ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

|
Google Oneindia Kannada News

ಬೆಂಗಳೂರು, ಡಿಸೆಂಬರ್ 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ.

Recommended Video

ಸ್ತಬ್ದವಾಗತ್ತಾ ಕರ್ನಾಟಕ | Oneindia Kannada

ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Karnataka Bandh Live Updates:ಕರವೇಯಿಂದ ಸಿಎಂ ಮನೆ ಮುತ್ತಿಗೆ ಯತ್ನ: ನಾರಾಯಣಗೌಡ ಬಂಧನKarnataka Bandh Live Updates:ಕರವೇಯಿಂದ ಸಿಎಂ ಮನೆ ಮುತ್ತಿಗೆ ಯತ್ನ: ನಾರಾಯಣಗೌಡ ಬಂಧನ

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ನಗರದ ಟೌನ್ ಹಾಲ್ ಬಳಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದಗಳು ನಡೆಯುತ್ತಿದ್ದು, ಈ ವೇಳೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

Karnataka Bandh: Police Detain Pro-Kannada Activists Who Were Protesting At Bengalurus Town Hall

ಟೌನ್​ಹಾಲ್ ಬಳಿ ಒಂದು ಗುಂಪಿನ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಮತ್ತೊಂದು ಗುಂಪಿನ ಪ್ರತಿಭಟನಾಕಾರರು ಟೌನ್​ಹಾಲ್​ನತ್ತ ಧಾವಿಸಿದ್ದು, ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಆಗಮಿಸಿದ 2ನೇ ತಂಡ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದೀಗ ಮೂರನೇ ತಂಡದ ಪ್ರತಿಭಟನಾಕಾರರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ ವರದಿಗಳು ತಿಳಿಸಿವೆ.

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಬಂದ್ ನಡೆಸುತ್ತಿರುವ ಪ್ರತಿಭಟನಾಕಾರರು ಯತ್ನಾಳ್ ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಸರ್ಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯಲೇಬೇಕು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಅನೇಕ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್'ಗೆ ಕರೆ ನೀಡಿವೆ. ಅಲ್ಲದೆ, ವಿವಿಧೆಡೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿವೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಈ ನಡುವೆ ಪ್ರತಿಭಟನೆಯ ಕಾವು ಈಗಷ್ಟೇ ಆರಂಭವಾಗುತ್ತಿದ್ದು, ಬೆಂಗಳೂರಿನ ಕೆಆರ್.ಪುರಂನ ಪೈ ಲೈಔಟ್ ನಲ್ಲಿ ಬಿಎಂಟಿಸಿ ಬಸ್ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದು ವರದಿಯಾಗಿದೆ.

English summary
Karnataka Bandh: Police Detain Protesting Pro Kannada activists From Town Hall Area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X