ವಿಧಾನಸಭಾ ಚುನಾವಣೆ: ಫೆ. 23ಕ್ಕೆ ಬೆಂಗಳೂರು, ಬಳ್ಳಾರಿಯ ಬೃಹತ್ ಸಮಾವೇಶದಲ್ಲಿ ಅಮಿತ್ ಶಾ ಭಾಗಿ

ಸಾರ್ವಜನಿಕ ಸಭೆಯ ನಂತರ ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಲು ಪಕ್ಷದ ಮುಖಂಡರೊಂದಿಗೆ ಅಮಿತ್ ಶಾ ಸಭೆ ನಡೆಸಲಿದ್ದಾರೆ

ಬೆಂಗಳೂರು, ಫೆಬ್ರವರಿ. 19: ಮುಂಬರುವ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ನಾಯಕರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶತಾಯಗತಾಯ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಪ್ರಯತ್ನದಲ್ಲಿದ್ದಾರೆ.

ಇದೇ ಕಾರಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 23 ರಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ರಾಜಧಾನಿ ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಎರಡು ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಲು ಪಕ್ಷದ ಮುಖಂಡರೊಂದಿಗೆ ಸಂಕ್ಷಿಪ್ತ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Karnataka Assembly Elections 2023: Amit Shah to visit Bengaluru and Ballari on Feb 23

ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆ ಮತ್ತು ಪಕ್ಷದ ಮುಖಂಡರೊಂದಿಗಿನ ಸಭೆ ಬಳಿಕ ಗೃಹ ಸಚಿವ ಅಮಿತ್ ಬಳ್ಳಾರಿ ಜಿಲ್ಲೆಗೆ ತೆರಳಲಿದ್ದಾರೆ. ಬಳ್ಳಾರಿಯ ಸಂಡೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂಬಂಧ ಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಮಾಹಿತಿ ನೀಡಿದ್ದಾರೆ.

ಬಳ್ಳಾರಿ ಮತ್ತು ಸಂಡೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿರುವ ಸಚಿವ ಬಿ.ಶ್ರೀರಾಮುಲು, "ಬಳ್ಳಾರಿಗೆ ಆಗಮಿಸಲಿರುವ ಅಮಿತ್‌ ಶಾ ಅವರು, ಸಂಡೂರು ತಾಲೂಕಿನ ತೋರಣಗಲ್ಲು ಪಟ್ಟಣದಲ್ಲಿ ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಪ್ರಮುಖರ ಸಭೆ ನಡೆಸಲಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.

ಸಂಡೂರಿನಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ , ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ಸಚಿವರು ಭಾಗವಹಿಸಲಿದ್ದು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Karnataka Assembly Elections 2023: Amit Shah to visit Bengaluru and Ballari on Feb 23

ಗೃಹ ಸಚಿವ ಅಮಿತ್ ಶಾ ಕಳೆದ 12 ದಿನಗಳ ಅವಧಿಯಲ್ಲಿ ಎರಡನೇ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಫೆಬ್ರವರಿ 11 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಅವರು ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+