್ಷೆ ನಡೆಯಲಿದೆ. ಸುಗಮವಾಗಿ ಪರೀಕ್ಷೆಯನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಗಳಲ್ಲಿ ನಡೆಸಲಿದೆ. ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ಮತ್ತು ಮಧ್ಯಾಹ್ನದ ಪರೀಕ್ಷೆಯು ಮಧ್ಯಾಹ್ನ 2:15 ರಿಂದ ಸಂಜೆ 5:30 ರವರೆಗೆ ನಡೆಯಲಿದೆ.

ಪಿಯುಸಿ ಫಲಿತಾಂಶ; ಹುಬ್ಬಳ್ಳಿಯ ವಿದ್ಯಾರ್ಥಿನಿಗೆ 3ನೇ Rankಪಿಯುಸಿ ಫಲಿತಾಂಶ; ಹುಬ್ಬಳ್ಳಿಯ ವಿದ್ಯಾರ್ಥಿನಿಗೆ 3ನೇ Rank

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಲವು ನಿಯಮಗಳನ್ನು ಪಾಲಿಸಲು ಸೂನಚೆ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪಡೆಯಲು ಪ್ರವೇಶ ಪತ್ರ ಕಡ್ಡಾಯವಾಗಿರುತ್ತದೆ. ಮೊಬೈಲ್‌ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Karnataka 2nd Puc Supplementary Exam 2022 Starting From Today: Here The Complete Exam Schedule

ಪದವಿ ಪೂರ್ವ ಶಿಕ್ಷಣ ಇಲಾಖೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿಯನ್ನು ಸಹ ರಚಿಸಲಾಗಿದೆ. ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಇರಲಿದ್ದಾರೆ.

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
ಪ್ರಶ್ನೆಪತ್ರಿಕೆಯನ್ನು ಪರಿಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್‌ ಅಳವಡಿಸಲು ಸೂಚನೆ ನೀಡಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಕ್ಕೆ ಪೊಲೀಸ್‌ ಬಂದೋಬಸ್ತ್‌ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿಯೂ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ನೇಮಿಸಲಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರ ತೀರಿಸುವ ಮೂಲಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದೆ.

Karnataka 2nd Puc Supplementary Exam 2022 Starting From Today: Here The Complete Exam Schedule

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ
ಆಗಸ್ಟ್ 12, 2022 : ಕನ್ನಡ, ಅರೇಬಿಕ್ (10:15 AM ರಿಂದ 1:30 PM)
ಆಗಸ್ಟ್ 13, 2022 : ಭೂಗೋಳ, ಮನೋವಿಜ್ಞಾನ, ಭೌತಶಾಸ್ತ್ರ (10:15 AM ರಿಂದ 1:30 PM)
ಆಗಸ್ಟ್ 16, 2022 : ಹಿಂದಿ (10:15 AM ರಿಂದ 1:30 PM)
ಆಗಸ್ಟ್ 16, 2022 : ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ (2:15 ರಿಂದ 5:30 PM)
ಆಗಸ್ಟ್ 17, 2022 : ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ (10:15 AM ರಿಂದ 1:30 PM)
ಆಗಸ್ಟ್ 18, 2022 : ಅಕೌಂಟೆನ್ಸಿ, ಭೂವಿಜ್ಞಾನ, ಶಿಕ್ಷಣ, ಗೃಹ ವಿಜ್ಞಾನ (10:15 AM ರಿಂದ 1:30 PM)
ಆಗಸ್ಟ್ 19, 2022 : ರಾಜ್ಯಶಾಸ್ತ್ರ, ಗಣಿತ (10:15 AM ರಿಂದ 1:30 PM)
ಆಗಸ್ಟ್ 20, 2022 : ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯಾಪಾರ ಅಧ್ಯಯನ (10:15 AM ರಿಂದ 1:30 PM)
ಆಗಸ್ಟ್ 22, 2022 : ಇಂಗ್ಲಿಷ್ (10:15 AM ರಿಂದ 1:30 PM)
ಆಗಸ್ಟ್ 22, 2022 : ಮಾಹಿತಿ ತಂತ್ರಜ್ಞಾನ, ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಸೌಂದರ್ಯ ಮತ್ತು ಸ್ವಾಸ್ಥ್ಯ (2:15 ರಿಂದ 5:30 PM)
ಆಗಸ್ಟ್ 23, 2022 : ಅರ್ಥಶಾಸ್ತ್ರ, ಜೀವಶಾಸ್ತ್ರ (10:15 AM ರಿಂದ 1:30 PM)
ಆಗಸ್ಟ್ 24, 2022 : ಇತಿಹಾಸ, ಅಂಕಿಅಂಶಗಳು (10:15 AM ರಿಂದ 1:30 PM)
ಆಗಸ್ಟ್ 25, 2022 : ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಸಮಾಜಶಾಸ್ತ್ರ (10:15 AM ರಿಂದ 1:30 PM)

Recommended Video

Zimbabwe ವಿರುದ್ಧದ ಸರಣಿಗೆ K L rahul ನಾಯಕ. BCCI ನಿಂದ ಹೊಸ‌ ತಂಡದ ಆಯ್ಕೆ | *Cricket | OneIndia Kannada

English summary
Karnataka 2nd PUC Supplementary Exam 2022 would be commencing from today, Today, students will be appearing for the Kannada and Arabic language papers. The complete exam schedule has been given below.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X