ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಬಂದ್: ಮೆಜೆಸ್ಟಿಕ್ ನಮ್ಮ ಮೆಟ್ರೋ ನಿಲ್ದಾಣ ಬಂದ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 05: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ.

ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ, ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲು ಮೆಟ್ರೋ ನಿಲ್ದಾಣವನ್ನು ಮುಚ್ಚಲಾಗಿದೆ.

ಇಂದು ಬೆಳಗ್ಗೆ ಎಂದಿನಂತೆ ಮೆಟ್ರೋ ಸಂಚರಿಸಿತ್ತು, ಬಳಿಕ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ತೆರಳುವ ಮೆಟ್ರೋ ದ್ವಾರವನ್ನು ಬಂದ್ ಮಾಡಲಾಗಿತ್ತು. ಇದೀಗ ಮೆಟ್ರೋ ಮಾರ್ಗವನ್ನೇ ಸ್ಥಗಿತಗೊಳಿಸಿರುವ ಮಾಹಿತಿ ಲಭ್ಯವಾಗಿದೆ.

Karnataka Bandh: Majestic Metro Station Closed As a Precautionary Measure

ಮೇಲಾಧಿಕಾರಿಗಳ ಸೂಚನೆ ಮೇರೆಗೆ ಬಂದ್‌ ಮಾಡುತ್ತಿರುವುದಾಗಿ ಸಿಬ್ಬಂದಿ ತಿಳಿಸಿದ್ದಾರೆ. ಬಂದ್‌ ಆದ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಬಂದ ಪ್ರಯಾಣಿಕರು ವಾಪಸ್‌ ತೆರಳುತ್ತಿದ್ದಾರೆ.

ನೇರಳೆ ಮತ್ತು ಹಸಿರು ಮಾರ್ಗಗಳನ್ನು ಜೋಡಿಸುವ ಕಂಪೇಗೌಡ ನಿಲ್ದಾಣದಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಸುತ್ತಾರೆ. ಆದರೆ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಈ ನಿಲ್ದಾಣವನ್ನು ಬಂದ್‌ ಮಾಡಲಾಗಿದೆ.

ಈಗಾಗಲೇ ಟೌನ್‌ ಹಾಲ್‌ನಲ್ಲಿ ಪ್ರತಿಭಟನೆ ಆರಂಭವಾಗಿದೆ, ಪ್ರತಿಭಟನಾ ನಿರತ ಮೂರನೇ ತಂಡವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನುಸಾಕಷ್ಟು ಕಾರ್ಯಕರ್ತರು ಮಾಸ್ಕ್ ಧರಿಸಿದೆ, ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳದ ಕಾರಣ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ ಎನ್ನುವ ಆತಂಕವೂ ಕಾಡಿದೆ.

English summary
Pro-Kannada groups have called for a bandh today against the formation of Maratha Development Authority. Majestic Metro Station Closed As a Precautionary Measure.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X