ಚುನಾವಣಾ ಅಕ್ರಮ: ಒಟ್ಟು 87.01 ಕೋಟಿ ರೂಪಾಯಿ ನಗದು ವಶ
ಬೆಂಗಳೂರು, ಮೇ 11: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೂ 87.01 ಕೋಟಿ ರೂಪಾಯಿ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಪೊಲೀಸರು ಮತ್ತು ಇತರೆ ಚುನಾವಣಾ ತಂಡಗಳು ನಡೆಸಿದ ಕಾರ್ಯಾಚರಣೆಯಲ್ಲಿ 56.36 ಕೋಟಿ ನಗದು ಪತ್ತೆಯಾಗಿದ್ದರೆ, ಆದಾಯ ತೆರಿಗೆ ಇಲಾಖೆಯ ದಾಳಿಗಳಿಂದ 30.65 ಕೋಟಿ ದೊರಕಿದೆ.
2013ರ ವಿಧಾನಸಭೆ ಚುನಾವಣೆಯಲ್ಲಿ 14.42 ಕೋಟಿ ಅಕ್ರಮ ಹಣ ಮತ್ತು 67,953 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿತ್ತು.

24.43 ಕೋಟಿ ಮೌಲ್ಯದ 5,26,766 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಇರಿಸಿಕೊಂಡಿದ್ದ ಸೀರೆಗಳು, ಲ್ಯಾಪ್ಟಾಪ್, ಚಿನ್ನಾಭರಣ ಸೇರಿದಂತೆ 65.48 ಕೋಟಿ ಮೌಲ್ಯದ ವಿವಿಧ ವಸ್ತುಗಳನ್ನು ಜಫ್ತಿ ಮಾಡಲಾಗಿದೆ. 44.26 ಕೋಟಿ ಮೊತ್ತದ ಚಿನ್ನ, ಬೆಳ್ಳಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
86.457 ಕೆಜಿ ತೂಕದ ಮಾದಕ ವಸ್ತುಗಳು ಪತ್ತೆಯಾಗಿದ್ದು, ಇವುಗಳ ಮೌಲ್ಯ 39 ಲಕ್ಷವಾಗಿದೆ.
ಸಿಆರ್ಪಿಸಿ ಸೆಕ್ಷನ್ 107ರ ಅಡಿಯಲ್ಲಿ 24,831 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಟ್ಟು 97,037 ಮಂದಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿದ್ದಾರೆ. ಇವರಲ್ಲಿ 97,031 ಮಂದಿ ಶಸ್ತ್ರಾಸ್ತ್ರಗಳನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಗೂಂಡಾ ಕಾಯ್ದೆಯಡಿ 17 ಪ್ರಕರಣಗಳನ್ನು ದಾಖಲಿಸಲಾಗಿದೆ.
ಅಬಕಾರಿ ಇಲಾಖೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಒಟ್ಟು 13,900 ಪ್ರಕರಣಗಳು ದಾಖಲಾಗಿವೆ ಎಂದು ಚುನಾವಣಾ ಆಯೋಗದ ಮಾಹಿತಿ ತಿಳಿಸಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications