ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೆಹಲಿ ಯಶಸ್ಸು; ಬಿಬಿಎಂಪಿ ಚುನಾವಣೆ ಬಗ್ಗೆ ಉತ್ಸುಕವಾದ ಕರ್ನಾಟಕ ಆಪ್

|
Google Oneindia Kannada News

ಬೆಂಗಳೂರು, ಫೆಬ್ರವರಿ 12: ಕರ್ನಾಟಕ ಆಮ್ ಆದ್ಮಿ ಪಕ್ಷ, ಮುಂಬರಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಬಿರುಸಿನ ತಯಾರಿ ಆರಂಭಿಸಿದೆ. ಈ ಪ್ರಯುಕ್ತ ಬೆಂಗಳೂರಿನಲ್ಲಿ ಐದು ದಿನಗಳ ಕಾಲ ಪಾದಯಾತ್ರೆ ಅಭಿಯಾನವನ್ನು ಆರಂಭಿಸಿದೆ.

ನಗರವಾಸಿಗಳಲ್ಲಿ ಎಎಪಿ ಹೆಚ್ಚು ಭರವಸೆ ಮೂಡಿಸುತ್ತಿದೆ. ದೆಹಲಿ ಚುನಾವಣೆಯ ಭರ್ಜರಿ ಯಶಸ್ಸಿನಲ್ಲಿರುವ ಆಪ್ ಕಾರ್ಯರ್ಕತರು ಬುಧವಾರ ನಗರದ ಮೌರ್ಯ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಪಾದಯಾತ್ರೆಗೆ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಚಾಲನೆ ನೀಡಿದರು.

ದೆಹಲಿ ಚುನಾವಣೆ; ಕೇಜ್ರಿವಾಲ್ ಗೆಲುವಿಗೆ ಪ್ರಮುಖ 10 ಕಾರಣಗಳುದೆಹಲಿ ಚುನಾವಣೆ; ಕೇಜ್ರಿವಾಲ್ ಗೆಲುವಿಗೆ ಪ್ರಮುಖ 10 ಕಾರಣಗಳು

"ನೂತನ ವಿಧಾನಗಳನ್ನು ಅಳವಡಿಸಿಕೊಂಡು, ಹೊಸ ಬೆಂಗಳೂರನ್ನು ನಿರ್ಮಿಸಲು ಸಂಕಲ್ಪತೊಟ್ಟಿರುವ ಆಮ್ ಆದ್ಮಿ ಪಕ್ಷವು ಮುಂಬರುವ ಬಿಬಿಎಂಪಿ ಚುನಾವಣೆಗೆ ವ್ಯಾಪಕ ಕಾರ್ಯಯೋಜನೆ ರೂಪಿಸಿಕೊಂಡಿದೆ. ಎಲ್ಲಾ ವಾರ್ಡ್ಗಳಲ್ಲಿಯೂ ಹೊಸಬೆಂಗಳೂರು ಜನಸಂವಾದ ಕಾರ್ಯಕ್ರಮಗಳ ಮೂಲಕ ನಗರದ ಸಮಸ್ಯೆಗಳ ಪರಿಹಾರಕ್ಕೆ ನಾವೀನ್ಯ ಯೋಜನೆಗಳನ್ನು ರೂಪಿಸುತ್ತಿದ್ದೇವೆ' ಎಂದು ಆಪ್ ಮುಖಂಡರು ಈ ವೇಳೆ ಹೇಳಿದರು.

ನಗರದಾದ್ಯಂತ ಪಾದಯಾತ್ರೆ

ನಗರದಾದ್ಯಂತ ಪಾದಯಾತ್ರೆ

"ಹಲವಾರು ಸಮಸ್ಯೆಗಳಿಂದ ರೋಸಿಹೋಗಿರುವ ಬೆಂಗಳೂರಿಗರ ಸಮಸ್ಯೆಗಳು ಹಾಗೂ ಕುಂದು ಕೊರತೆಗಳನ್ನು ಅರಿತು, ಜನರ ಕನಸಿನ ಹೊಸ ಬೆಂಗಳೂರನ್ನು ಕಟ್ಟುವುದರಲ್ಲಿ ಪಕ್ಷದೊಂದಿಗೆ ಜನಸಾಮಾನ್ಯರನ್ನು ಒಳಗೊಳ್ಳುವ, ಬೆಂಗಳೂರನ್ನು ವಿಶ್ವದರ್ಜೆಯ ಮಹಾನಗರವನ್ನಾಗಿಸಲು ಅವರ ಸಲಹೆಗಳನ್ನು ಪಡೆಯುವ ಉದ್ದೇಶದಿಂದ ನಗರದಾದ್ಯಂತ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ' ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ ತಿಳಿಸಿದರು.

ಬಿಬಿಎಂಪಿ ಚುನಾವಣೆಯಲ್ಲಿ ಆಪ್‌

ಬಿಬಿಎಂಪಿ ಚುನಾವಣೆಯಲ್ಲಿ ಆಪ್‌

"ಪಕ್ಷದ ಕೆಲಸಗಳು, ಸಿದ್ದಾಂತಗಳು, ಕಾರ್ಯಶೈಲಿಯನ್ನು ನೋಡಿ ಪಕ್ಷದ ಜೊತೆ ಕೈಜೋಡಿಸುವ ಜನರಿಗೆ ಪಕ್ಷದ ಸದಸ್ಯತ್ವವನ್ನು ನೀಡುವುದು ಹಾಗೂ ಸಮರ್ಥ, ಸೇವಾ ಮನೋಭಾವವುಳ್ಳ ಹಾಗೂ ಪಕ್ಷದ ಸಿದ್ಧಾಂತಕ್ಕೆ ಅನುಗುಣವಾದ ಅಭ್ಯರ್ಥಿಗಳನ್ನು ಜನರ ಅಭಿಮತದೊಂದಿಗೆ ಆಯ್ಕೆ ಮಾಡಿ ಬಿಬಿಎಂಪಿ ಚುನಾವಣೆಯಲ್ಲಿ ಕಣಕ್ಕಿಳಿಸುವುದು ಪಾದಯಾತ್ರೆಯ ಉದ್ದೇಶವಾಗಿದೆ' ಎಂದು ಪಕ್ಷದ ಬಿಬಿಎಂಪಿ ಪ್ರಚಾರ ಉಸ್ತುವಾರಿ ಶಾಂತಲಾ ದಾಮ್ಲೆ ತಿಳಿಸಿದರು.

ದೆಹಲಿ ಚುನಾವಣೆ; ಕರ್ನಾಟಕ ಆಪ್ ಕಾರ್ಯಕರ್ತರ ಸಂಭ್ರಮಾಚರಣೆದೆಹಲಿ ಚುನಾವಣೆ; ಕರ್ನಾಟಕ ಆಪ್ ಕಾರ್ಯಕರ್ತರ ಸಂಭ್ರಮಾಚರಣೆ

ಕರ್ನಾಟಕ ಆಪ್‌ನ ಸಂಭ್ರಮಾಚರಣೆ

ಕರ್ನಾಟಕ ಆಪ್‌ನ ಸಂಭ್ರಮಾಚರಣೆ

ಕರ್ನಾಟಕದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮಂಗಳವಾರ ದೆಹಲಿಯ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ನಗರದ ಜೈನ್ ಭವನದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ್ದರು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಪಕ್ಷದ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ, "ಇದು ಕೇವಲ ಚುನಾವಣಾ ಫಲಿತಾಂಶವಷ್ಟೇ ಅಲ್ಲ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಡಿರುವ ಅಭಿವೃದ್ಧಿ ಕಾರ್ಯಗಳ ಫಲಿತಾಂಶವೂ ಹೌದು. ಜನರು ಪಕ್ಷದ ಮೇಲೆ ಹೆಚ್ಚಿನ ಭರವಸೆ ಮತ್ತು ನಂಬಿಕೆಯನ್ನು ಇಟ್ಟಿದ್ದಾರೆ. ಕರ್ನಾಟಕದಲ್ಲಿಯೂ ಜನರ ನಂಬಿಕೆಯನ್ನು ಗಟ್ಟಿಗೊಳಿಸಿ, ಹೊಸ ಭರವಸೆಯನ್ನು ಮೂಡಿಸಲು ನಾವೆಲ್ಲರೂ ಮತ್ತಷ್ಟು ಕಠಿಬದ್ದರಾಗಿ ಕೆಲಸ ಮಾಡಬೇಕು' ಎಂದರು.

ಪಾದಯಾತ್ರೆಯಲ್ಲಿ ಇದ್ದ ಮುಖಂಡರು

ಪಾದಯಾತ್ರೆಯಲ್ಲಿ ಇದ್ದ ಮುಖಂಡರು

ಪಕ್ಷದ ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನೀ, ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ, ಬಿಬಿಎಂಪಿ ಚುನಾವಣಾ ಕ್ಯಾಂಪೇನ್ ಉಸ್ತುವಾರಿಗಳಾದ ಶಾಂತಲಾ ದಾಮ್ಲೆ, ರಾಜ್ಯ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್, ಪಕ್ಷದ ಬಿಬಿಎಂಪಿ ರಾಜಕೀಯ ಚಟುವಟಿಕೆಳ ಉಸ್ತುವಾರಿಗಳಾದ ವಿ. ಲಕ್ಷ್ಮೀಕಾಂತ್ ರಾವ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾದಯತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

English summary
Karnataka AAP Workers Eye On Upcoming BBMP Election. Wednesday AAP Workers Start BBMP Election Awarness Campaign In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X