Bengaluru: ಕಳೆದ ವರ್ಷದ ಬಿಎಂಟಿಸಿ ಬಸ್ ಪಾಸ್ ಅವಧಿ ಜುಲೈ 31ರ ವರೆಗೆ ವಿಸ್ತರಣೆ- ಹೊಸ ಪಾಸ್‌ಗಳಿಗಾಗಿ ಎಲ್ಲಿ ಅರ್ಜಿ ಸಲ್ಲಿಸಬೇಕು?
ಬೆಂಗಳೂರು, ಜುಲೈ 15: ಜುಲೈ 31 ರ ವರೆಗೆ ವಿದ್ಯಾರ್ಥಿಗಳು ಹೊಸ ಪಾಸ್‌ಗಳನ್ನು ಪಡೆಯಬಹುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( ಬಿಎಂಟಿಸಿ ) ಮಾಹಿತಿ ನೀಡಿದೆ. ಕಳೆದ ವರ್ಷ ನೀಡಲಾದ ವಿದ್ಯಾರ್ಥಿಗಳ ಬಸ್ ಪಾಸ್‌ಗಳ ಮಾನ್ಯತೆಯನ್ನು ಜುಲೈ 31 ರ ವರೆಗೆ ವಿಸ್ತರಿಸಿ ಬಿಎಂಟಿಸಿ ಆದೇಶ ಹೊರಡಿಸಿದೆ. ಜುಲೈ 7 ರಿಂದ 2023-24 ರ ಹೊಸ ಪಾಸ್‌ಗಳನ್ನು ನೀಡಲು ಬಿಎಂಟಿಸಿ ಪ್ರಾರಂಭಿಸಿದೆ.
ಈ ವರ್ಷ ಹೊಸ ಬಿಎಂಟಿಸಿ ಬಸ್ ಪಾಸ್‌ಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯವನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹಳೆಯ ಪಾಸ್‌ಗಳ ಮಾನ್ಯತೆಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಟಿಸಿ ಹೇಳಿದೆ.

ಇದು ಫಸ್ಟ್ ಕ್ಲಾಸ್‌ನಿಂದ ಹಿಡಿದು 12ನೇ ತರಗತಿ (ಪಿಯುಸಿ), ಪದವಿ, ವೃತ್ತಿಪರ, ಸ್ನಾತಕೋತ್ತರ ಪದವಿ, ಸಂಜೆ ಕಾಲೇಜು ಮತ್ತು ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ.
ಪ್ರಸಕ್ತ ವರ್ಷದ ( ಶಾಲಾ ಅಥವಾ ಕಾಲೇಜು ) ಶುಲ್ಕ ಪಾವತಿಸಿದ ರಸೀದಿ ಅಥವಾ ಈ ವರ್ಷದ ( ಶಾಲಾ ಅಥವಾ ಕಾಲೇಜು ) ಗುರುತಿನ ಚೀಟಿಯನ್ನು ನೀಡುವ ಮೂಲಕ ವಿದ್ಯಾರ್ಥಿಗಳು ಬಸ್ ಪಾಸ್ ಪ್ರಯೋಜನಗಳನ್ನು ಪಡೆಯಬಹುದು.
ಈ ಪ್ರಯೋಜನವು ಜುಲೈ 31 ರ ವರೆಗೆ ಮುಂದುವರಿಯುತ್ತದೆ. ಆ ನಂತರ ಬಿಎಂಟಿಸಿ ನೀಡುವ ಪಾಸ್‌ಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.

ಜುಲೈ 31 ರ ಮೊದಲು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಹೊಸ ಬಸ್‌ಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಬಿಎಂಟಿಸಿ ತಿಳಿಸಿದೆ.
ಆನ್‌ಲೈನ್‌ನಲ್ಲಿ ಸ್ಮಾರ್ಟ್ ಕಾರ್ಡ್ ಪಾಸ್‌ಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಅಥವಾ ಬಿಎಂಟಿಸಿ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪಾಸ್‌ಗಳನ್ನು ಆಫ್‌ಲೈನ್‌ನಲ್ಲಿ ಪಡೆಯಲು ಬಯಸುವ ವಿದ್ಯಾರ್ಥಿಗಳು ಅದನ್ನು ಬಿಎಂಟಿಸಿ ಬಸ್ ನಿಲ್ದಾಣಗಳು, ಟ್ರಾಫಿಕ್ ಮತ್ತು ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸೆಂಟರ್‌ಗಳಲ್ಲಿ ಪಡೆಯಬಹುದು.
'ಶಕ್ತಿ' ಯೋಜನೆಯಡಿ, ವಿದ್ಯಾರ್ಥಿನಿಯರು ತಮ್ಮ ಆಧಾರ್ ಕಾರ್ಡ್‌ಗಳನ್ನು ತೋರಿಸುವ ಮೂಲಕ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಗೆ ಮಂಗಳವಾರ ಒಂದು ತಿಂಗಳಾಗಿದೆ. ಮಂಗಳವಾರದ ವರೆಗೂ 16 ಕೋಟಿಗೂ ಹೆಚ್ಚು ಮಹಿಳಾ ಪ್ರಯಾಣಿಕರು ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ. ಜುಲೈ 4 ರಂದು, ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ.

ಕರ್ನಾಟಕ ಸಾರಿಗೆ ಇಲಾಖೆಯ ಪ್ರಕಾರ, ಕಳೆದ ಒಂದು ತಿಂಗಳಲ್ಲಿ 16.73 ಕೋಟಿ ಮಹಿಳಾ ಪ್ರಯಾಣಿಕರು ಎಲ್ಲಾ ನಾಲ್ಕು ರಾಜ್ಯಗಳ ರಸ್ತೆ ಸಾರಿಗೆಯಲ್ಲಿ ಪ್ರಯಾಣಿಸಿದ್ದಾರೆ. ಅದರಲ್ಲಿ ಸುಮಾರು 70 ಲಕ್ಷ ಮಹಿಳೆಯರು ಜುಲೈ 4 ರಂದು ಮಾತ್ರ ಪ್ರಯಾಣಿಸಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳು ಕಳೆದ ಒಂದು ತಿಂಗಳಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರನ್ನು ಕಂಡಿವೆ. ಐದು ಕೋಟಿಗೂ ಹೆಚ್ಚು ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ.
ಸರ್ಕಾರಿ ಬಸ್‌ಗಳಿಗೆ ಬೇಡಿಕೆ ಹೆಚ್ಚಿದ್ದರಿಂದ 4000 ಹೊಸ ಬಸ್‌ಗಳನ್ನು ಖರೀದಿಸಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ.












Click it and Unblock the Notifications