Karnataka bandh: ಸೆಪ್ಟೆಂಬರ್ 29ರಂದು ಬೆಂಗಳೂರು ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು, ಸೆಪ್ಟೆಂಬರ್, 28: ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೆಪ್ಟೆಂಬರ್ 29ರಂದು ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ರಜೆ ಘೋಷಣೆ ವಿಚಾರದಲ್ಲಿ ಗೊಂದಲ
ಕಾವೇರಿಗಾಗಿ ಸೆಪ್ಟೆಂಬರ್ 29ರಂದು ಹಲವು ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಅಲ್ಲದೆ ಈಗಾಗಲೇ ಎಲ್ಲಾ ಬಹುತೇಕ ಜಿಲ್ಲೆಗಳಲ್ಲೂ ಈ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ. ಹಾಗೆಯೇ ಹಾಸನದಲ್ಲಿ ಸಂಪೂರ್ಣ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟವು ಶಾಲೆಗಳಿಗೆ ರಜೆ ಘೋಷಣೆ ಮಾಡಿವೆ. ಆದರೆ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳ ರಜೆ ಬಗ್ಗೆ ಇನ್ನೂ ಯಾವುದೇ ತೀರ್ಮಾನಕ್ಕೆ ಬರದಿರುವುದು ವಿದ್ಯಾರ್ಥಿಗಳ ಗೊಂದಲಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟವು ಮಕ್ಕಳಿಗೆ ಅನಾನುಕೂಲ ಆಗದಂತೆ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಮತ್ತೊಂದೆಡೆ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳ ರಜೆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ಆಯಾ ತಾಲೂಕಿನ ಪರಿಸ್ಥಿತಿ ಗಮನಿಸಿ ರಜೆ ಬಗ್ಗೆ ತೀರ್ಮಾನ ಮಾಡಲು ಬಿಇಒಗಳಿಗೆ ಸೂಚನೆ ನೀಡಲಾಗಿದೆ. ಆದರೆ ಜಿಲ್ಲಾಮಟ್ಟದಲ್ಲಿ ಯಾವುದೇ ತೀರ್ಮಾನ ಮಾಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಗೊಂದಲಕ್ಕೆ ಒಳಗಾಗಿದ್ದಾರೆ.
ಈಗಾಗಲೇ ಕನ್ನಡಪರ ಹಾಗೂ ರೈತಪರ ಸಂಘಟನೆಗಳು ಹಾಸನ ಸಂಪೂರ್ಣ ಬಂದ್ ಕರೆ ನೀಡಿವೆ. ಈ ಬಂದ್‌ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ ಶಿಕ್ಷಣ ಇಲಾಖೆ ಸರ್ಕಾರ ಶಾಲೆಗಳ ರಜೆ ಘೋಷಣೆ ಬಗ್ಗೆ ತೀರ್ಮಾನ ಮಾಡಿಲ್ಲದಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲಕ್ಕೆ ಒಳಗಾಗುವಂತೆ ಮಾಡಿದೆ.












Click it and Unblock the Notifications