Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ ಎಚ್‌.ಡಿ ಕುಮಾರಸ್ವಾಮಿ ಬ್ರಾಹ್ಮಣ ಹೇಳಿಕೆ: ಹಲವರ ಖಂಡನೆ

ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್​ ಜೋಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿ ರಾಜ್ಯ ರಾಜಕಾರಣದಲ್ಲಿ ಕುಮಾರಸ್ವಾಮಿ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.

ಬೆಂಗಳೂರು, ಫೆಬ್ರವರಿ. 06: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್​ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡಲು ಸಂಘ ನಿರ್ಧರಿಸಿದೆ. ಪ್ರಲ್ಹಾದ್​ ಜೋಶಿ ಮರಾಠಿ ಪೇಶ್ವೆ ಸಮುದಾಯಕ್ಕೆ ಸೇರಿದವರು ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕರು, ಸಮುದಾಯದವರು ಆಕ್ರೋಶ ಹೊರಹಾಕಿದ್ದಾರೆ.

ಬ್ರಾಹ್ಮಣ ಸಮುದಾಯದ ಪ್ರಲ್ಹಾದ್​ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡಿ, ಬಾಕಿ 8 ಮಂದಿ ಉಪಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್​​.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಜೊತೆಗೆ ಬ್ರಾಹ್ಮಣ ಸಮುದಾಯಗಳ ವರ್ಗಗಳ ಬಗ್ಗೆಯೂ ಹೇಳಿದ್ದು, ಇದು ಭಾರಿ ವಿರೋಧಕ್ಕೆ ಕಾರಣವಾಗಿದೆ. ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಬಿಜೆಪಿ ನಾಯಕರು ಎಚ್‌ಡಿಕೆ ವಿರುದ್ಧ ಕಿಡಿಕಾರಿದ್ದಾರೆ.

ಬ್ರಾಹ್ಮಣ ಸಮುದಾಯದ ಕ್ಷಮೆಯಾಚಿಸಬೇಕು- ಆರ್ ಅಶೋಕ್

ಬ್ರಾಹ್ಮಣ ಸಮುದಾಯದ ಕ್ಷಮೆಯಾಚಿಸಬೇಕು- ಆರ್ ಅಶೋಕ್

ಸ್ವಾತಂತ್ರ್ಯ ಹೋರಾಟಕ್ಕೆ ಬ್ರಾಹ್ಮಣರು ಮಹತ್ವದ ಕೊಡುಗೆ ನೀಡಿದ್ದಾರೆ ಎಂದಿರುವ ಬಿಜೆಪಿ ನಾಯಕ, ಕಂದಾಯ ಸಚಿವ ಆರ್ ಅಶೋಕ ಸೋಮವಾರ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ರೀತಿ ಯಾವುದೇ ಜಾತಿಯನ್ನು ಕೀಳಾಗಿ ತೋರಿಸಿ ಮಾತನಾಡುವುದು ಮಾಜಿ ಮುಖ್ಯಮಂತ್ರಿಗೆ ಕೀರ್ತಿ ತರುವುದಿಲ್ಲ ಎಂದಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ ಬ್ರಾಹ್ಮಣ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ ಅವರು, ''ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸೋಲುತ್ತದೆ ಎಂದು ತಿಳಿದೂ ಅವರು ಅಸಹಾಯಕತೆ ಮತ್ತು ಹತಾಶೆಯಿಂದ ಮಾತನಾಡುತ್ತಿದ್ದಾರೆಂದು ತೋರುತ್ತಿದೆ, ಅವರು ಕೂಡಲೇ ಬ್ರಾಹ್ಮಣ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತೇನೆ" ಎಂದಿದ್ದಾರೆ.

ಬ್ರಾಹ್ಮಣರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?

ಬ್ರಾಹ್ಮಣರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?

ಅಷ್ಟಕ್ಕೂ ಇಷ್ಟು ವಿರೋಧಕ್ಕೆ ಕಾರಣವಾಗಿರುವ ಹೇಳಿಕೆ ಏನು ಎನ್ನುವುದು ನೋಡುವುದಾದರೆ, "ಬ್ರಾಹ್ಮಣ ಸಮುದಾಯದ ಪ್ರಲ್ಹಾದ್​ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡಲು ಸಂಘ ನಿರ್ಧರಿಸಿದೆ. ಜೋಶಿ ಅವರು ನಮ್ಮ ಹಳೆಯ ಕಾಲದ ಬ್ರಾಹ್ಮಣರಲ್ಲ, ಬ್ರಾಹ್ಮಣರಲ್ಲಿ ಎರಡು ಮೂರು ವಿಧಗಳಿವೆ. ಶೃಂಗೇರಿಯ ಮಠ ಒಡೆದ ಶೃಂಗೇರಿ ಮಠವನ್ನು ಕೆಡವಿದ ಮಹಾರಾಷ್ಟ್ರದ ಪೇಶ್ವೆಗಳ ಬ್ರಾಹ್ಮಣ ವರ್ಗ ಜೋಶಿ ಅವರದ್ದು. ಮಹಾತ್ಮ ಗಾಂಧಿ ಅವರನ್ನು ಕೊಂದ ಬ್ರಾಹ್ಮಣರ ವರ್ಗದವರು ಇವರು. ಇವರು ನಮ್ಮ ಭಾಗದ ಹಳೆಯ ಬ್ರಾಹ್ಮಣರಂತೆ ಅಲ್ಲ, ಇವರು ಶೃಂಗೇರಿ ಮಠಕ್ಕೆ ಸೇರಿದವರಲ್ಲ. ಮರಾಠಿ ಪೇಶ್ವೆ ಸಮುದಾಯಕ್ಕೆ ಸೇರಿದವರು" ಎಂದು ಕುಮಾರಸ್ವಾಮಿ ಹೇಳಿದ್ದರು.

ಇದರ ಜೊತೆಗೆ "ನಮ್ಮ ಭಾಗದ ಹಳೇ ಬ್ರಾಹ್ಮಣರು ಸರ್ವೇಜನ ಸುಖಿನೋ ಭವಂತು ಅನ್ನುವವರು. ಸರ್ವ ಜನರ ಕ್ಷೇಮ ಬಯಸುವವರು, ಆದರೆ ಇವರು ದೇಶಕ್ಕೆ ಕೊಡುಗೆ ನೀಡಿದವರನ್ನ ಹತ್ಯೆ ಮಾಡಿದವರು" ಎಂದು ಟೀಕಿಸಿದ್ದರು.

ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆ

ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆ

ಎಚ್.ಡಿ.ಕುಮಾರಸ್ವಾಮಿ ಬ್ರಾಹ್ಮಣ ಹೇಳಿಕೆಗೆ ನಟ, ಹೋರಾಟಗಾರ ಚೇತನ್ ಕೂಡ ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ಟೀಕಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದಿರುವ ಅವರು, "ಎಚ್‌ ಡಿ ಕುಮಾರಸ್ವಾಮಿ ಹೇಳುತ್ತಾರೆ, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು. ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ' ಬ್ರಾಹ್ಮಣರಲ್ಲ. ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ' ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ. ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ..! ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆ, ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ" ಎಂದು ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕಿಡಿ

ಕುಮಾರಸ್ವಾಮಿ ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕಿಡಿ

ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಆಕ್ಷೇಪ ವ್ಯಕ್ತಪಡಿಸಿದ್ದು, ಬ್ರಾಹ್ಮಣರ ಬಗ್ಗೆ ಸೂಕ್ತ ಮಾಹಿತಿ ಇಲ್ಲದೆ, ಬಾಯಿಗೆ ಬಂದಂತೆ ಮಾತಾನಾಡಿದ್ದಾರೆ. ಈ ಕೂಡಲೇ ಎಚ್​.ಡಿ. ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು, ಪೇಜಾವರ ಶ್ರೀ ಕೂಡ ಎಚ್‌ಡಿಕೆ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಬ್ರಾಹ್ಮಣರು ಅಲ್ಪ ಸಂಖ್ಯಾತರು, ಸಮುದಾಯದಲ್ಲಿ ಯಾರೂ ಧ್ವನಿ ಎತ್ತಿ ಮಾತನಾಡುವವರು ಇಲ್ಲ. ಸಂಖ್ಯಾಬಲ ಇಲ್ಲ. ಒಂದು ವೇಳೆ ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಯಾಕೆ ಬ್ರಾಹ್ಮಣರು ಸಿಎಂ ಆಗಬಾರದು? ಎಂದು ಪ್ರಶ್ನಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+