ಪ್ರದೀಪ್ ಆತ್ಮಹತ್ಯೆ, ಪೊಲೀಸರ ವಿರುದ್ಧ ಎಎಪಿ ಪ್ರತಿಭಟನೆ

ಬೆಂಗಳೂರು, ಆ.26 : ಕ್ಯಾಬ್ ಚಾಲಕ ಪ್ರದೀಪ್ ಆತ್ಮಹತ್ಯೆಗೆ ಪೊಲೀಸರ ಕಿರುಕುಳವೇ ಕಾರಣ ಎಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೋಮವಾರ ಸಂಜೆ ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.

ಆತ್ಮಹತ್ಯೆ ಮಾಡಿಕೊಂಡ ಯುವಕ ಪ್ರದೀಪ್ (24) ಮನೆಗೆ ಭೇಟಿ ನೀಡಿದ ಕಾರ್ಯಕರ್ತರು ಯುವಕನ ಸಾವಿಗೆ ಸಂತಾಪ ವ್ಯಕ್ತಪಡಿಸುತ್ತಾ, ಅವನ ಮನೆಯವರಿಗೆ ಈ ಪ್ರಕರಣದಲ್ಲಿ ಸೂಕ್ತ ನ್ಯಾಯ ದೊರಕುವವರೆಗೂ ತಮ್ಮ ಜೊತೆಗೆ ಇರುವುದಾಗಿ ಭರವಸೆ ನೀಡಿದರು.

ನಂತರ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಆಗ್ನೇಯ ವಿಭಾಗದ ಡಿಸಿಪಿ ರೋಹಿಣಿ ಅವರನ್ನು ಭೇಟಿ ಮಾಡಿ, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಯುವಕ ಪ್ರದೀಪ್ ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಆಗ್ರಹಿಸಿದರು. [ಕೆಂಪೇಗೌಡ ನಗರ ಪೊಲೀಸ್ ಚಿತ್ರಹಿಂಸೆ ಪ್ರಕರಣ]

ಇನ್ನು ಪ್ರಕರಣಕ್ಕೆ ಕೆಂಪೇಗೌಡನಗರ ಠಾಣೆ ಪೊಲೀಸರ ದೌರ್ಜನ್ಯವೇ ಕಾರಣ ಎಂಬ ಅಂಶವು ಇಲಾಖಾ ತನಿಖೆ­ಯಿಂದ ಬೆಳಕಿಗೆ ಬಂದಿದೆ. ಈ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಅವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ವರದಿ ನೀಡಿದ್ದಾರೆ. ಪತ್ರಿಭಟನೆಯ ಚಿತ್ರಗಳು

ಕೆಂಪೇಗೌಡ ಠಾಣೆಯ ಮುಂದೆ ಪ್ರತಿಭಟನೆ

ಕೆಂಪೇಗೌಡ ಠಾಣೆಯ ಮುಂದೆ ಪ್ರತಿಭಟನೆ

ಕೆಂಪೇಗೌಡ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ಯಾಬ್ ಚಾಲಕ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಪೊಲೀಸರ ಕಿರುಕುಳವೇ ಕಾರಣ ಎಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೋಮವಾರ ಸಂಜೆ ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.

ಶನಿವಾರ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದವರು

ಶನಿವಾರ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದವರು

ಕೆಂಪೇಗೌಡ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀಪುರದಲ್ಲಿ ಶನಿವಾರ ಕ್ಯಾಬ್ ಚಾಲಕ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರಿಂದ ರೊಚ್ಚಿಗೆದ್ದ ಜನರು ಪೊಲೀಸರ ಮೇಲೆ ಹಲ್ಲೆಮಾಡಿ, ಚೀತಾ ವಾಹನಕ್ಕೆ ಬೆಂಕಿ ಹಚ್ಚಿದ್ದರು.

ಡಿಸಿಪಿ ಭೇಟಿ ಮಾಡಿದ ಕಾರ್ಯಕರ್ತರು

ಡಿಸಿಪಿ ಭೇಟಿ ಮಾಡಿದ ಕಾರ್ಯಕರ್ತರು

ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಆಗ್ನೇಯ ವಿಭಾಗದ ಡಿಸಿಪಿ ರೋಹಿಣಿ ಅವರನ್ನು ಭೇಟಿ ಮಾಡಿ, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದರು

ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದರು

ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಯುವಕ ಪ್ರದೀಪ್ ಮನೆಗೆ ಭೇಟಿ ನೀಡಿ ಯುವಕನ ಸಾವಿಗೆ ಸಂತಾಪ ವ್ಯಕ್ತಪಡಿಸಿದರು ಮತ್ತು ಮನೆಯವರಿಗೆ ಈ ಪ್ರಕರಣದಲ್ಲಿ ಸೂಕ್ತ ನ್ಯಾಯ ದೊರಕುವವರೆಗೂ ತಮ್ಮ ಜೊತೆಗೆ ಇರುವುದಾಗಿ ಭರವಸೆ ನೀಡಿದರು.

ಭಾರೀ ಪ್ರತಿಭಟನೆ ನಡೆದಿತ್ತು

ಭಾರೀ ಪ್ರತಿಭಟನೆ ನಡೆದಿತ್ತು

ಕೆಂಪೇಗೌಡ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀಪುರದಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ನಂತರ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ಪ್ರದೀಪ್ ಅಂತ್ಯಕ್ರಿಯೆಯನ್ನು ಚಾಮರಾಜಪೇಟೆ ಚಿತಾಗಾರದಲ್ಲಿ ಭಾನುವಾರ ನಡೆಸಲಾಯಿತು.

ಆಯುಕ್ತರ ಕೈ ಸೇರಿದ ವರದಿ

ಆಯುಕ್ತರ ಕೈ ಸೇರಿದ ವರದಿ

ಪ್ರದೀಪ್ ಆತ್ಮಹತ್ಯೆಗೆ ಕೆಂಪೇಗೌಡನಗರ ಠಾಣೆ ಪೊಲೀಸರ ದೌರ್ಜನ್ಯವೇ ಕಾರಣ ಎಂಬ ಅಂಶವು ಇಲಾಖಾ ತನಿಖೆ­ಯಿಂದ ಬೆಳಕಿಗೆ ಬಂದಿದೆ. ಈ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಅವರು ನಗರ ಪೊಲೀಸ್‌ ಕಮಿಷ­ನರ್‌ಗೆ ಸೋಮವಾರ ವರದಿ ಸಲ್ಲಿಸಿದ್ದಾರೆ. ಇನ್‌ಸ್ಪೆಕ್ಟರ್‌ ಸಿ.ಡಿ.ನಾಗರಾಜ್‌, ಕಾನ್‌ಸ್ಟೆಬಲ್‌ಗಳಾದ ಮಹೇಶ್‌ ಮತ್ತು ಪ್ರತಾಪ್‌ಕುಮಾರ್‌ ಅವರು ಪ್ರದೀಪ್‌ ಅವರನ್ನು ಮೂರು ದಿನಗಳ ಕಾಲ ಠಾಣೆಯಲ್ಲಿ ಅಕ್ರಮ­ವಾಗಿ ಬಂಧನದಲ್ಲಿ ಇರಿಸಿಕೊಂಡಿ­ದ್ದರು ಎಂದು ವರದಿಯಲ್ಲಿ ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+