ಬಾಕಿಯಿರುವ ಸಂಬಳ, ಸುರಕ್ಷತಾ ಸಾಧನ ನೀಡಿ - ಆಶಾ ಕಾರ್ಯಕರ್ತರಿಂದ ಆನ್‌ಲೈನ್ ಮುಷ್ಕರ

ಬೆಂಗಳೂರು, ಮೇ 25: ಬಾಕಿ ಇರುವ ಗೌರವ ಧನ ಮತ್ತು ವಿಮಾ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ, ಕರ್ನಾಟಕ ಆಶಾ ಕಾರ್ಯಕರ್ತರು ಸೋಮವಾರ ತಮ್ಮ ಕರ್ತವ್ಯವನ್ನು ಬಹಿಷ್ಕರಿಸಿ ಒಂದು ದಿನದ 'ಆನ್‌ಲೈನ್ ಮುಷ್ಕರ' ನಡೆಸಿದರು.

ಕೋವಿಡ್ -19 ನ ಈ ಸಂದರ್ಭದಲ್ಲಿ ಮುಂಚೂಣಿ ಕೊರೊನಾ ವಾರಿಯರ್ಸ್‌ಗಳಾಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತರಿಗೆ ಎರಡು ತಿಂಗಳಿನಿಂದ ಸಂಬಳ ದೊರೆತಿಲ್ಲ. ಈ ಸಂಬಳವನ್ನು ತಕ್ಷಣ ಬಿಡುಗಡೆ ಮಾಡಬೇಕು. ಇತರ ಆರೋಗ್ಯ ಕಾರ್ಯಕರ್ತರಿಗೆ ಘೋಷಿಸಿದಂತೆ ಎಲ್ಲಾ ಆಶಾ ಕಾರ್ಯಕರ್ತರಿಗೆ ಸರ್ಕಾರವು 5000 ರೂ.ಗಳನ್ನು ಕೋವಿಡ್ -19 ಪರಿಹಾರ ಪ್ಯಾಕೇಜ್ ಆಗಿ ಒದಗಿಸಬೇಕು ಎಂದು ಪ್ರತಿಭಟನಾನಿರತ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಪ್ರತಿಭಟನೆಗೆ ಕರ್ನಾಟಕ ರಾಜ್ಯ ಸಂಯುಕ್ತಾ ಎಎಸ್ಎಎ ಕಾರ್ಯಕರ್ತೆಯರ ಸಂಘ ನೇತೃತ್ವ ವಹಿಸಿದ್ದರು. ಇನ್ನು ಕೋವಿಡ್ -19 ನಿಂದ ಬಳಲುತ್ತಿರುವ ಕಾರ್ಮಿಕರಿಗೆ ಕನಿಷ್ಠ 25 ಸಾವಿರ ರೂ.ಗಳನ್ನು ವೈದ್ಯಕೀಯ ಪರಿಹಾರವಾಗಿ ಒದಗಿಸುವುದರ ಜೊತೆಗೆ ಸುರಕ್ಷತಾ ಸಾಧನಗಳಾದ ಮಾಸ್ಕ್‌, ಹ್ಯಾಂಡ್ ಸ್ಯಾನಿಟೈಸರ್‌ಗಳು, ಗ್ಲೌಸ್‌ ಮತ್ತು ಇತರ ಸುರಕ್ಷತಾ ಸಾಧನಗಳನ್ನು ಒದಗಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಕಾರ್ಯಕರ್ತರ ಪ್ರಕಾರ, ಸುಮಾರು 1000 ಕ್ಕೂ ಅಧಿಕ ಆಶಾ ಕಾರ್ಯಕರ್ತರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ -19 ನ ಮೊದಲ ಅಲೆಯ ಸಂದರ್ಭ ಸಾವನ್ನಪ್ಪಿದ ಆಶಾ ಕಾರ್ಯಕರ್ತರ ಕುಟುಂಬಗಳಿಗೆ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ. ಈ ಪರಿಹಾರವನ್ನು ಹಾಗೂ ವಿಮಾ ನಿಧಿಯಲ್ಲಿ 50 ಲಕ್ಷ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಸರ್ಕಾರವನ್ನು ಆಶಾ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Karnataka ASHA workers demands Govt to release salaries, safety equipment, organized Online Protest

ಆಶಾ ಕಾರ್ಯಕರ್ತರಿಗೆ ಸರ್ಕಾರ ನೀಡಿರುವ ಜವಾಬ್ದಾರಿಯ ಬಗ್ಗೆ ಇನ್ನೂ ಗೊಂದಲವಿರುವ ಕಾರಣ, ಕಾರ್ಮಿಕರು ತಮಗೆ ನಿಗದಿಪಡಿಸಿದ ಕಾರ್ಯಗಳನ್ನು ಪಟ್ಟಿ ಮಾಡಿ ಸರ್ಕಾರ ಆದೇಶವನ್ನು ಹೊರಡಿಸುವಂತೆ ಕೋರಿದ್ದಾರೆ. ಕಳೆದ ವಾರ, ಕಾರ್ಮಿಕರು ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಹಾಗೆಯೇ ಸರ್ಕಾರ ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು. ಆದರೆ, ಸರ್ಕಾರ ಯಾವುದೇ ಗಮನಕೊಟ್ಟಿಲ್ಲ ಎಂದು ಆರೋಪಿಸಿರುವ ಆಶಾ ಕಾರ್ಯಕರ್ತರು, ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯ ಸಂಯುಕ್ತಾ ಎಎಸ್ಎ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ ನಾಗಲಕ್ಷ್ಮಿ ಮಾತನಾಡಿ, ಆರೋಗ್ಯ ಆಯುಕ್ತರು, ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕರು ಮತ್ತು ರಾಜ್ಯ ಆಶಾ ಕಾರ್ಯಕ್ರಮ ಅಧಿಕಾರಿಗಳು ಬಾಕಿ ಸಂಬಳವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈ ಭರವಸೆ ಬರೀ ಭರವಸೆಯಾಗೇ ಉಳಿದಿದೆ. ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+