ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಬಂದ್: ಬೆಂಗಳೂರಲ್ಲಿ 100ಕ್ಕೂ ರೌಡಿಶೀಟರ್‌ಗಳನ್ನು ವಶಕ್ಕೆ ಪಡೆದ ಪೊಲೀಸರು

|
Google Oneindia Kannada News

ಬೆಂಗಳೂರು, ಡಿಸೆಂಬರ್ 05: ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ್ ಬಂದ್‌ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆವಹಿಸಲು 100ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Recommended Video

ಸ್ತಬ್ದವಾಗತ್ತಾ ಕರ್ನಾಟಕ | Oneindia Kannada

ಇಂದು ಮರಾಠ ಅಭಿವೃದ್ಧಿ ಸ್ಥಾಪನೆ ವಿರೋಧಿಸಿ ಹಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.ಇಂದು ಬೆಳಗ್ಗೆ ಟೌನ್‌ಹಾಲ್‌ನಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಹೊರಡಲಿದ್ದಾರೆ.

ಹೀಗಾಗಿ ಟೌನ್ ಹಾಲ್ ಬಳಿ ಪೊಲೀಸ್ ಭದ್ರತೆ ಹೆಚ್ಚು ಮಾಡಲಾಗಿದೆ. ಒಬ್ಬರು ಇಬ್ಬರು ಎಸಿಪಿ, ಒಬ್ಬರು ಡಿಸಿಪಿ ನೇತೃತ್ವದಲ್ಲಿ 200 ಜನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ನಿಯಂತ್ರಣಕ್ಕೆ ವಾಟರ್ ಜೆಟ್ ಕೂಡ ತರಲಾಗಿದೆ.

Karnataka Bandh: More Than 100 Rowdy Sheeters Taken In To Custody In Bengaluru

ನಗರದ ಎಲ್ಲಾ ಡಿವಿಜನ್ ಗಳಲ್ಲೂ, ಅಪರಾಧ ಹಿನ್ನೆಲೆ ಇರುವ ರೌಡಿಶೀಟರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಶ್ಚಿಮ ವಿಭಾಗದಲ್ಲಿ ನೂರಕ್ಕೂ ಹೆಚ್ಚು ರೌಡಿಶೀಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೆಲವರನ್ನು ವಶಕ್ಕೆ ಪಡೆದ್ರೆ ಮತ್ತೆ ಕೆಲವರನ್ನು ಬಂದ್, ಪ್ರತಿಭಟನೆ ಹಾಗೂ ಗಲಾಟೆಗಳಲ್ಲಿ ಭಾಗವಹಿಸುವಿದಿಲ್ಲ ಎಂದು ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ್ದಾರೆ.

Karnataka Bandh: More Than 100 Rowdy Sheeters Taken In To Custody In Bengaluru

ಇಂದಿನ ಪ್ರತಿಭಟನೆ ಕೊನೆಯಲ್ಲ, ಮರಾಠ ಅಭಿವೃದ್ಧಿ ನಿಗಮವನ್ನು ಹಿಂಪಡೆಯುವವರೆಗೂ ನಾವು ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.

ಮೆಜೆಸ್ಟಿಕ್‌ನಿಂದ ವಿವಿಧ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಆರಂಭಗೊಂಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಒಂದು ಕೆಎಸ್‍ಆರ್‍ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.

Karnataka Bandh: More Than 100 Rowdy Sheeters Taken In To Custody In Bengaluru

ಟೌನ್‌ಹಾಲ್‌ನಲ್ಲಿ ಈಗಾಗಲೇ ಪ್ರತಿಭಟನೆ ಆರಂಭವಾಗಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಹಲವು ಕಾಲರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

English summary
Pro-Kannada groups have called for a bandh today against the formation of Maratha Development Authority. More Than 100 Rowdy Sheeters Taken In To Custody In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X