ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಳ' : ಕ್ರಮಕ್ಕೆ ಆಗ್ರಹ

|
Google Oneindia Kannada News

ಬೆಂಗಳೂರು, ಮೇ 4: ಮಕ್ಕಳ ಮೇಲಿನ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ದೇಶದಲ್ಲಿ ಹೆಚ್ಚೆಚ್ಚು ಬೆಳಕಿಗೆ ಬರುತ್ತಿದ್ದು ಲಾಕ್ ಡೌನ್ ಸಮಯದಲ್ಲಿ ಇದರ ಪ್ರಮಾಣ ಏರಿಕೆಯಾಗಿದೆ. ಲಾಕ್ ಡೌನ್ ನಿಂದಾಗಿ ಜನರು ಮನೆಗಳಲ್ಲಿಯೇ ಉಳಿದುಕೊಳ್ಳುತ್ತಿರುವ ಕಾರಣ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕ ಅತ್ಯಧಿಕ ಸಂಖ್ಯೆಯ ಪ್ರಕರಣಗಳನ್ನು ದಾಖಲಿಸಿದ್ದು ಕರ್ನಾಟಕ ಸರಕಾರ ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷ ಸರ್ಕಾರಕ್ಕೆ ಒತ್ತಾಯಿಸಿದೆ.

ಈ ಕುರಿತು ಸೋಮವಾರ ಮಾಧ್ಯಮ ಪ್ರಕಟಣೆ ನೀಡಿರುವ ಪಕ್ಷ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಿರುವ ಅಂಕಿ ಅಂಶದ ಪ್ರಕಾರ ಲಾಕ್ ಡೌನ್ ಸಂದರ್ಭದಲ್ಲಿ ಕರ್ನಾಟಕದಲ್ಲಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳು 312. ಇವು ದಾಖಲಾಗಿರುವ ಪ್ರಕರಣಗಳು ಅಷ್ಟೇ ಅಗಿದ್ದು ದಾಖಲಾಗದ ಪ್ರಕರಣಗಳ ಸಂಖ್ಯೆ ನಿಗೂಡವಾಗಿದೆ. ಕರ್ನಾಟಕದ ನಂತರ ದಕ್ಷಿಣ ಭಾರತದ ರಾಜ್ಯಗಳಲ್ಲಿ ತಮಿಳುನಾಡು ಎರಡನೇ ಸ್ಥಾನದಲ್ಲಿ ಇದ್ದು, 224 ಪ್ರಕರಣಗಳು ಪತ್ತೆಯಾಗಿವೆ. ನಂತರ ಕೇರಳ, ಆಂದ್ರ ಪ್ರದೇಶ, ತೆಲಂಗಾಣ ಹಾಗೂ ಪಾಂಡಿಚೇರಿಯಲ್ಲಿ ಕ್ರಮವಾಗಿ 224, 181, 129, 10 ಮತ್ತು 7 ಪ್ರಕರಣಗಳು ಪತ್ತೆಯಾಗಿವೆ ಎಂದಿದೆ.

ಮಕ್ಕಳ ಮೇಲಿನ ಲೈಂಗಿಕ ಹಾಗೂ ದೈಹಿಕ ದೌರ್ಜನ್ಯಗಳು ನಮ್ಮ ರಾಜ್ಯದಲ್ಲಿ ಏರಿಕೆಯಾಗಿರುವುದು ಕಳವಳವನ್ನು ಉಂಟು ಮಾಡಿದೆ. ಕರ್ನಾಟಕ ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ ( Karnataka State Crime Records Bureau) ಅಂಕಿ ಆಂಶದ ಪ್ರಕಾರ ಕರ್ನಾಟಕದಲ್ಲಿ 2018ಕ್ಕೆ ಹೋಲಿಸಿದರೆ 2019ರಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. 2019ರಲ್ಲಿ ಕರ್ನಾಟಕದಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ 2,091 ಮಕ್ಕಳ ಮೇಲಿನ ದೌರ್ಜನ್ಯಗಳು ಪತ್ತೆಯಾಗಿದ್ದು ಇವುಗಳಲ್ಲಿ 1,510 ಪ್ರಕರಣಗಳು ಲೈಂಗಿಕ ದೌರ್ಜನ್ಯಗಳಾಗಿವೆ. ಅಲ್ಲದೇ 9 ಪ್ರಕರಣಗಳು ಗುಂಪು ಅತ್ಯಾಚಾರ ಪ್ರಕರಣಗಳು! 2019ರಲ್ಲಿ 2018ಕ್ಕಿಂತ 145 ಪ್ರಕರಣಗಳು ಹೆಚ್ಚಾಗಿವೆ ಎಂದಿದೆ.

ಆಟೋ, ಕ್ಯಾಬ್ ಚಾಲಕರ ಖಾತೆಗೆ ₹ 5 ಸಾವಿರ: ಸಿಎಂ ಯಡಿಯೂರಪ್ಪ ಭರವಸೆಆಟೋ, ಕ್ಯಾಬ್ ಚಾಲಕರ ಖಾತೆಗೆ ₹ 5 ಸಾವಿರ: ಸಿಎಂ ಯಡಿಯೂರಪ್ಪ ಭರವಸೆ

ಪ್ರತೀ ದಿನ 109 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ

ಪ್ರತೀ ದಿನ 109 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National Crime Records Bureau) ಪ್ರಕಾರ ದೇಶದಲ್ಲಿ ಪ್ರತೀ ದಿನ 109 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಆದರೆ ಈ ಅಂಕಿ ಅಂಶಗಳು ಅನೇಕ ಮಿತಿಗಳನ್ನು ಹೊಂದಿದ್ದು ಪ್ರಕರಣಗಳು ಹೆಚ್ಚಿಗೆ ಇರುವ ಸಾಧ್ಯತೆಗಳು ಇವೆ. ಅನೇಕ ಪ್ರಕರಣಗಳು ಮರ್ಯಾದೆಗೆ ಅಂಜಿ ದಾಖಲಾಗದೆ ಉಳಿದಿವೆ ಎಂದಿದೆ.

ಮಕ್ಕಳಿಗೆ ಸುರಕ್ಷತೆ ಇಲ್ಲದ ಹಾಗೆ ಆಗಿದೆ

ಮಕ್ಕಳಿಗೆ ಸುರಕ್ಷತೆ ಇಲ್ಲದ ಹಾಗೆ ಆಗಿದೆ

ಈಗ ಲಾಕ್ ಡೌನ್ ನ ಸಣ್ಣ ಅವಧಿಯಲ್ಲಿ ದಾಖಲಾಗಿರುವ 312 ಪ್ರಕರಣಗಳು ಆತಂಕಕಾರಿಯಾಗಿವೆ. ಈ ಅವಧಿಯಲ್ಲಿ ದೌರ್ಜನ್ಯ ಮಾಡುವವರು ಕ್ರಿಯಾಶೀಲರಾಗಿದ್ದು ಮಕ್ಕಳಿಗೆ ಸುರಕ್ಷತೆ ಇಲ್ಲದ ಹಾಗೆ ಆಗಿದೆ. ಈ ಅವಧಿಯಲ್ಲಿ ನಡೆಯುವ ಅನೇಕ ದೌರ್ಜನ್ಯಗಳು ಮನೆಯಲ್ಲಿ ಮತ್ತು ಮಕ್ಕಳ ಆಸುಪಾಸಿನಲ್ಲಿ ಸಂಭವಿಸುತ್ತವೆ ಎಂದಿದೆ.

ಮುಚ್ಚಿ ಹಾಕಲು ಯತ್ನಿಸುತ್ತಾರೆ.

ಮುಚ್ಚಿ ಹಾಕಲು ಯತ್ನಿಸುತ್ತಾರೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಸರಕಾರವಾಗಲೀ, ಜನತೆಯಾಗಲೀ ಎಚ್ಚೆತ್ತಿಲ್ಲ. ಜನರು ಇವುಗಳನ್ನು ಗಂಭೀರವಾಗಿ ತೆಗೆದುಕೊಳ್ಳದೆ ಮುಚ್ಚಿ ಹಾಕಲು ಯತ್ನಿಸುತ್ತಾರೆ. ಹೀಗಾಗಿ ಅನೇಕ ಪ್ರಕರಣಗಳು ಪತ್ತೆಯಾಗುವುದಿಲ್ಲ. ಅದರಲ್ಲೂ ಗಂಡು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ದೌರ್ಜನ್ಯವೆಂದು ಪರಿಗಣಿಸದೇ ಇರುವುದು ಖೇದಕರ. ಮಕ್ಕಳ ಮೇಲೆ ನಡೆಯುವ ಲೈಂಗಿಕ ಧಾಳಿಗಳು ಅವರ ದೈಹಿಕ, ಮಾನಸಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮುಂದೆ ಅದು ಅವರ ಭವಿಷ್ಯ ನಾಶವಾಗಲು ಕಾರಣವಾಗುತ್ತದೆ. ಅವರ ಲೈಂಗಿಕ ಬದುಕಿನ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದಿದೆ.

ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು

ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು

ಸರಕಾರ ಲಾಕ್ ಡೌನ್ ನಲ್ಲಿ ಆರೋಗ್ಯ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಲು ನಡೆಸುತ್ತಿರುವ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಮನೆಗಳಲ್ಲಿ, ಮನೆಗಳ ಸುತ್ತ ಮುತ್ತ ನಡೆಯುವ ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಮಕ್ಕಳಿಗೆ ಈ ಸಂದರ್ಭದಲ್ಲಿ ತಮ್ಮ ಕಷ್ಟಗಳನ್ನು ಸರಕಾರಕ್ಕೆ ನೇರವಾಗಿ ಮುಟ್ಟಿಸಲು ಉಚಿತ ದೂರವಾಣಿ ಕರೆಯ ವ್ಯವಸ್ಥೆ ಮಾಡಬೇಕು. ಪೋಷಕರು ತಾವು ಮುಂದೆ ಬಂದು ಪ್ರಕರಣಗಳನ್ನು ದಾಖಲು ಮಾಡುವ ಜಾಗೃತಿ ಮೂಡಬೇಕು ಮತ್ತು ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಸದಾ ನಿಗಾ ಇಡಬೇಕು. ಅಪರಾಧಿಗಳನ್ನು ಪೋಕ್ಸೋ ಕಾಯ್ದೆಯ ಅನ್ವಯ ನಿರ್ದಾಕ್ಷಿಣ್ಯವಾಗಿ ಶಿಕ್ಷಿಸಬೇಕು. ಸರಕಾರ ರಾಜ್ಯದಲ್ಲಿ ಹೆಚ್ಚಿರುವ ಈ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಮುಂದೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಮಕ್ಕಳ ಸುರಕ್ಷತೆಯ ನೆಲೆಯಲ್ಲಿ ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸುತ್ತದೆ.

English summary
Karnataka AAP Party Demand Probe Against Child Harassment At Lockdown Time. Child Harassment cases incresed at Lockdown Time, they defend it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X