ಉಗ್ರ ಅಸಾದುಲ್ಲಾನನ್ನು ಬೆಂಗಳೂರಿಗೆ ಕರೆತಂದ ಎನ್ಐಎ
ಬೆಂಗಳೂರು, ಡಿಸೆಂಬರ್ 10 : ಹೈದರಾಬಾದ್ನ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಲಷ್ಕರ್ ಉಗ್ರ ಅಸಾದುಲ್ಲಾ ಖಾನ್ನನ್ನು ಬೆಂಗಳೂರಿಗೆ ಕರೆತಂದಿದ್ದು, ಎನ್ಐಎ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. 4 ತಿಂಗಳ ಹಿಂದೆ ಅಸಾದುಲ್ಲಾನನ್ನು ಬಂಧಿಸಲಾಗಿತ್ತು.
ಪೊಲೀಸ್ ಅಧಿಕಾರಿಗಳು, ಪತ್ರಕರ್ತರು ಮತ್ತು ಕೆಲವು ರಾಜಕೀಯ ಮುಖಂಡರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು 2012ರಲ್ಲಿ 12 ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು. [ಬೆಳಗಾವಿಯಲ್ಲಿ ಸಿಕ್ಕಿಬಿದ್ದವರ ಬಳಿ 36 ವಿಡಿಯೋಗಳು ಇವೆ]

ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಸಾದುಲ್ಲಾ ಖಾನ್ ಅಲಿಯಾಸ್ ಅಬು ಸೂಫಿಯಾನ್ ತಲೆಮರೆಸಿಕೊಂಡಿದ್ದ. 4 ತಿಂಗಳ ಹಿಂದೆ ಎನ್ಐಎ ಅಧಿಕಾರಿಗಳು ಅಸಾದುಲ್ಲಾನನ್ನು ಬಂಧಿಸಿದ್ದರು. ಸದ್ಯ, ಕೊಲೆ ಸಂಚಿನ ವಿಚಾರಣೆಗಾಗಿ ಆತನನ್ನು ಬೆಂಗಳೂರಿಗೆ ಕರೆತರಲಾಗಿದೆ. [ಉಗ್ರರ ಕರಿನೆರಳು ಬೆಳಗಾವಿಯ ಮೇಲೂ ಬಿತ್ತೇ?]
ಪ್ರಕರಣದ ವಿವರ : 2012ರ ಆ.29ರಂದು ಬೆಂಗಳೂರಿನ ಸಿಸಿಬಿ ಪೊಲೀಸರು ಓರ್ವ ಪತ್ರಕರ್ತ, ಓರ್ವ ವಿಜ್ಞಾನಿ ಸೇರಿ 12 ಆರೋಪಿಗಳನ್ನು ಪೊಲೀಸ್ ಅಧಿಕಾರಿಗಳು, ಪತ್ರಕರ್ತರು ಮತ್ತು ಕೆಲವು ರಾಜಕೀಯ ಮುಖಂಡರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧಿಸಿದ್ದರು.
ಬಂಧಿತರೂ ಸೇರಿ 25 ಆರೋಪಿಗಳ ವಿರುದ್ಧ 2013ರ ಫೆಬ್ರವರಿಯಲ್ಲಿ ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ ಪಟ್ಟಿಯಲ್ಲಿ ಅಸಾದುಲ್ಲಾ ಖಾನ್ನನ್ನು ಸೇರಿಸಲಾಗಿತ್ತು. 2014ರಲ್ಲಿ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಲಾಗಿತ್ತು.
ತನಿಖೆ ಆರಂಭಿಸಿದ ಎನ್ಐಎ ಅಸಾದುಲ್ಲಾ ಸೇರಿಸಿ ಮೂವರ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಿದ್ದರು. ಆಗ ತಲೆಮರೆಸಿಕೊಂಡಿದ್ದ ಅಸಾದುಲ್ಲಾನನ್ನು ನಾಲ್ಕು ತಿಂಗಳ ಹಿಂದೆ ಬಂಧಿಸಲಾಗಿತ್ತು. ಈಗ ಪ್ರಕರಣದ ವಿಚಾರಣೆಗಾಗಿ ಆತನನ್ನು ಬೆಂಗಳೂರಿಗೆ ಕರೆತಂದು ಕೋರ್ಟ್ಗೆ ಹಾಜರುಪಡಿಸಿ, ಎನ್ಐಎ ವಶಕ್ಕೆ ಪಡೆಯಲಾಗಿದೆ.
8 ಮಂದಿ ಖುಲಾಸೆ : ಸಿಸಿಬಿ ಬಂಧಿಸಿದ 12 ಆರೋಪಿಗಳ ಪೈಕಿ ಪತ್ರಕರ್ತ, ವಿಜ್ಞಾನಿ ಸೇರಿ 8 ಮಂದಿಯನ್ನು ಎನ್ಐಎ ನ್ಯಾಯಾಲಯ ಖುಲಾಸೆಗೊಳಿಸಿದೆ. ಇವರ ಮೇಲಿರುವ ಆರೋಪಗಳಿಗೆ ಪೂರಕ ಸಾಕ್ಷಿ ಲಭ್ಯವಾಗಿಲ್ಲ. ಉಳಿದ ಮೂವರು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ. ಉಳಿದ ಒಬ್ಬ ಆರೋಪಿ ಅಸಾದುಲ್ಲಾ ಖಾನ್ ಈಗ ಎನ್ಐಎ ವಶದಲ್ಲಿದ್ದಾನೆ.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications