ಕರ್ನಾಟಕ ಬಂದ್: ಟೌನ್‌ಹಾಲ್ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು, ಡಿಸೆಂಬರ್ 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ.
Recommended Video
ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ನಗರದ ಟೌನ್ ಹಾಲ್ ಬಳಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದಗಳು ನಡೆಯುತ್ತಿದ್ದು, ಈ ವೇಳೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಟೌನ್‌ಹಾಲ್ ಬಳಿ ಒಂದು ಗುಂಪಿನ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಮತ್ತೊಂದು ಗುಂಪಿನ ಪ್ರತಿಭಟನಾಕಾರರು ಟೌನ್ಹಾಲ್ನತ್ತ ಧಾವಿಸಿದ್ದು, ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಆಗಮಿಸಿದ 2ನೇ ತಂಡ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದೀಗ ಮೂರನೇ ತಂಡದ ಪ್ರತಿಭಟನಾಕಾರರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ ವರದಿಗಳು ತಿಳಿಸಿವೆ.
ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಬಂದ್ ನಡೆಸುತ್ತಿರುವ ಪ್ರತಿಭಟನಾಕಾರರು ಯತ್ನಾಳ್ ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
ಸರ್ಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯಲೇಬೇಕು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಅನೇಕ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್'ಗೆ ಕರೆ ನೀಡಿವೆ. ಅಲ್ಲದೆ, ವಿವಿಧೆಡೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿವೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಈ ನಡುವೆ ಪ್ರತಿಭಟನೆಯ ಕಾವು ಈಗಷ್ಟೇ ಆರಂಭವಾಗುತ್ತಿದ್ದು, ಬೆಂಗಳೂರಿನ ಕೆಆರ್.ಪುರಂನ ಪೈ ಲೈಔಟ್ ನಲ್ಲಿ ಬಿಎಂಟಿಸಿ ಬಸ್ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದು ವರದಿಯಾಗಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Viral Video: ಬೈಕ್ ಮೇಲೆ ಕುಳಿತಿದ್ದ ಮಹಿಳೆಯ ಖಾಸಗಿ ಭಾಗ ಮುಟ್ಟಿ ಲೈಂಗಿಕ ಕಿರುಕುಳ: ಪುಂಡರ ವಿಡಿಯೋ ವೈರಲ್ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications