ಬಿಎಸ್ ಯಡಿಯೂರಪ್ಪ ಆಧುನಿಕ ಹಿಟ್ಲರ್ ಎಂದ ವಾಟಾಳ್ ನಾಗರಾಜ್
ಬೆಂಗಳೂರು, ಡಿಸೆಂಬರ್ 05: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಆಧುನಿಕ ಹಿಟ್ಲರ್ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.
ಕನ್ನಡಿಗರನ್ನು ಬಿಟ್ಟು, ತೆಲುಗು, ಮರಾಠಿಗರಿಗೆ ಪಟ್ಟ ಕಟ್ಟುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೋಸಗಾರ. ನಾನು ಕುಟುಂಬಸ್ಥರನ್ನು ಕಳೆದುಕೊಂಡಾಗ ಅಷ್ಟು ನೋವಾಗಿರಲಿಲ್ಲ. ಆದರೆ, ಯಡಿಯೂರಪ್ಪ ಅವರು ಮಾಡಿದ ಮೋಸದಿಂದ ಅತೀವ ನೋವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪೊಲೀಸರು ಮಫ್ತಿಯಲ್ಲಿ ತೆರಳಿ ಸುಮಾರು 30 ಸಾವಿರಕ್ಕೂ ಅಧಿಕ ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ. ಕರ್ನಾಟಕ ಬಂದ್ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಬುಧವಾರ ಜೈಲ್ ಭರೋ ಚಳವಳಿಗಾಗಿ ಸಭೆ ಕರೆಯಲಾಗಿದೆ ಎಂದರು.

ಬಿಜೆಪಿ, ಆರ್ ಎಸ್ ಎಸ್ ಕನ್ನಡ ವಿರೋಧಿಗಳಾಗಿವೆ. ಪೊಲೀಸರು 30 ಸಾವಿರ ಕನ್ನಡ ಪರ ಹೋರಾಟಗಾರರನ್ನು ಬಂಧಿಸಿದ್ದಾರೆ ಎಂದು ವಾಟಾಳ್ ನಾಗರಾಜ್ ಅವರು ಕಿಡಿಕಾರಿದ್ದಾರೆ.
ಬಂದ್ ಗೆ ಅನುಮತಿ ಕೇಳಿಲ್ಲ ಎಂಬ ಪೊಲೀಸ್ ಆಯುಕ್ತರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಗರ ಪೊಲೀಸ್ ಆಯುಕ್ತರಿಗೆ ನಾವೇಕೆ ಅನುಮತಿ ಕೇಳಬೇಕು, ಅವರು ಪರ ಭಾಷಿಕರು. ಅವರಿಗೆ ಕನ್ನಡ ಬರುವುದಿಲ್ಲ. ಮೊದಲು ಅವರನ್ನು ವರ್ಗಾವಣೆ ಮಾಡಬೇಕು ಎಂದರು.
ಮುಖ್ಯಮಂತ್ರಿ ಗಳು ರಾಜೀನಾಮೆ ನೀಡಬೇಕು. ಪರಭಾಷಿಗರು ನಗರ ಪೊಲೀಸ್ ಆಯುಕ್ತರಾಗಬಾರದು. ಹೀಗಾಗಿ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಇಂದಿನ ಕರ್ನಾಟಕ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ.ಮರಾಠ ಅಭಿವೃದ್ಧಿ ನಿಗಮ ರಚನೆ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದರು.
Recommended Video
ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿತ್ತಿದಾಗ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಸೇರಿದಂತೆ ಹಲವಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications