ರಾಜರಾಜೇಶ್ವರಿ ನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಬೆಂಗಳೂರು, ಮೇ 12: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಚುನಾವಣೆಯನ್ನು ಮುಂದೂಡಿರುವುದನ್ನು ಸ್ವಾಗತಿಸಿ ಕೆಲವರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ನಾಯ್ಡು ಅವರ ವಿರೋಧಿ ಬಣದಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರೇ ಚುನಾವಣೆ ಮುಂದೂಡಿಕೆಯ ನಿರ್ಧಾರವನ್ನು ಸ್ವಾಗತಿಸಿದರು.

ಲಗ್ಗೆರೆ ವಾರ್ಡ್‌ನಲ್ಲಿ ಸೇರಿಕೊಂಡ ಸುಮಾರು 50ಕ್ಕೂ ಅಧಿಕ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮುನಿರತ್ನ ವಿರುದ್ಧ ಘೋಷಣೆಗಳನ್ನು ಕೂಗಿದರು.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

Karnataka assembly elections 2018 rr nagar celebration for election postpone

ಮೇ 8 ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿಯ ಎಸ್ಎಲ್ ವಿ ಪಾರ್ಕ್ ವ್ಯೂ ಅಪಾರ್ಟ್‌ಮೆಂಟ್ ಮನೆಯೊಂದರಲ್ಲಿ 9,746 ವೋಟರ್ ಐಡಿ ಪತ್ತೆಯಾಗಿದ್ದವು.

ಇದು ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ನಾಯ್ಡು ಅವರಿಗೆ ಸೇರಿದ್ದು ಎಂದು ಆರೋಪಿಸಿದ್ದ ಬಿಜೆಪಿ, ಚುನಾವಣೆ ಮುಂದೂಡುವಂತೆ ಆಗ್ರಹಿಸಿತ್ತು. ಈ ಆರೋಪವನ್ನು ನಿರಾಕರಿಸಿದ್ದ ಕಾಂಗ್ರೆಸ್, ಇದರ ಹಿಂದೆ ಬಿಜೆಪಿ ಷಡ್ಯಂತ್ರವಿದೆ ಎಂದು ದೂರಿತ್ತು.

ರಾಜರಾಜೇಶ್ವರಿ ನಗರದಲ್ಲಿ ಶನಿವಾರ ನಡೆಯಬೇಕಿದ್ದ ಚುನಾವನೆಯನ್ನು ಚುನಾವಣಾ ಆಯೋಗ ಮೇ 28ಕ್ಕೆ ಮುಂದೂಡಿದೆ. ಮೇ 31 ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+