• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಧಾನಮಂಡಲ ಅಧಿವೇಶನ ಆರಂಭ: ಸರ್ಕಾರದ ಮೇಲೆ ಮುಗಿಬೀಳಲಿರುವ ವಿಪಕ್ಷ

|

ಬೆಂಗಳೂರು, ಮಾರ್ಚ್ 4: ಇಂದಿನಿಂದ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಸುಮಾರು ಮಾರ್ಚ್ ತಿಂಗಳ ಅಂತ್ಯದವರೆಗೆ ಈ ಅಧಿವೇಶನ ನಡೆಯಲಿದೆ.

ಸೋಮವಾರ (ಮಾ.8) ರಂದು ಸಿಎಂ ಯಡಿಯೂರಪ್ಪ ಅವರು ರಾಜ್ಯದ ಬಜೆಟ್ ಮಂಡನೆ ಮಾಡಲಿದ್ದಾರೆ. ಅದಕ್ಕೂ ಮುನ್ನ ಗುರುವಾರ ಮತ್ತು ಶುಕ್ರವಾರ ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ "ಒಂದು ರಾಷ್ಟ್ರ ಒಂದು ಚುನಾವಣೆ' ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ.

ರಮೇಶ್ ಜಾರಕಿಹೊಳಿ ಸಿಡಿ: ಸಹೋದರ ಸತೀಶ್ ಸಿಡಿಸಿದ ಹೊಸ ಬಾಂಬ್

ವಿಧಾನಸಭೆ ಕಲಾಪ ಪ್ರಾರಂಭವಾದ ಕೂಡಲೇ "ಒಂದು ರಾಷ್ಟ್ರ ಒಂದು ಚುನಾವಣೆ' ಬಗ್ಗೆ ಚರ್ಚೆಗೆ ಅವಕಾಶ ಕೊಡಲಾಗಿದೆ. ಮೇಲ್ಮನೆಯಲ್ಲಿ ಮೊದಲು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವ ಕಾರ್ಯ ಕಲಾಪ ನಡೆಯುತ್ತದೆ.

ಆ ಬಳಿಕ ಪ್ರಶ್ನೋತ್ತರ ಮತ್ತು ನಿಯಮ 330ರ ಪ್ರಕಾರ ಗಮನ ಸೆಳೆಯುವ ಸೂಚನೆ, ನಂತರ "ಒಂದು ರಾಷ್ಟ್ರ ಮತ್ತು ಚುನಾವಣೆ' ಬಗ್ಗೆ ಚರ್ಚೆ ನಡೆಯಲಿದೆ. ಈ ಚರ್ಚೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಬಗ್ಗೆ ಮಾತ್ರ ಇರಲಿದೆ. ರಾಜ್ಯ ಚುನಾವಣೆ ಆಯೋಗ ನಡೆಸುವ ಚುನಾವಣೆ ಬಗ್ಗೆ ಚರ್ಚೆ ಆಗುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ.

ಇತ್ತ ಕಲಾಪದಲ್ಲಿ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಈಗಾಗಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೂ ಅಧಿವೇಶನದಲ್ಲಿ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದ ಮೇಲೆ ಮುಗಿಬೀಳುವ ಸಾಧ್ಯತೆ ಇದೆ. ರಾಸಲೀಲೆ ಸಿಡಿ ಕುರಿತು ಪ್ರಸ್ತಾಪ ಮಾಡಿ ಸರ್ಕಾರಕ್ಕೆ ಮುಜುಗರ ತಂದೊಡ್ಡುವ ಯೋಚನೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮಾಡಿವೆ.

ರಮೇಶ್ ಜಾರಕಿಹೊಳಿ ಸಿಡಿ ವಿಚಾರ ಪ್ರಸ್ತಾಪಿಸಿ ಸರ್ಕಾರಕ್ಕೆ ಮುಜುಗರ ತರುವ ತಂತ್ರವಿದ್ದು, ಆ ಮೂಲಕ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಹಿನ್ನಡೆ ಮಾಡುವುದಾಗಿದೆ. ಸದ್ಯ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮುಜುಗರ ಉಂಟುಮಾಡುವ ಮಾಡುವುದಾಗಿದೆ.

   ಅಬ್ಬಾ ಎಂಥಾ ಕೆಟ್ಟ ರಾಜಕಾರಣಿಗಳು ! ನಾಚಿಗೆಡ್ ಸರ್ಕಾರ ! | Oneindia Kannada

   ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣವನ್ನು ತನಿಖೆಗೆ ಒತ್ತಾಯಿಸಿ ಸಿಎಂ ಯಡಿಯೂರಪ್ಪರನ್ನು ಇಕ್ಕಟ್ಟಿಗೆ ಸಿಲುಕಿಸಬಹುದು.

   English summary
   The Karnataka Budget Session will start from March 4 and will be held till the end of March.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X