ರಾಜಾಜಿನಗರ: ಪ್ರತಿಷ್ಠೆಯ ಕ್ಷೇತ್ರದಲ್ಲಿ ಯಾರಿಗೆ ಗೆಲುವು? ವರದಿ, ವಿಶ್ಲೇಷಣೆ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಅಸೆಂಬ್ಲಿ ಕ್ಷೇತ್ರ ರಾಜಾಜಿನಗರ. ಸತತವಾಗಿ ಬಿಜೆಪಿಯ ಸುರೇಶ್ ಕುಮಾರ್ ಇಲ್ಲಿಂದ ಗೆದ್ದು ಬರುತ್ತಿದ್ದಾರೆ. ಈ ಬಾರಿಯೂ ಅದರ ಪುನರಾವರ್ತನೆ ಆಗಲಿದೆಯಾ? ವರದಿ, ವಿಶ್ಲೇಷಣೆ..
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ಅಸೆಂಬ್ಲಿ ಕ್ಷೇತ್ರಗಳ ಪೈಕಿ ರಾಜಾಜಿನಗರ ಕೂಡಾ ಒಂದು. ಕೆಳ ಮತ್ತು ಮಧ್ಯಮ ವರ್ಗದವರು ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಸತತ ಗೆಲುವನ್ನು ಸಾಧಿಸಿಕೊಂಡು ಬರುತ್ತಿದೆ.
ಬೆಂಗಳೂರಿನ ಹೆಬ್ಬಾಗಿಲು ಎಂದೇ ಈ ಕ್ಷೇತ್ರ ಕರೆಯಲ್ಪಡುತ್ತಾದರೂ, ಮೂಲಭೂತ ಸೌಕರ್ಯಗಳ ಕೊರತೆ ಇತರ ಕ್ಷೇತ್ರಕ್ಕಿಂತ ತುಸು ಹೆಚ್ಚೇ ಇದೆ. ಓಕಳಿಪುರಂ ಬಳೀ ಲುಲು ಮಾಲ್ ಕಾರ್ಯ ನಿರ್ವಹಿಸಲು ಆರಂಭವಾದ ನಂತರ ಟ್ರಾಫಿಕ್ ಸಮಸ್ಯೆಗಳಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.
ನಮ್ಮ ಮೆಟ್ರೋ ಕ್ಷೇತ್ರದ ಸಂಚಾರದ ಸಮಸ್ಯೆಯನ್ನು ಒಂದಷ್ಟು ಕಡಿಮೆ ಮಾಡಿದೆ. ಉತ್ತರ ಕರ್ನಾಟಕದ ಮಂದಿ ಇಲ್ಲಿ ಜಾಸ್ತಿ ನೆಲೆಸಿದ್ದಾರೆ. ಮೆಜೆಸ್ಟಿಕ್‌ಗೆ ಸಮೀಪದಲ್ಲಿರುವ ಕ್ಷೇತ್ರ ಇದಾಗಿರುವುದರಿಂದ ಬೆಂಗಳೂರಿನ ಇತರ ಭಾಗದಿಂದ ಇಲ್ಲಿಗೆ ಸಂಪರ್ಕ ಕೊಂಡಿಯ ಸಮಸ್ಯೆ ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ.

100 ವರ್ಷದ ಮೊದಲು ರಾಜಾಜಿನಗರ ಕ್ಷೇತ್ರ ಹೇಗಿತ್ತೋ, ಈಗಲೂ ಹಾಗೇ ಇದೆ. ಏನು ಬದಲಾವಣೆಗಳು ಆಗಿಲ್ಲ. ಶಾಸಕರಾದ ಸುರೇಶ್ ಕುಮಾರ್ ಅವರಿಗೆ ಸಾಕಷ್ಟು ಅವಕಾಶವನ್ನ ಜನರು ನೀಡಿದರೂ ಸಹ ಅದನ್ನ ಸುರೇಶ್ ಕುಮಾರ್ ಉಪಯೋಗಿಸಿಕೊಳ್ಳಲಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಗಂಗಾಧರಮೂರ್ತಿ 'ಒನ್ ಇಂಡಿಯಾ' ಜೊತೆಗಿನ ಸಂದರ್ಶನದಲ್ಲಿ ಹೇಳಿದ್ದರು.
ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟಿಗಾಗಿ ಪೈಪೋಟಿ ಜೋರಾಗಿಯೇ ಇದೆ. ಜೆಡಿಎಸ್ ಈಗಾಗಲೇ ತಮ್ಮ ಸ್ಪರ್ಧಿಯನ್ನು ಘೋಷಿಸಿದ್ದಾಗಿದೆ. ಜೆಡಿಎಸ್ ನಿಂದ ಬಿಜೆಪಿಗೆ ಪಕ್ಷಾಂತರಗೊಂಡ ಪರಿಷತ್ ಸದಸ್ಯರೊಬ್ಬರು ಕಾಂಗ್ರೆಸ್ ಟಿಕೆಟಿಗಾಗಿ ಲಾಬಿ ನಡೆಸುತ್ತಿದ್ದಾರೆ.
ರಾಜಾಜಿನಗರ ವಿಧಾನಸಭಾ ಕ್ಷೇತ್ರ ಹಲವು ಕಾರಣಗಳಿಂದ ಈ ಬಾರಿಯ ಚುನಾವಣೆಯಲ್ಲಿ ಚರ್ಚೆಯಲ್ಲಿದೆ. ಇದಕ್ಕೆ ಕಾರಣ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸುರೇಶ್ ಕುಮಾರ್ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಸಿಗುತ್ತೋ, ಅಥವಾ ಬಿಜೆಪಿ ಹೊಸಮುಖಕ್ಕೆ ಮಣೆಹಾಕಲಿದೆಯೋ ಎನ್ನುವುದು. ಜೊತೆಗೆ, ಕಾಂಗ್ರೆಸ್ಸಿನಿಂದ ಯಾರು ಅಭ್ಯರ್ಥಿಗಳಾಗುತ್ತಾರೆ ಎನ್ನುವುದು.

ಚುನಾವಣಾ ಸಮರಕ್ಕೆ ಸಜ್ಜಾಗಿರುವ ರಾಜಾಜಿನಗರ ಕ್ಷೇತ್ರದ ಹಾಲಿ ಶಾಸಕ ಎಸ್. ಸುರೇಶ್ ಕುಮಾರ್ ಸಂಭಾವ್ಯ ಬಿಜೆಪಿ ಅಭ್ಯರ್ಥಿ. 2019ರ ಆಗಸ್ಟ್ 20 ರಿಂದ 26 ಜುಲೈ 2021 ರವರೆಗೆ ಇವರು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ರಾಜ್ಯ ಸಚಿವರಾಗಿದ್ದರು. ಚಾಮರಾಜನಗರ ಜಿಲ್ಲಾ ಉಸ್ತುವಾರಿಯೂ ಆಗಿದ್ದ ಸುರೇಶ್ ಕುಮಾರ್ ಅವಧಿಯಲ್ಲಿ ಆಮ್ಲಜನಕ ಕೊರತೆಯಿಂದಾಗಿ 36 ಜನರು ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
ಕ್ಷೇತ್ರದ ವ್ಯಾಪ್ತಿಯ ಬಿಬಿಎಂಪಿ ವಾರ್ಡುಗಳು: ದಯಾನಂದ ನಗರ, ಪ್ರಕಾಶ್ ನಗರ, ರಾಜಾಜಿನಗರ, ಬಸವೇಶ್ವರ ನಗರ, ಕಾಮಾಕ್ಷಿಪಾಳ್ಯ, ಶಿವನಗರ, ಶ್ರೀರಾಮ ಮಂದಿರ.
ಕ್ಷೇತ್ರದಲ್ಲಿನ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು:
ಹಾಲೀ ಶಾಸಕ ಎಸ್. ಸುರೇಶ್ ಕುಮಾರ್
ಮಾಜಿ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಎಸ್.ರಘುನಾಥ್
ಮಾಜಿ ಕಾರ್ಪೋರೇಟರ್ ಮಂಜುನಾಥ್
ಮಾಜಿ ಕಾರ್ಪೋರೇಟರ್ ರಂಗಣ್ಣ
ಕ್ಷೇತ್ರದಲ್ಲಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು:
ಮಾಜಿ ಮೇಯರ್ ಪದ್ಮಾವತಿ
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ ಘಟಕದ ಆರ್.ಮಂಜುಳಾ ನಾಯ್ಡು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರೆ ಭವ್ಯಾ ನರಸಿಂಹಮೂರ್ತಿ
ಬೆಂಗಳೂರು ನಗರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ರಘುವೀರ್.ಎಸ್.ಗೌಡ
ಇದರ ಜೊತೆಗೆ ಕೊರೊನಾ ಕಾಲದಲ್ಲಿ ಸಮಾಜಮುಖಿ ಕೆಲಸದಿಂದ ಜನಪ್ರಿಯತೆಯನ್ನು ಪಡೆದ ಮತ್ತು ರಾಜ್ಯ ಒಕ್ಕಲಿಗರ ಸಂಘದ ಸದಸ್ಯರೂ ಆಗಿರುವ ಡಾ.ಆಂಜನಪ್ಪನವರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆಯೂ ಇದೆ. ಇವರಿಗೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಆಫರ್ ಕೂಡಾ ಇದೆ ಎಂದು ಹೇಳಲಾಗುತ್ತಿದೆ.

2008ರ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಪದ್ಮಾವತಿ ಅವರನ್ನು, 2013ರಲ್ಲಿ ಕಾಂಗ್ರೆಸ್ಸಿನ ಮಂಜುಳಾ ನಾಯ್ಡು ಅವರನ್ನು ಮತ್ತು 2018ರಲ್ಲಿ ಎಸ್. ಸುರೇಶ್ ಕುಮಾರ್ ಅವರು ಕಾಂಗ್ರೆಸ್ಸಿನ ಜಿ.ಪದ್ಮಾವತಿ ಅವರನ್ನು 9,453 ಮತಗಳ ಅಂತರದಿಂದ ಸೋಲಿಸಿ, ಅಸೆಂಬ್ಲಿಗೆ ಆಯ್ಕೆಯಾಗಿದ್ದರು.
ಕ್ಷೇತ್ರದ ಮತದಾರ ವಿವರ (2018ರ ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ)
ಕ್ಷೇತ್ರದ ಕೋಡ್: 165
ಪುರುಷರು: 1,07,428
ಮಹಿಳೆಯರು: 1,03,695
ಇತರರು: 09
ಒಟ್ಟು: 2,11,132
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications