ಕರ್ನಾಟಕ ಬಂದ್: ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸೇವೆ ಸ್ಥಗಿತ
ಬೆಂಗಳೂರು, ಜನವರಿ 25: ಮಹಾದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿ ಇಂದು(ಜ.25) ಕರ್ನಾಟಕ ಬಂದ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ.
ಬೆಳಿಗ್ಗೆ ಬಸ್ ಸಂಚಾರ ಎಂದಿನಂತೆ ಆರಂಭಗೊಂಡಿತ್ತಾದರೂ ಪ್ರತಿಭಟನಾಕಾರರು ಮೆಜೆಸ್ಟಿಕ್ ನಲ್ಲಿ ಬಸ್ ಗಳನ್ನು ತಡೆದ ನಂತರ ಸೇವೆ ಸ್ಥಗಿತಗೊಳಿಸಲಾಗಿದೆ. ಕೆಎಸ್ ಆರ್ ಟಿಸಿ ಬಸ್ ಸೇವೆಗಳೂ ಬಹುತೇಕ ಸ್ಥಗಿತಗೊಂಡಿವೆ.

ಬಿಎಂಟಿಸಿ ಬಸ್ ಅನ್ನೇ ನಂಬಿಕೊಂಡು ಬಂದ ನೂರಾರು ಪ್ರಯಾಣಿಕರು ಮೆಜೆಸ್ಟಿಕ್ ನಲ್ಲಿ ಪರದಾಡುತ್ತಿರುವ ದೃಶ್ಯ ಕಂಡುಬರುತ್ತಿದೆ.
Recommended Video

ಮಹದಾಯಿಗಾಗಿ ಕರ್ನಾಟಕ ಬಂದ್ | ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಬಂದ್ ಆಚರಣೆ | Oneindia kannada












Click it and Unblock the Notifications