ಕರ್ನಾಟಕ ಬಂದ್: ನಗರದಲ್ಲಿ ನಿಷೇಧಾಜ್ಞೆ ಜಾರಿ, ಪೊಲೀಸರು ಕೊಟ್ಟ ಎಚ್ಚರಿಕೆ ಏನು?
ಬೆಂಗಳೂರು, ಸೆಪ್ಟಂಬರ್ 28: ಕಾವೇರಿ ನೀರಿಗಾಗಿ ನಾಳೆ ಸೆಪ್ಟಂಬರ್ 29ರಂದು ಶುಕ್ರವಾರ ಅಂಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಇದನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಬಂದ್ ವೇಳೆ ಯಾರಾದರೂ ಬಲವಂತವಾಗಿ ಬಂದ್ ಮಾಡಿಸಲು ಯತ್ನಿಸಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿದ್ದೇವೆ. ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಾಳೆ ಒಂದು ದಿನ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಈ ನಿಷೇಧಾಜ್ಞೆಯು ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಇದೊಂದಿಗೆ ಬಂದ್ ವೇಳೆ ಯಾವುದೇ ಮರವಣಿಗೆ, ಸಭೆಗಳಿಗೆ ಅವಕಾಶ ನೀಡಲಾಗಿಲ್ಲ. ಒಂದು ವೇಳೆ ಪ್ರತಿಭಟನೆ ನಡೆಸಿದಾಗ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಪ್ರತಿಭಟನೆಗೆ ಕರೆ ನೀಡಿದವರ ಹಾನಿಗೆ ಹೊಣೆಗಾರರಾಗಿರುತ್ತಾರೆ ಎಂದು ಹೇಳಿದರು.
ತೊಂದರೆ ಕೊಡುವವರ ವಿರುದ್ಧ ಸೂಕ್ತ ಕ್ರಮ
ಸಾರ್ವಜನಿಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ರಸ್ತೆಯಲ್ಲಿ ಇನ್ನಿತರ ವಾಹನಗಳನ್ನು ತಡೆದರೆ, ಸಂಚಾರಕ್ಕೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ನಾಗರಿಕರಿಗೆ ತೊಂದರೆ ಕೊಟ್ಟಿದ್ದೇ ಆದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ. ದೂರುಗಳನ್ನು ದಾಖಲಿಸಲಿದ್ದೇವೆ ಎಂದರು.
ಕರ್ನಾಟಕ ಬಂದ್ ಪ್ರಯುಕ್ತ ಸುರಕ್ಷತಾ ದೃಷ್ಟಿಯಿಂದ KSRP ಮತ್ತು ಸಿಆರ್ಪಿಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ. ಇನ್ನೂ ಹೋಂ ಗಾರ್ಡ್ ಗಳನ್ನು ನಿಯೋಜನೆ ಮಾಡಲಾಗಿದೆ. ಬಂದ್ ವೇಳೆ ಯಾವುದೇ ಮೆರವಣಿಗೆ ಮತ್ತು ರಾಲಿಗೆ ಅವಕಾಶ ಇಲ್ಲ. ಪ್ರತಿಭಟನಾಕಾರರು ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಮಾಡಲು ಅವಕಾಶ ಇದೆ ಎಂದು ಹೇಳಿದರು.
ಬೆಂಗಳೂರು ಬಂದ್ ವೇಳೆ ಜಯನಗರದಲ್ಲಿ ವಿವಿಧ ಹೋಟೆಲ್‌ಗಲ್ಲಿ ಹಲ್ಲೆ, ಕಲ್ಲು ತೂರಾಟ ಸಂಬಂಧ ಪ್ರತಿಕ್ರಿಯಿಸಿದ ಅವರು, ಕಲುತೂರಿದವರ ಮೇಲೆ ವಿರುದ್ಧ FIR ದಾಖಲಿಸಲಾಗಿದೆ. ದ್ವಂಸ ಮಾಡಿದ ಆರೋಪಿಗಳನ್ನು ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ವಿವರಿಸಿದರು.












Click it and Unblock the Notifications