ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸಭಾ ಚುನಾವಣೆ: ಪ್ರಜಾಧ್ವನಿ ಯಾತ್ರೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಚುನಾವಣೆಗೆ ಭರ್ಜರಿಯಾಗಿ ತಯಾರಾಗುತ್ತಿರುವ ಕರ್ನಾಟಕ ಕಾಂಗ್ರೆಸ್, ಎರಡನೇ ಹಂತದಲ್ಲಿ ವಿಧಾನಸಭಾ ಚುನಾವಣಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸಲಿದ್ದು, ಇದಾದ ಬಳಿಕ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಿದೆ.

|
Google Oneindia Kannada News

ಬೆಂಗಳೂರು, ಜನವರಿ. 31: ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲು ಶತಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್ ಮೊದಲ ಹಂತದ ಪ್ರಜಾಧ್ವನಿ ಯಾತ್ರೆಯನ್ನು ಮುಗಿಸಿ, ಈಗ ಎರಡನೇ ಹಂತಕ್ಕೆ ಕಾಲಿಟ್ಟಿದೆ. ಈ ಯಾತ್ರೆಯ ಬಳಿಕ ಕಾಂಗ್ರೆಸ್ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ.

ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಪ್ರಜಾಧ್ವನಿ ಬಸ್ ಯಾತ್ರೆಯ ಮೊದಲ ಹಂತವನ್ನು ಮುಗಿಸಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಫೆಬ್ರವರಿ 9 ರಂದು ಮುಕ್ತಾಯಗೊಳ್ಳುವ ಎರಡನೇ ಹಂತದ ಯಾತ್ರೆಯ ನಂತರವೇ ಪ್ರಕಟಿಸುವ ಸಾಧ್ಯತೆಯಿದೆ. ಪ್ರತಿ ಜಿಲ್ಲೆಗಳ ಅಭ್ಯರ್ಥಿಗಳು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

Assembly Elections: ರಾಜ್ಯ ಚುನಾವಣಾ ಪ್ರಚಾರಕ್ಕೆ ವಾಟ್ಸಾಪ್ ಮುಖ್ಯ ಕೀಲಿ ಕೈ! ಹೇಗೆ ಇಲ್ಲಿದೆ ವಿವರAssembly Elections: ರಾಜ್ಯ ಚುನಾವಣಾ ಪ್ರಚಾರಕ್ಕೆ ವಾಟ್ಸಾಪ್ ಮುಖ್ಯ ಕೀಲಿ ಕೈ! ಹೇಗೆ ಇಲ್ಲಿದೆ ವಿವರ

ಪ್ರಜಾಧ್ವನಿ ಎರಡನೇ ಹಂತದ ಯಾತ್ರೆಯನ್ನು ಪ್ರಾರಂಭಿಸುವ ಮೊದಲು, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್ ಸೇರಿದಂತೆ 36 ಸದಸ್ಯರ ಚುನಾವಣಾ ಸಮಿತಿ ಫೆಬ್ರವರಿ 2 ರಂದು ಟಿಕೆಟ್ ಅಂತಿಮಗೊಳಿಸಲು ಸಭೆ ನಡೆಸಲಿದೆ.

Karnataka Assembly Elections 2023: Congress to announce first list after Praja Dhwani Yatra

ಇನ್ನು ಸುಮಾರು 70 ಹಾಲಿ ಶಾಸಕರು ಹಾಗೂ 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತ 50 ಮಂದಿ ನಾಯಕರಿಗೂ ಟಿಕೆಟ್ ಸಿಗುವ ಸಾಧ್ಯತೆ ಇದೆ. ಮೊದಲ ಪಟ್ಟಿಯಲ್ಲಿ ಸುಮಾರು 120 ಅಭ್ಯರ್ಥಿಗಳ ಹೆಸರು ಪ್ರಕಟವಾಗಬಹುದು ಎಂದು ಮೂಲಗಳು ತಿಳಿಸಿವೆ.

ಉಳಿದ 124 ವಿಧಾನಸಭಾ ಸ್ಥಾನಗಳಿಗೆ ಹಂತ ಹಂತವಾಗಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಸಂಪೂರ್ಣ ಪಟ್ಟಿ ಹೊರಬೀಳಲಿದೆ. ಮಾರ್ಚ್ ಮೊದಲ ವಾರದಲ್ಲಿ ಚುನಾವಣಾ ಆಯೋಗವು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ಸಾಧ್ಯತೆಯಿರುವುದರಿಂದ, ಅಂತಿಮ ಕ್ಷಣದಲ್ಲಿ ಇತರ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಇದೇ ಕಾರಣಕ್ಕೆ ಕೆಲವು ನಿರ್ಣಾಯಕ ಕ್ಷೇತ್ರಗಳನ್ನು ಹೊರತುಪಡಿಸಿ, ಟಿಕೆಟ್‌ಗಳನ್ನು ತ್ವರಿತವಾಗಿ ಅಂತಿಮಗೊಳಿಸಲಾಗುತ್ತದೆ.

Karnataka Assembly Elections 2023: Congress to announce first list after Praja Dhwani Yatra

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಿದ್ದಾರೆ. ಶಿವಕುಮಾರ್, ಸಿದ್ದರಾಮಯ್ಯ ಅಲ್ಲದೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಎಚ್.ಆಂಜನೇಯ, ಕೆ.ಎಚ್.ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಧ್ರುವನಾರಾಯಣ, ಸಲೀಂ ಅಹಮದ್ ಸೇರಿದಂತೆ ಹಿರಿಯ ನಾಯಕರೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ಇನ್ನು, ಜಿಲ್ಲಾವಾರು ನಡೆದ ಪ್ರಜಾಧ್ವನಿ ಯಾತ್ರೆಯ ಬೆನ್ನಲ್ಲೇ ಈಗ ವಿಧಾನಸಭಾ ವ್ಯಾಪ್ತಿಯಲ್ಲಿ ಎರಡನೇ ಹಂತದ ಯಾತ್ರೆಯನ್ನು ಫೆಬ್ರವರಿ ಮೂರರಂದು ಆರಂಭಿಸಲಿದೆ. ಈ ಬಾರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತ್ಯೇಕವಾಗಿ ಬಸ್ ಯಾತ್ರೆಯನ್ನು ನಡೆಸಲಿದ್ದಾರೆ. ಉತ್ತರ ಕರ್ನಾಟಕದ 112 ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ನೇತೃತ್ವದ ತಂಡ, ದಕ್ಷಿಣ ಕರ್ನಾಟಕದ 112 ಕ್ಷೇತ್ರಗಳಲ್ಲಿ ಡಿ. ಕೆ. ಶಿವಕುಮಾರ್ ನೇತೃತ್ವದ ತಂಡ ಪ್ರಜಾಧ್ವನಿ ಯಾತ್ರೆ ನಡೆಸಲಿದೆ.

English summary
Karnataka assembly elections 2023: Karnataka Congress to announce first list of candidates after second leg of Praja Dhwani Yatra. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X