ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಟೋ, ಕ್ಯಾಬ್ ಚಾಲಕರ ಖಾತೆಗೆ ₹ 5 ಸಾವಿರ: ಸಿಎಂ ಯಡಿಯೂರಪ್ಪ ಭರವಸೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 30: ಅಟೋ, ಕ್ಯಾಬ್, ಅರೆ ಸರಕು ಸಾಗಣೆ ಚಾಲಕರಿಗೆ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಆಮ್ ಆದ್ಮಿ ಪಕ್ಷ ಕರ್ನಾಟಕದ ರಾಜ್ಯ ಆಟೋ ಘಟಕದಿಂದ ಗುರುವಾರ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಮೇ 3ನೇ ತಾರೀಕಿನ ಒಳಗೆ 5 ಸಾವಿರ ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಭರವಸೆ ನೀಡಿದರು ಎಂದು ಎಎಪಿ ಯ ಮಾಧ್ಯಮ ಸಂಚಾಲಕರು ತಿಳಿಸಿದ್ದಾರೆ.

Recommended Video

ಬಾಲಿವುಡ್ ದಂತಕಥೆ ರಿಷಿ ಕಪೂರ್ ಇನ್ನಿಲ್ಲ | Rishi Kapoor Filmibeat

ಬೆಂಗಳೂರು ನಗರ ಒಂದರಲ್ಲೇ ಸುಮಾರು 1.5 ಲಕ್ಷದಷ್ಟು ಆಟೋ ಚಾಲಕರು, 1 ಲಕ್ಷದಷ್ಟು ಆಟೋ ಮೆಕ್ಯಾನಿಕ್‌ಗಳು, 85 ಸಾವಿರದಷ್ಟು ಕ್ಯಾಬ್ ಚಾಲಕರಿದ್ದಾರೆ. ಇವರಲ್ಲಿ ಹೆಚ್ಚಿನವರು ಬ್ಯಾಂಕ್‌ನಿಂದ ವಾಹನ ಸಾಲ, ಖಾಸಗಿ ಲೇವಾದೇವಿಗಾರರಿಂದ, ಫೈನಾನ್ಸ್‌ಗಳಿಂದ ಹಣ ಪಡೆದು ತಿಂಗಳ, ತಿಂಗಳ ಕಂತುಗಳಲ್ಲಿ ಹಣವನ್ನು ಕಟ್ಟುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದವರು, ಅಂದಂದಿನ ದುಡಿಮೆಯನ್ನೇ ನಂಬಿಕೊಂಡವರು ಲಾಕ್‌ಡೌನ್‌ನಿಂದ ತೊಂದರೆಗೆ ಒಳಗಾಗಿದ್ದಾರೆ.

ಆಟೋ, ಕ್ಯಾಬ್, ಚಾಲಕರಿಗೆ ಆರ್ಥಿಕ ಸಹಾಯ: ಎಎಪಿ ಮನವಿಆಟೋ, ಕ್ಯಾಬ್, ಚಾಲಕರಿಗೆ ಆರ್ಥಿಕ ಸಹಾಯ: ಎಎಪಿ ಮನವಿ

ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ದೆಹಲಿ ಸರಕಾರ ಈಗಾಗಲೇ ಆಟೋ, ಟ್ಯಾಕ್ಸಿ ಚಾಲಕರಿಗೆ ₹5,000 ರುಪಾಯಿಗಳ ಸಹಾಯ ನಿಧಿಯನ್ನು ನೀಡಿದೆ. ಈ ಆರ್ಥಿಕ ನೆರವಿನ ಲಾಭ ಗ್ರಾಮೀಣ್ ಸೇವಾ, ಇ-ರಿಕ್ಷಾಗಳು, ಕ್ಯಾಬ್, ಶಾಲಾ ವಾಹನಗಳು ಮೊದಲಾದ ಅರೆ ಸಾಗಣೆ ವಾಹನಗಳ ಚಾಲಕರಿಗೆ ನೀಡಲಾಗಿದೆ ಇದೇ ಯೋಜನೆಯನ್ನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ಬೇಡಿಕೆ ಇಡಲಾಯಿತು.

Karnataka AAP Party Demand 5000 Rupees For Auto And Cab Drivers

ರಾಜ್ಯ ಆಟೋ ಘಟಕದ ಅಧ್ಕಕ್ಷರಾದ ಅಯೂಬ್ ಖಾನ್, ಪಕ್ಷದ ಹಿರಿಯ ಮುಖಂಡರಾದ ವಕೀಲ ಲಕ್ಷ್ಮೀಕಾಂತ್ ರಾವ್ ಹಾಗೂ ವೆಂಕಟೇ ಗೌಡ ಅವರು ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ ಬೇಡಿಕೆಗಳನ್ನು ಸಲ್ಲಿಸಿದರು.

English summary
Karnataka AAP Party Demand 5000 Rupees For Auto And Cab Drivers. CM Yediyurappa gives assurance on it. before may 5th we will deposit 5000 rupees to cab and auto drivers, yediyurappa said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X