Get Updates
Get notified of breaking news, exclusive insights, and must-see stories!

Chamarajpet Constituency: ಚಾಮರಾಜಪೇಟೆಯಲ್ಲಿ ಕುಗ್ಗದ ಜಮೀರ್ ಅಹಮದ್ ಪ್ರಭಾವ- ವರದಿ, ವಿಶ್ಲೇಷಣೆ

ಈ ಬಾರಿ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಕಾಂಗ್ರೆಸ್‌ ಬಿಜೆಪಿ ಸೆಣಸಲಿವೆ. ಇದಕ್ಕೆ ಸಂಬಂಧಿಸಿದ ವರದಿ, ವಿಶ್ಲೇಷಣೆ ಓದಿ.

ಬೆಂಗಳೂರು ಫೆಬ್ರವರಿ 23: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಪ್ರಬಲ ರಾಜಕೀಯ ಪಕ್ಷಗಳು ಭರದ ಸಿದ್ಧತೆ ಮಾಡಿಕೊಳ್ಳುತ್ತಿವೆ. ಮುಂಬರುವ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಚಾಮರಾಜಪೇಟೆ ಕ್ಷೇತ್ರವೂ ಒಂದು. ಚಾಮರಾಜಪೇಟೆ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿಧಾನಸಭೆ ಚುನಾವಣಾ ಬಿಸಿ ಹೆಚ್ಚಾಗುತ್ತಿದ್ದಂತೆ ಇತ್ತ ಚಾಮರಾಜಪೇಟೆಯಲ್ಲಿ ಜಯ ಸಾಧಿಸಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಂತ್ರ ರೂಪಿಸುತ್ತಿವೆ. ಪ್ರಮುಖವಾಗಿ ಈ ಹಿಂದೆ ಧರ್ಮದಂಗಲ್ ಕೇಂದ್ರಬಿಂದುವಾಗಿದ್ದ ಚಾಮರಾಜಪೇಟೆ ಕ್ಷೇತ್ರದಿಂದ ನಿರಂತರವಾಗಿ ಗೆದ್ದು ಕ್ಷೇತ್ರದ ಮೇಲೆ ಹಿಡಿತ ಸಾಧಿಸಿರುವ ಶಾಸಕ ಜಮೀರ್ ಅಹಮದ್ ಖಾನ್ ಅವರನ್ನು ಹಣಿಯಲು ಜೆಡಿಎಸ್ ಹಾಗೂ ಬಿಜೆಪಿ ಚುನಾವಣೆ ದಿನಾಂಕ ಘೋಷಣೆಗೂ ಮೊದಲು ರಣತಂತ್ರ ರೂಪಿಸುತ್ತಿವೆ.

ಹಾಲಿ ಶಾಸಕ ಜಮೀರ್ ಅಹಮದ್ ಖಾನ್ ಅವರು ಜೆಡಿಎಸ್ ನಿಂದ ಬಂಡಾಯವೆದ್ದು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಕಾಂಗ್ರೆಸ್- ಜೆಡಿಎಸ್ ಜಟಾಪಟಿ ನಡುವೆ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ. ಇದರ ನಡುವೆ ಚಾಮರಾಜಪೇಟೆಯಲ್ಲಿ ಮೂಲ ಸೌಕರ್ಯಗಳು ಅಭಿವೃದ್ಧಿ ಕಂಡಿಲ್ಲ, ಸಣ್ಣ ಕೈಗಾರಿಕಾ ಉದ್ಯಮಿಗಳನ್ನು ಹೇರಳವಾಗಿ ಹೊಂದಿರುವ ಕ್ಷೇತ್ರ ಬದಲಾವಣೆ ಬಯಸಿದರೆ ಅಚ್ಚರಿ ಪಡಬೇಕಾಗಿಲ್ಲ.

ಮುಸ್ಲಿಂ ಪ್ರಾಬಲ್ಯ ಹೊಂದಿರುವ ಕ್ಷೇತ್ರ ಚಾಮರಾಜಪೇಟೆ. ಮೂರು ಬಾರಿ ಕ್ಷೇತ್ರದಲ್ಲಿ ಜೆಡಿಎಸ್‌ನ ಜಮೀರ್ ಅಹಮದ್ ಖಾನ್ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜಮೀರ್ ಜಯ ಸಾಧಿಸಿದ್ದರು.

ಚಾಮರಾಜಪೇಟೆ 2018ರ ಫಲಿತಾಂಶ

ಚಾಮರಾಜಪೇಟೆ 2018ರ ಫಲಿತಾಂಶ

2013ರಲ್ಲಿ ಶೇ 58.92ರಷ್ಟು ಮತದಾನವಾಗಿತ್ತು. ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಬಿ.ಜಡ್ ಜಮೀರ್ ಅಹ್ಮದ್ ಖಾನ್ ಅವರು 56,339 ಮತಗಳನ್ನು ಗಳಿಸಿ ಜಯ ಗಳಿಸಿದ್ದರು. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಜಿ.ಎ ಬಾವಾ ಅವರು 26,177 ಮತ ಗಳಿಸಿ ಸೋಲು ಕಂಡಿದ್ದರು. 30,162 ಮತಗಳ (ಶೇ 28.01) ಅಂತರದಿಂದ ಜಮೀರ್ ಜಯ ದಾಖಲಿಸಿದ್ದರು. 2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ ಜಯ ಗಳಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಎಂ ಲಕ್ಷ್ಮೀನಾರಾಯಣ 33137 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.

ಅಲ್ಪಸಂಖ್ಯಾತ ಸಮುದಾಯದ ಮತದಾರರೇ ನಿರ್ಣಾಯಕ

ಅಲ್ಪಸಂಖ್ಯಾತ ಸಮುದಾಯದ ಮತದಾರರೇ ನಿರ್ಣಾಯಕ

2005ರಲ್ಲಿ ಎಸ್.ಎಂ.ಕೃಷ್ಣ ರಾಜೀನಾಮೆಯಿಂದ ಚಾಮರಾಜಪೇಟೆ ಕ್ಷೇತ್ರ ತೆರವಾಯಿತು. ಉಪ ಚುನಾವಣೆ ನಡೆದಾಗ ಜಮೀರ್ ಅಹಮದ್ ಖಾನ್ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಜಯಗಳಿಸಿದರು. 19,943 ಮತಗಳನ್ನು ಪಡೆದು 3678 ಮತಗಳಿಂದ ಕಾಂಗ್ರೆಸ್‌ನ ಆರ್.ವಿ.ದೇವರಾಜ್ ಅವರನ್ನು ಸೋಲಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. ನಂತರ 2008, 2013ರ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಗೆಲ್ಲುವ ಮೂಲಕ ಹ್ಯಾಟ್ರಿಕ್ ಬಾರಿಸಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಜಮೀರ್ ಅಹಮದ್ ಖಾನ್ ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿದ್ದಾರೆ. ಜಮೀರ್ ಅಹಮದ್ ಖಾನ್ ಕಾಂಗ್ರೆಸ್ ಸೇರುವ ಮೂಲಕ 2018ರ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕ್ಷೇತ್ರದಿಂದ ಸ್ಪರ್ಧಿಸಿ ನಾಲ್ಕನೇ ಬಾರಿಯೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು.

ಅಲ್ಪಸಂಖ್ಯಾತ ಸಮುದಾಯದ ಮತದಾರರೇ ನಿರ್ಣಾಯಕವಾಗಿರುವ ಕ್ಷೇತ್ರವು ಜೆಡಿಎಸ್‌ ಹಿಡಿತದಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ತೆಕ್ಕೆಗೆ ಜಾರಿತು. ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದರೂ ಜಮೀರ್ ಪ್ರಭಾವ ಕ್ಷೇತ್ರದಲ್ಲಿ ಕುಂದಿಲ್ಲ.

ಬಿಜೆಪಿಯಿಂದ ಟಿಕೆಟ್ ಯಾರಿಗೆ?

ಬಿಜೆಪಿಯಿಂದ ಟಿಕೆಟ್ ಯಾರಿಗೆ?

ಚಾಮರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಕುತೂಹಲದ ಪ್ರಶ್ನೆಯಾಗಿದೆ. 'ಲಹರಿ ರೆಕಾರ್ಡಿಂಗ್ ಸಂಸ್ಥೆ'ಯ ಲಹರಿ ವೇಲು ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಈದ್ಗಾ ಮೈದಾನದ ಹೋರಾಟದಲ್ಲೂ ಸ್ಥಳೀಯರೊಂದಿಗೆ ವೇಲು ಕಾಣಿಸಿಕೊಂಡಿದ್ದು, ರಾಜಕೀಯಕ್ಕೆ ಬರುವ ಭೂಮಿಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈದ್ಗಾ ಮೈದಾನದ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಚಾಮರಾಜಪೇಟೆ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಅಂಬೇಡ್ಕರ್ ಸೇನೆಯ ಅಧ್ಯಕ್ಷ ಸುನಿಲ್‌ಬಾಬು ಸಹ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಇದೇ ಕ್ಷೇತ್ರದಲ್ಲಿ ನಡೆದಿದ್ದ ರಕ್ತದಾನ ಶಿಬಿರಕ್ಕೆ ಬಿಜೆಪಿ ಶಾಸಕರು ಹಾಗೂ ಸಂಸದರನ್ನು ಕರೆಸಿ 'ಸೈಲೆಂಟ್' ಸುನಿಲ್ ಕುಮಾರ್‌ ಸಂಚಲನ ಸೃಷ್ಟಿಸಿದ್ದರು. 'ಸೈಲೆಂಟ್ ಸುನಿಲ್' ಸಹ ಟಿಕೆಟ್‌ಗೆ ಪ್ರಯತ್ನಿಸಿ ಈ ಶಿಬಿರ ಆಯೋಜಿಸಿದ್ದರು ಎನ್ನಲಾಗಿದೆ. ಆಮ್ ಆದ್ಮಿ ಪಕ್ಷದಿಂದ ಜಗದೀಶ್ ಚಂದ್ರ ಸ್ಪರ್ಧಿಸುವ ಸಾಧ್ಯತೆಯಿದೆ.

ಚಾಮರಾಜಪೆಟೆಯಲ್ಲಿ ನೂರೆಂಟು ಸಮಸ್ಯೆಗಳು..

ಚಾಮರಾಜಪೆಟೆಯಲ್ಲಿ ನೂರೆಂಟು ಸಮಸ್ಯೆಗಳು..

ಅತಿ ಹಳೆಯ ಬಡಾವಣೆಗಳಲ್ಲಿ ಒಂದೆನಿಸಿರುವ ಚಾಮರಾಜಪೇಟೆ ಕ್ಷೇತ್ರದ ಏಳಿಗೆ ಆರಕ್ಕೇರಿಲ್ಲ ಮೂರಕ್ಕಿಳಿದಿಲ್ಲ. ಮಧ್ಯಮ ವರ್ಗದ ಜನರೇ ನೆಲೆಸಿರುವ ಕ್ಷೇತ್ರದಲ್ಲಿ ಸಂಚಾರ, ತ್ಯಾಜ್ಯ ವಿಲೇವಾರಿ, ರಸ್ತೆ ವಿಸ್ತರಣೆಯಂತಹ ಸಮಸ್ಯೆಗಳು ಉಳಿದಿವೆ. ಕಿರಿದಾದ ರಸ್ತೆಗಳಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದೆ ಎಂಬುದು ಸ್ಥಳೀಯರ ಅಳಲು. ಮುಂದಿನ ಚುನಾವಣೆಯಲ್ಲೂ ಜಾತಿಯೋ, ಅಭಿವೃದ್ಧಿ ಕೆಲಸಗಳು ಮುಖ್ಯವಾಗುವುದೋ ಎನ್ನುವ ಕುರಿತು ಚರ್ಚೆಗಳು ನಡೆಯುತ್ತಿದೆ.

10 ವರ್ಷಗಳಿಂದ ಕ್ಷೇತ್ರದಲ್ಲಿ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸಗಳೇ ನಡೆದಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಜನಪ್ರತಿನಿಧಿ ಕಾಣಿಸಿಕೊಳ್ಳುತ್ತಾರೆ ಎಂಬ ದೂರು ಕೇಳಿ ಬರುತ್ತಿದೆ. ಮೂಲ ಸೌಕರ್ಯಗಳ ಕೊರತೆ, ಟ್ರಾಫಿಕ್ ಸಮಸ್ಯೆ ಇದ್ದೇ ಇದೆ. ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಅಲ್ಪಸಂಖ್ಯಾತ ಖಾತೆ ಸಚಿವರಾಗಿದ್ದ ಜಮೀರ್ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯ ಗಳಿಸಿದ್ದರು.

ತೆನೆ ಹೊತ್ತ ಮಹಿಳೆ ಕಡೆಗೆ 'ಕೈ'

ತೆನೆ ಹೊತ್ತ ಮಹಿಳೆ ಕಡೆಗೆ 'ಕೈ'

ಜಮೀರ್ ಹಿಡಿತದಿಂದ ಚಾಪರಾಜಪೆಟೆಯನ್ನು ಮತ್ತೆ ತೆಕ್ಕೆಗೆ ಪಡೆಯಲು ಜೆಡಿಎಸ್‌ ಕ್ಷೇತ್ರದ ಹಲವು ಮುಖಂಡರನ್ನು ಪಕ್ಷಕ್ಕೆ ಸೆಳೆಯುತ್ತಿದೆ. ಕೆಲ ದಿನಗಳ ಹಿಂದೆ ಬದಲಾವಣೆಯ ಪರ್ವ ಶುರುವಾಗಿತ್ತು. ಬಿಬಿಎಂಪಿಯ ಮಾಜಿ ಸದಸ್ಯೆ ಗೌರಮ್ಮ ಅವರ ಪತಿ, ಕಾಂಗ್ರೆಸ್ ಮುಖಂಡ ಗೋವಿಂದರಾಜು ಮತ್ತು ಅವರ ಬೆಂಬಲಿಗರನ್ನು ಜೆಡಿಎಸ್ ಸೆಳೆಯುವ ಮೂಲಕ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದೆ.

ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಎಚ್.ಡಿ ಕುಮಾರಸ್ವಾಮಿ ಹಾಗೂ ಸಿ.ಎಂ.ಇಬ್ರಾಹಿಂ ಅವರ ಸಮ್ಮುಖದಲ್ಲೇ ಗೋವಿಂದರಾಜು, ಜೆಡಿಎಸ್ ಸೇರಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಜಮೀರ್‌ ಪರ ಗೋವಿಂದರಾಜು ಕೆಲಸ ಮಾಡಿದ್ದರು. ಪಕ್ಷ ಬಿಟ್ಟಿರುವುದು 'ಕೈ' ಪಡೆಗೆ ಆತಂಕ ತಂದೊಡ್ಡಿದೆ.

ಕ್ಷೇತ್ರದಲ್ಲಿ ನಿರೀಕ್ಷಿತ ಕೆಲಸಗಳು ಆಗಿಲ್ಲ. ಆ ಕಾರಣಕ್ಕಾಗಿಯೇ ಕಾಂಗ್ರೆಸ್ ಬಿಟ್ಟಿರುವೆ' ಎಮದು ಆಪ್ತರ ಬಳಿ ಗೋವಿಂದರಾಜು ಹೇಳಿಕೊಂಡಿದ್ದಾರೆ. ಈ ನಡುವೆ ಪಾಲಿಕೆ ಮಾಜಿ ಸದಸ್ಯ ಇಬ್ಮಾನ್ ಪಾಷಾ ಟಿಕೆಟ್‌ಗೆ ಪ್ರಯತ್ನಿಸುತ್ತಿದ್ದಾರೆ.

ಚುನಾವಣಾ ಕಣದ ಚಿತ್ರಣ

ಚುನಾವಣಾ ಕಣದ ಚಿತ್ರಣ

ಚಾಮರಾಜಪೇಟೆ ಕ್ಷೇತ್ರದಲ್ಲಿ 216896 ಮತದಾರರು ಇದ್ದಾರೆ. 112728 ಪುರುಷ, 104150 ಮಹಿಳಾ ಮತದಾರರು ಇದ್ದಾರೆ. ಮುಸ್ಲಿಂ, ಒಕ್ಕಲಿಗರು ಹಾಗೂ ಬ್ರಾಹ್ಮಣ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಮತ ವಿಭಜನೆಯಾದರೆ ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ? ಎಂಬುದನ್ನು ಊಹಿಸುವುದು ಕಷ್ಟ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದರ ಮೇಲೆ ಚುನಾವಣಾ ಕಣದ ಚಿತ್ರಣ ಅಂತಿಮಗೊಳ್ಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+