Karnataka Bandh: ಕರ್ನಾಟಕ ಬಂದ್ ಶಾಲಾ - ಕಾಲೇಜುಗಳಿಗೆ ರಜೆ ?
Karnataka Bandh: ಕರ್ನಾಟಕದಲ್ಲಿ ಮರಾಠಿ ಪುಂಡರಿಂದ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆ, ಎಂಇಎಸ್ ಸಂಘಟನೆ ನಿಷೇಧ ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಕೈಬಿಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾರ್ಚ್ 22ರಂದು ಕನ್ನಡಪರ ಸಂಘಟನೆಗಳಿಂದ ಬಂದ್ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಮಾರ್ಚ್ 22ರ ಶನಿವಾರದಂದು ಹಲವು ಸೇವೆಗಳು ಇರುವುದಿಲ್ಲ ಎಂದು ಈಗಾಗಲೇ ಹೇಳಲಾಗಿದೆ. ಬಂದ್‌ಗೆ ಕೆಲವು ಶಾಲಾ - ಕಾಲೇಜುಗಳು ಬೆಂಬಲ ಸೂಚಿಸಿರುವುದು ಇದೀಗ ಭಾರೀ ಗೊಂದಲಕ್ಕೆ ಕಾರಣವಾಗಿದೆ.
ಕರ್ನಾಟಕದಲ್ಲಿ ಮರಾಠಿ ಪುಂಡರು ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯ ಹಾವಳಿ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕಬೇಕಾಗಿದೆ. ಇಂಇಎಸ್ ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ವಿವಿಧ ಕನ್ನಡ ಪರ ಗುಂಪುಗಳ ಸಂಘಟನೆಗಳ ಒಕ್ಕೂಟವು ಮಾರ್ಚ್ 22ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಬಂದ್‌ಗೆ ಕರೆ ನೀಡಿದೆ. ಆದರೆ, ಈ ಬಂದ್‌ಗೆ ಕೆಲವು ಸಂಘಟನೆಗಳು ಬೆಂಬಲ ನೀಡಿಲ್ಲ. ಅಲ್ಲದೇ ಕೆಲವು ವಿಷಯದಲ್ಲಿ ಗೊಂದಲ ಮುಂದುವರಿದಿದೆ. ಅದರಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಇರುವುದು ಸಹ ಪ್ರಮುಖವಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ವಿವಿಧ ತರಗತಿಗಳ ಪರೀಕ್ಷೆಗಳು ನಡೆಯುತ್ತಿರುವುದರ ನಡುವೆಯೇ ಬಂದ್ ಸಹ ಇರುವುದು ಹಲವು ಗೊಂದಲ ಹಾಗೂ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಂದ್‌ಗೆ ಕೆಲವು ಶಾಲಾ - ಕಾಲೇಜುಗಳು ನೈತಿಕ ಬೆಂಬಲವನ್ನು ವ್ಯಕ್ತಪಡಿಸಿದೆ.
ಶಾಲೆಗಳ ಸಂಘಟನೆಯ ಮುಖ್ಯಸ್ಥರು ನಾವೂ ಸಹ ಪ್ರತಿಭಟನೆಯಲ್ಲಿ ಭಾಗವಹಿಸುವುದಕ್ಕೆ ಇಚ್ಛಿಸುತ್ತೇವೆ. ಆದರೆ ಕರ್ನಾಟಕದಲ್ಲಿ ಪರೀಕ್ಷೆಗಳು ನಡೆದಿವೆ. ಹೀಗಾಗಿ, ನೈತಿಕ ಬೆಂಬಲವನ್ನು ಮಾತ್ರ ನೀಡುತ್ತಿದ್ದೇವೆ ಎಂದು ಹೇಳಿರುವುದು ವರದಿಯಾಗಿದೆ. ಪರೀಕ್ಷೆಗಳನ್ನು ಮುಂದೂಡುವುದು ಅಥವಾ ರದ್ದು ಮಾಡುವುದರಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳಲ್ಲಿ ಗೊಂದಲ: ಪರೀಕ್ಷೆ ಅವಧಿಯಲ್ಲಿ ಬಂದ್ ನಡೆಯುತ್ತಿರುವುದು ಭಾರೀ ಗೊಂದಲಕ್ಕೆ ಕಾರಣವಾಗಿದೆ. ಇದು ಮಕ್ಕಳ ಪರೀಕ್ಷಾ ಅವಧಿಯಾಗಿರುವುದರಿಂದ ಎಲ್ಲರೂ ಪರೀಕ್ಷೆಯ ಗೊಂದಲದಲ್ಲಿ ಇದ್ದಾರೆ. ಈ ರೀತಿ ಇರುವಾಗಲೇ ಬಂದ್ ದಿನಾಂಕವೂ ಸೇಮ್ ಇರುವುದು ಗೊಂದಲ ಮೂಡಿಸಿದೆ.
ಪರೀಕ್ಷೆಯ ಅವಧಿಯಲ್ಲೇ ಬಂದ್ ಮಾಡಬಾರದು ಬಂದ್ ಮುಂದೂಡಬೇಕು ಎಂದು ಮನವಿ ಮಾಡಿದರೂ ಕನ್ನಡಪರ ಸಂಘಟನೆಗಳು ಇದರಿಂದ ಹಿಂದೆ ಸರಿದಿಲ್ಲ. ಸರ್ಕಾರ ಸಹ ಪರೀಕ್ಷಾ ದಿನಾಂಕವನ್ನು ಮುಂದೂಡಿಲ್ಲ. ಇದರ ನಡುವೆ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ.
ಕರ್ನಾಟಕ ಬಂದ್‌ಗೆ ಯಾವೆಲ್ಲ ಸಂಘಟನೆಗಳ ಬೆಂಬಲ
ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಸಾರಿಗೆ ನೌಕರರ ಒಕ್ಕೂಟದಿಂದ ಬೆಂಬಲ ಸಿಕ್ಕಿದೆ. ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ನೌಕರರ ಸಂಘದಿಂದಲೂ ಬೆಂಬಲ ವ್ಯಕ್ತವಾಗಿದೆ. ಕನ್ನಡ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದಿಂದ ಬೆಂಬಲ ಸೂಚಿಸಲಾಗಿದೆ. ಓಲಾ, ಉಬರ್ ಅಸೋಸಿಯೋಷನ್ ಹಾಗೂ ಆಟೋ ಸಂಘಟನೆಗಳಿಂದಲೂ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ












Click it and Unblock the Notifications