ಮಕ್ಕಳೇ ಶನಿವಾರ ಶಾಲೆಗೆ ರಜಾ, ಆಟವಾಡಿಕೊಂಡು ಮಜವಾಗಿರಿ
ಬೆಂಗಳೂರು, ಸೆಪ್ಟೆಂಬರ್ 25 : ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ರಜೆ ನೀಡುವ ಅಧಿಕಾರವನ್ನು ಡಿಡಿಪಿಐಗಳಿಗೆ ನೀಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ಎಸ್.ಸತ್ಯಮೂರ್ತಿ ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದ್ದು, ಬೆಂಗಳೂರು ನಗರದ ವ್ಯಾಪ್ತಿಗೆ ಮಾತ್ರ ಈ ಆದೇಶ ಅನ್ವಯವಾಗಲಿದೆ ಎಂದು ಹೇಳಿದ್ದಾರೆ. [ಶನಿವಾರ ಬಂದ್ : ಏನಿರುತ್ತೆ, ಏನಿರಲ್ಲ?]

ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಬಂದ್ ಪರಿಸ್ಥಿತಿ ನೋಡಿಕೊಂಡು ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಜಿಲ್ಲೆಯ ಉಪ ನಿರ್ದೇಶಕರಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ ಶಾಲಾ-ಕಾಲೇಜಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. [ಕರ್ನಾಟಕ ಬಂದ್ ವಾಟಾಳ್ ನಾಗರಾಜ್ ಸಂದರ್ಶನ]
ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ಕುಸ್ಮಾ ಹಾಗೂ ಕ್ಯಾಮ್ಸ್ ಸಹ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿವೆ. ಬೆಂಗಳೂರು ನಗರದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಉಳಿದ ಜಿಲ್ಲೆಗಳಲ್ಲಿ ರಜೆ ನೀಡುವ ಅಧಿಕಾರವನ್ನು ಶಾಲಾ ಆಡಳಿತ ಮಂಡಳಿಗೆ ನೀಡಲಾಗಿದೆ.












Click it and Unblock the Notifications