ಪ್ರಚಾರಕ್ಕೆ ಮಕ್ಕಳ ಬಳಕೆ: ಎಂ.ಎನ್. ರೆಡ್ಡಿ ವಿರುದ್ಧ ಎಫ್‌ಐಆರ್
ಬೆಂಗಳೂರು, ಏಪ್ರಿಲ್ 30: ಚಿಕ್ಕ ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡ ಆರೋಪದಲ್ಲಿ ಸರ್ವಜ್ಞನಗರದ ಬಿಜೆಪಿ ಅಭ್ಯರ್ಥಿ ಎಂ.ಎನ್. ರೆಡ್ಡಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಚಿಕ್ಕ ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಬಳಸಿಕೊಳ್ಳುವುದು ಅಪರಾಧವಾಗಿದೆ. ಒಂದು ವೇಳೆ ಪ್ರಚಾರಕ್ಕಾಗಿ ಯಾವುದೇ ರೀತಿಯಲ್ಲಿ ಮಕ್ಕಳನ್ನು ಬಳಸಿಕೊಂಡರೂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಎಚ್ಚರಿಕೆ ನೀಡಿತ್ತು.
ಭಾನುವಾರದ ಪ್ರಚಾರದ ವೇಳೆ ಎಂ.ಎನ್. ರೆಡ್ಡಿ ಅವರು ಚಿಕ್ಕಮಕ್ಕಳನ್ನು ತಮ್ಮ ಪರ ಪ್ರಚಾರಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದ್ದರು.
ರಿಲಾಯಿಟಿ ಷೋ ಪ್ರಸಾರಕ್ಕೆ ನಿರ್ಬಂಧ?
ಚುನಾವಣಾ ನೀತಿ ಸಂಹಿತೆ ಸಿನಿಮಾ ಮತ್ತು ಟೆಲಿವಿಷನ್ ಕಾರ್ಯಕ್ರಮಗಳ ಮೇಲೂ ತಟ್ಟುವ ಸಾಧ್ಯತೆ ಇದೆ.

ಸಿನಿಮಾ ಲೋಕದ ಅನೇಕ ಸ್ಟಾರ್‌ಗಳು ಚುನಾವಣಾ ಕಣದಲ್ಲಿದ್ದಾರೆ. ಜಗ್ಗೇಶ್, ಉಮಾಶ್ರೀ, ಕುಮಾರ್ ಬಂಗಾರಪ್ಪ, ನೆ.ಲ. ನರೇಂದ್ರಬಾಬು ಪ್ರಮುಖ ಸಿನಿಮಾ ತಾರೆಯರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಜಗ್ಗೇಶ್ ತೀರ್ಪುಗಾರರಾಗಿರುವ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಷೋ ಪ್ರಸಾರಕ್ಕೆ ನಿರ್ಬಂಧ ವಿಧಿಸುವ ಸಾಧ್ಯತೆ ಇದೆ. ಈ ಕಾರ್ಯಕ್ರಮದ ಕಂತುಗಳನ್ನು ಪ್ರಸಾರ ಮಾಡುವಂತಿಲ್ಲ. ಇದರಿಂದ ಪರೋಕ್ಷವಾಗಿ ಮತದಾರರ ಮೇಲೆ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಚುನಾವಣಾ ಕಣದಲ್ಲಿರುವ ಕಲಾವಿದರು ನಟಿಸಿರುವ ಸಿನಿಮಾ ಮತ್ತು ಧಾರಾವಾಹಿಗಳು ಚಿತ್ರಮಂದಿರ, ಖಾಸಗಿ ಚಾನೆಲ್ ಮತ್ತು ಕೇಬಲ್ ನೆಟ್‌ವರ್ಕ್‌ಗಳಲ್ಲಿ ಪ್ರದರ್ಶನವಾಗದಂತೆ ನಿರ್ಬಂಧಿಸುವ ಸಂಭವವಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications