ವಿಧಾನಸಭಾ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ - ಸಿದ್ದರಾಮಯ್ಯ ಮಾತುಕತೆ, ಟಿಕೆಟ್ ಹಂಚಿಕೆ ಕುರಿತು ಕುತೂಹಲ

ಕಾಂಗ್ರೆಸ್ ಪಕ್ಷದ ಮಹಾಧೀವೇಶನದ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು, ಫೆಬ್ರವರಿ. 27: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ನಿರೀಕ್ಷೆಯು ಹೆಚ್ಚುತ್ತ ಆಹೊಗುತ್ತಿದೆ. ಪಕ್ಷಗಳು ಟುಕೆಟ್ ಘೋಷಣೆ ಮಾಡದ ಹಿನ್ನೆಲೆ ಹಿರಿಯ ನಾಯಕರ ಸಭೆಗಳು, ಭೇಟಿಗಳಿಗೆ ವಿಶೇಷ ಅರ್ಥ ಹುಡುಕುತ್ತಿದ್ದಾರೆ. ಇಂತಹದ್ದೆ ರೀರಿ ಸಿದ್ದರಾಮಯ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯೂ ಕುತೂಹಲ ಮೂಡಿಸಿದೆ.

ಕಾಂಗ್ರೆಸ್ ಪಕ್ಷದ ಮಹಾಧೀವೇಶನದ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇಬ್ಬರು ನಾಯಕರು ಸುಮಾರು ನಲವತ್ತೈದು ನಿಮಿಷಕ್ಕೂ ಹೆಚ್ಚು ಕಾಲ ಮಾತನಾಡಿದ್ದಾರೆ ಎನ್ನಲಾಗಿದ್ದು, ಟಿಕೆಟ್ ಹಂಚಿಕೆ, ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿಬಹುದು ಎಂದು ಮೂಲಗಳು ತಿಳಿಸಿವೆ.

Karnataka Assembly Elections 2023: Siddaramaiah and Mallikarjun Kharge Meeting

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಸ್ತವ್ಯವಿದ್ದ ಹೋಟೆಲ್‌ ಕೊಠಡಿಯ ಎದುರಿನ ಕೊಠಡಿಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡಾ ವಾಸ್ತವ್ಯವಿದ್ದರು. ಶನಿವಾರ ರಾತ್ರಿ ಮಲ್ಲಿಕಾರ್ಜುನ ಖರ್ಗೆಯವರ ಕೊಠಡಿಗೆ ತೆರಳಿದ ಸಿದ್ದರಾಮಯ್ಯ ಅವರು ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಉದ್ದವಾಗಿದೆ. ರಾಜ್ಯ ಚುನಾವಣಾ ಸಮಿತಿ ಈಗಾಗಲೇ 150 ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳನ್ನು ಶಿಫಾರಸು ಮಾಡಿದೆ. ಈ ಪಟ್ಟಿಯನ್ನು ಸ್ಕ್ರೀನಿಂಗ್ ಸಮಿತಿಯೂ ಪರಿಶೀಲನೆ ಮಾಡಿದೆ. ಆದರೆ, ಎಐಸಿಸಿಯ ಕೇಂದ್ರ ಚುನಾವಣಾ ಸಮಿತಿ ಇನ್ನೂ ರಚನೆಯಾಗಿಲ್ಲ. ಆದಾದ ನಂತರ ಟಿಕೆಟ್ ಹಂಚಿಕೆಯ ಅಂತಿಮ ಪಟ್ಟಿ ಸಿದ್ಧವಾಗಲಿದೆ.

ಶೀಘ್ರದಲ್ಲೇ ಕೇಂದ್ರ ಚುನಾವಣಾ ಸಮಿತಿ ರಚಿಸಿ ಪಟ್ಟಿ ಬಿಡುಗಡೆ ಮಾಡುವ ಬಗ್ಗೆ ಕಾಂಗ್ರೆಸ್ ಸುಳಿವು ನೀಡಿದೆ. ಇಬ್ಬರು ಹಿರಿಯ ನಾಯಕರು ಟಿಕೆಟ್ ಆಕಾಂಕ್ಷಿಗಳ ಬಗ್ಗೆ, ರಾಜಕೀಯ ಸ್ಥಿತಿಗತಿ ಮತ್ತು ಮುಂದಿನ ಚುನಾವಣೆಯಲ್ಲಿ ಪಕ್ಷ ಹೇಗೆ ತೊಡಗಿಸಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಕ್ಷೇತ್ರ ಆಯ್ಕೆ ಬಗ್ಗೆಯೂ ಮಾತುಕತೆ ನಡೆದಿರುವ ಸಾಧ್ಯತೆಗಳಿವೆ.

Karnataka Assembly Elections 2023: Siddaramaiah and Mallikarjun Kharge Meeting

ಸಿದ್ದರಾಮಯ್ಯ ಅವರ ಕ್ಷೇತ್ರ ಆಯ್ಕೆಯ ಬಗ್ಗೆ ಈಗಾಗಲೇ ಅವರು ತಿಳಿಸಿದ್ದರೂ ಕೂಡ ಹೈಕಮಾಂಡ್ ಮಾತಿನಂತೆ ಅವರು ಹೇಳುವಲ್ಲಿ ಸ್ಪರ್ಧಿಸುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಬಾದಾಮಿಯಿಮದ ಸ್ಪರ್ಧೆ ಮಾಡುವುದಿಲ್ಲ ಎಂದು ಅದಕ್ಕೆ ಸಮಂಜಸ ಕಾರಣಗಳನ್ನು ನೀಡಿದ್ದಾರೆ. ಇನ್ನು, ವರುಣಾದಲ್ಲಿ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಯತಂದ್ರ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಉಳಿದಿರುವುದು ಕೋಲಾರ ವಿಧಾನಸಭಾ ಕ್ಷೇತ್ರ.

ಒಟ್ಟಾರೆ, ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಬದಲಾವಣೆಗಳು ನಡೆಯುತ್ತಿರುವ ಈ ಸಮಯದಲ್ಲಿ ಇಬ್ಬರು ಪ್ರಭಾವಿ ನಾಯಕರು ರಹಜಸ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸಿರುವುದು ಹೊಸ ಕುತೂಹಲಕ್ಕೆ ಕಾರಣವಾಗಿದೆ. ಇದಲ್ಲದೆ ಟಿಕೆಟ್ ಆಕಾಂಕ್ಷೆಗಳಲ್ಲಿ ಬೇಗ ಅಂತಿಮ ಪಟ್ಟಿ ಬಿಡುಗಡಟೆಯಾಗುವ ಭರವಸೆಯನ್ನೂ ಮೂಡಿಸಿದೆ. ರಾಜ್ಯದಲ್ಲಿ ಏಪ್ರೀಲ್, ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+