ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಚಾರಕ್ಕೆ ಮಕ್ಕಳ ಬಳಕೆ: ಎಂ.ಎನ್. ರೆಡ್ಡಿ ವಿರುದ್ಧ ಎಫ್‌ಐಆರ್

|
Google Oneindia Kannada News

ಬೆಂಗಳೂರು, ಏಪ್ರಿಲ್ 30: ಚಿಕ್ಕ ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡ ಆರೋಪದಲ್ಲಿ ಸರ್ವಜ್ಞನಗರದ ಬಿಜೆಪಿ ಅಭ್ಯರ್ಥಿ ಎಂ.ಎನ್. ರೆಡ್ಡಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಚಿಕ್ಕ ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಬಳಸಿಕೊಳ್ಳುವುದು ಅಪರಾಧವಾಗಿದೆ. ಒಂದು ವೇಳೆ ಪ್ರಚಾರಕ್ಕಾಗಿ ಯಾವುದೇ ರೀತಿಯಲ್ಲಿ ಮಕ್ಕಳನ್ನು ಬಳಸಿಕೊಂಡರೂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಎಚ್ಚರಿಕೆ ನೀಡಿತ್ತು.

ಭಾನುವಾರದ ಪ್ರಚಾರದ ವೇಳೆ ಎಂ.ಎನ್. ರೆಡ್ಡಿ ಅವರು ಚಿಕ್ಕಮಕ್ಕಳನ್ನು ತಮ್ಮ ಪರ ಪ್ರಚಾರಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದ್ದರು.

ವಿಜಯೇಂದ್ರ ಟಿಕೆಟ್ ತಪ್ಪಿಸಿದ್ದು ನಾನೇ: ಅಮಿತ್ ಶಾವಿಜಯೇಂದ್ರ ಟಿಕೆಟ್ ತಪ್ಪಿಸಿದ್ದು ನಾನೇ: ಅಮಿತ್ ಶಾ

ರಿಲಾಯಿಟಿ ಷೋ ಪ್ರಸಾರಕ್ಕೆ ನಿರ್ಬಂಧ?
ಚುನಾವಣಾ ನೀತಿ ಸಂಹಿತೆ ಸಿನಿಮಾ ಮತ್ತು ಟೆಲಿವಿಷನ್ ಕಾರ್ಯಕ್ರಮಗಳ ಮೇಲೂ ತಟ್ಟುವ ಸಾಧ್ಯತೆ ಇದೆ.

Karnataka assembly elections 2018: FIR registered on bjp candidate

ಸಿನಿಮಾ ಲೋಕದ ಅನೇಕ ಸ್ಟಾರ್‌ಗಳು ಚುನಾವಣಾ ಕಣದಲ್ಲಿದ್ದಾರೆ. ಜಗ್ಗೇಶ್, ಉಮಾಶ್ರೀ, ಕುಮಾರ್ ಬಂಗಾರಪ್ಪ, ನೆ.ಲ. ನರೇಂದ್ರಬಾಬು ಪ್ರಮುಖ ಸಿನಿಮಾ ತಾರೆಯರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಗ್ಗೇಶ್ ತೀರ್ಪುಗಾರರಾಗಿರುವ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಷೋ ಪ್ರಸಾರಕ್ಕೆ ನಿರ್ಬಂಧ ವಿಧಿಸುವ ಸಾಧ್ಯತೆ ಇದೆ. ಈ ಕಾರ್ಯಕ್ರಮದ ಕಂತುಗಳನ್ನು ಪ್ರಸಾರ ಮಾಡುವಂತಿಲ್ಲ. ಇದರಿಂದ ಪರೋಕ್ಷವಾಗಿ ಮತದಾರರ ಮೇಲೆ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಚುನಾವಣಾ ಕಣದಲ್ಲಿರುವ ಕಲಾವಿದರು ನಟಿಸಿರುವ ಸಿನಿಮಾ ಮತ್ತು ಧಾರಾವಾಹಿಗಳು ಚಿತ್ರಮಂದಿರ, ಖಾಸಗಿ ಚಾನೆಲ್ ಮತ್ತು ಕೇಬಲ್‌ ನೆಟ್‌ವರ್ಕ್‌ಗಳಲ್ಲಿ ಪ್ರದರ್ಶನವಾಗದಂತೆ ನಿರ್ಬಂಧಿಸುವ ಸಂಭವವಿದೆ.

English summary
FIR has been registered on Bjp candidate from sarvagnanagar constituency for using children in his campaign
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X