Karnataka Bandh: ಬೆಂಗಳೂರು ವಿಮಾನ ನಿಲ್ದಾಣಕ್ಕೆ ನುಗ್ಗಲು ಪ್ರತಿಭಟನಾಕಾರರ ಯತ್ನ- 44 ವಿಮಾನಗಳು ರದ್ದು
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಮತ್ತು ಲ್ಯಾಂಡ್ ಆಗಬೇಕಿದ್ದ 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿಗೆ ಬರುತ್ತಿದ್ದ ಒಟ್ಟು 22 ವಿಮಾನಗಳು ಮತ್ತು ಇಲ್ಲಿಂದ ನಿರ್ಗಮಿಸುತ್ತಿದ್ದ 22 ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಕಾರ್ಯಾಚರಣೆಗೆ ಅಡಚಣೆ ಉಂಟಾಗಬಹುದು ಎಂಬ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಈ ಎಲ್ಲಾ ಮಾಹಿತಿಯನ್ನು ಪ್ರಯಾಣಿಕರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಬಂದ್ ಪರಿಣಾಮದಿಂದಾಗಿ ಅನೇಕ ಪ್ರಯಾಣಿಕರು ತಮ್ಮ ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರತಿಭಟನೆ ನಡೆಸಲು ಕನ್ನಡ ಧ್ವಜದೊಂದಿಗೆ ವಿಮಾನ ನಿಲ್ದಾಣದ ಆವರಣಕ್ಕೆ ಪ್ರವೇಶಿಸಿದ ಐವರು ಕನ್ನಡ ಪರ ಹೋರಾಟಗಾರರನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಬಂಧಿತ ಐವರು ವಿಮಾನ ನಿಲ್ದಾಣದ ಆವರಣಕ್ಕೆ ಪ್ರವೇಶ ಪಡೆಯುವ ಸಲುವಾಗಿ ವಿಮಾನ ಟಿಕೆಟ್‌ಗಳನ್ನು ಪಡೆದಿದ್ದರು ಎಂದು ಮೂಲಗಳು ತಿಳಿಸಿವೆ.

ಕನ್ನಡ ಪರ ಮತ್ತು ರೈತ ಸಂಘಟನೆಗಳು 'ಕರ್ನಾಟಕ ಬಂದ್'ಗೆ ಇಂದು ಕರೆ ನೀಡಿದ್ದಾರೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಬಂದ್ ಪರಿಣಾಮ ಬೀರಿದೆ. ಸಾರ್ವಜನಿಕ ಸಾರಿಗೆ ಲಭ್ಯವಿದ್ದರೂ ಎಲ್ಲಾ ನಿಲ್ದಾಣಗಳು ಬಿಕೋ ಎನ್ನುತ್ತಿವೆ.
ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಚಳವಳಿ (ವಾಟಾಳ್ ಪಕ್ಷ) ಮತ್ತು ವಿವಿಧ ರೈತ ಸಂಘಟನೆಗಳ ಬಣಗಳನ್ನು ಒಳಗೊಂಡಿರುವ ಕರ್ನಾಟಕ ವೇದಿಕೆಯು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ.
ಬಂದ್ ಹಿನ್ನೆಲೆಯಲ್ಲಿ ರಾಜ್ಯದ ಹೆದ್ದಾರಿಗಳು, ಟೋಲ್ ಗೇಟ್‌ಗಳು, ರೈಲು ಸೇವೆಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಭಾರೀ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಬಂದ್‌ಗೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ನೀಡಿದ್ದು, ಹೋಟೆಲ್‌ಗಳು, ಆಟೋರಿಕ್ಷಾ ಸಂಘಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.
ಬೆಂಗಳೂರು ನಗರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಅಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಅಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ 50 ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಬಂದ್ ಜಾರಿಯಲ್ಲಿರುತ್ತದೆ. ಬೆಂಗಳೂರು ನಗರ ಪೊಲೀಸರು ನಿಷೇಧಾಜ್ಞೆ ಆದೇಶಿಸಿದ್ದಾರೆ. ಜನರು ರ್ಯಾಲಿಗಳು, ಪ್ರತಿಭಟನೆಗಳು ಅಥವಾ ಸಭೆಗಳನ್ನು ನಡೆಸುವಂತಿಲ್ಲ ಎಂದು ಹೇಳಿದ್ದಾರೆ. ಆದರೆ, ಕನ್ನಡ ಪರ ಸಂಘಟನೆಗಳು ಮಾತ್ರ ಬೀದಿಗಿಳಿದು ಹೋರಾಟ ನಡೆಡುತ್ತಿವೆ.
1,900ಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಬಂದ್‌ಗೆ ಬೆಂಬಲ ನೀಡುತ್ತಿವೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನಸಿ ಅಂಗಡಿಗಳು ಮತ್ತು ಇತರ ಅನಿವಾರ್ಯವಲ್ಲದ ಅಂಗಡಿಗಳು ಮುಚ್ಚಿವೆ. ಆಸ್ಪತ್ರೆಗಳು, ಆಂಬ್ಯುಲೆನ್ಸ್‌ಗಳು ಮತ್ತು ಔಷಧಾಲಯಗಳಂತಹ ಅಗತ್ಯ ಸೇವೆಗಳು ಕಾರ್ಯನಿರ್ವಹಿಸುತ್ತಿವೆ.
ಇದೇ ವೇಳೆ, ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್











Click it and Unblock the Notifications