ಏ.18ರಂದು ನಿಗದಿಯಾಗಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ

ಬೆಂಗಳೂರು, ಏಪ್ರಿಲ್ 16: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಏ.18ರಂದು ನಡೆಯಬೇಕಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ.

ಕೋವಿಡ್ ನಿಯಂತ್ರಣ ಸಂಬಂಧ ಉಭಯ ಪಕ್ಷಗಳ ಮುಖಂಡರ ಸಭೆಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಏ.18ರ ಸಂಜೆ 4 ಗಂಟೆಗೆ ಕರೆದಿದ್ದರು.

ಸಭೆಯಲ್ಲಿ ಸಿದ್ದರಾಮಯ್ಯ, ಎಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗುತ್ತಾರೆ ಎಂದು ಹೇಳಲಾಗಿತ್ತು.ಇದೀಗ ಸಭೆಯನ್ನು ದಿಢೀರ್ ಮುಂದೂಡಿಕೆ ಮಾಡಲಾಗಿದ್ದು, ಯಾವ ಕಾರಣಕ್ಕೆ ಮುಂದೂಡಿಕೆ ಮಾಡಲಾಗಿದೆ ಎನ್ನುವ ಚರ್ಚೆ ಶುರುವಾಗಿದೆ.

 Karnataka All Party Meeting Postponed

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣದಿಂದಾಗಿ ಸಭೆಯನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದಲ್ಲಿ ಬರೋಬ್ಬರಿ 14,859 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಹಿತಿ ನೀಡಿದೆ. ಒಂದೇ ದಿನ 78 ಮಂದಿ ಮೃತಪಟ್ಟಿದ್ದಾರೆ, ಇದುವರೆಗೆ 13,190 ಮಂದಿ ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ 4031ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಇದುವರೆಗೆ 1003985 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 107315 ಸಕ್ರಿಯ ಪ್ರಕರಣಗಳಿವೆ, ಒಟ್ಟು 1124509 ಪ್ರಕರಣಗಳಿವೆ. 577 ಮಂದಿ ಐಸಿಯುನಲ್ಲಿದ್ದಾರೆ.

Recommended Video

      ಸಾಮಾಜಿಕ ಜಾಲತಾಣವನ್ನ ಸಂಪೂರ್ಣ ಬಂದ್ ಮಾಡಿದ ಸರ್ಕಾರ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+