ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಸುವಿನ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ದೇಶಕ್ಕೇ ನಂಬರ್ ವನ್

ಕರ್ನಾಟಕ ರಾಜ್ಯ ಹಸುವಿನ ಹಾಲು ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಪ್ರಥಮ ಸ್ಥಾನವನ್ನು ಪಡೆದಿದೆ. ಒಟ್ಟಾರೆ ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ ಎಂದು ಪಶು ಸಂಗೋಪನಾ ಮತ್ತು ರೇಷ್ಮೆ ಇಲಾಖೆಯ ಸಚಿವ ಎ. ಮಂಜು ಹೇಳಿದ್ದಾರೆ.

By Sachhidananda Acharya
|
Google Oneindia Kannada News

ಬೆಂಗಳೂರು, ಫೆಬ್ರವರಿ 22: ಕರ್ನಾಟಕ ರಾಜ್ಯ ಹಸುವಿನ ಹಾಲು ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಪ್ರಥಮ ಸ್ಥಾನವನ್ನು ಪಡೆದಿದೆ. ಒಟ್ಟಾರೆ ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ ಎಂದು ಪಶು ಸಂಗೋಪನಾ ಮತ್ತು ರೇಷ್ಮೆ ಇಲಾಖೆಯ ಸಚಿವ ಎ. ಮಂಜು ಹೇಳಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಅತ್ಯಾಧುನಿಕ ಲಸಿಕಾ ತಯಾರಿಕಾ ಪ್ರಯೋಗಾಲಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. [ಗುಜರಾತಿನ ಗೋವುಗಳ ಮೂತ್ರದಲ್ಲಿ ಚಿನ್ನದ ಅಂಶ ಪತ್ತೆ!]

Karnataka became the top cow milk production state in India – A Manju

ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಲಸಿಕೆ ಅಭಿವೃದ್ಧಿ, ತಯಾರಿಕೆ, ಸರಬರಾಜು ಮತ್ತು ರೋಗ ತಪಾಸಣೆ ಕ್ಷೇತ್ರದಲ್ಲಿ ಅತ್ಯುತ್ತಮ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಜಾನುವಾರುಗಳಿಗೆ ತಗಲುವ ರೋಗದ ನಿಯಂತ್ರಣಕ್ಕಾಗಿ ವರ್ಷಕ್ಕೆ 2 ಬಾರಿ ಲಸಿಕೆಯನ್ನು ಹಾಕಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಾನುವಾರುಗಳಿಗೆ ವಿವಿಧ 14 ರೀತಿಯ ರೋಗಗಳು ಕಂಡು ಬಂದಿದೆ. ಹಿಂದೆಲ್ಲಾ ಲಸಿಕೆಗಳನ್ನು ಹೊರ ರಾಜ್ಯಗಳಿಂದ ತರಿಸಿಕೊಳ್ಳಲಾಗುತ್ತಿತ್ತು, ಇದೀಗ ನಮ್ಮ ವಿಜ್ಞಾನಿಗಳು ರಾಜ್ಯದಲ್ಲೇ ಈ ವಿವಿಧ ರೋಗಗಳಿಗೆ ಲಸಿಕೆಗಳನ್ನು ಕಂಡು ಹಿಡಿದಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದ ಪಶುವೈದ್ಯರು ರೈತರ ಮನೆಬಾಗಿಲಿಗೆ ಹೋಗಿ ರೋಗ ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಸಂಸ್ಥೆಯು ರೋಗ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು. [ಬಾಳಾಜಿ ಗ್ರಾಮದಲ್ಲಿ ಅವಳಿ ಕರುಗಳಿಗೆ ಜನ್ಮ ನೀಡಿದ ಹಸು]

English summary
Animal Husbandry Minister A Manju said that ‘Karnataka became the top cow milk production state in India,’ after stone laying ceremony to Modern Vaccination production laboratory for cows in Hebbal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X