ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಟ್ನಾ ಸ್ಫೋಟಕ್ಕೆ ನಿತೀಶ್ ಕುಮಾರ್ ಹೊಣೆ : ಅಶೋಕ್

|
Google Oneindia Kannada News

ಬೆಂಗಳೂರು, ಅ, 28 : ಪಾಟ್ನದಲ್ಲಿ ಭಾನುವಾರ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಸಮಾವೇಶದ ಸಂದರ್ಭದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟವನ್ನು ಖಂಡಿಸಿ ರಾಜ್ಯ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಿದರು. ಬಿಹಾರ ಸಿಎಂ ನಿತೀಶ್ ಕುಮಾರ್ ಕಾಂಗ್ರೆಸ್ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.

ಸೋಮವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಗರಿಷ್ಠ ಭದ್ರತೆ ನೀಡುವ ನಿತೀಶ್ ಕುಮಾರ್ ಕಾಂಗ್ರೆಸ್ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

r ashok

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರಿಗೆ ಸೂಕ್ತ ರಕ್ಷಣೆ ಒದಗಿಸಬೇಕಾಗಿದ್ದು, ಬಿಹಾರ ಸರ್ಕಾರದ ಕರ್ತವ್ಯವಾಗಿತ್ತು. ಆದರೆ, ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರ ಸರ್ಕಾರ ಮೋದಿ ಅವರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಘಟನೆಯ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಕೇಂದ್ರದ ಕಾಂಗ್ರೆಸ್ ದೇಶದ ಗಡಿ ಸಮಸ್ಯೆಯನ್ನು ನಿವಾರಿಸಲು ವಿಫಲವಾಗಿದೆ. ಆದ್ದರಿಂದ ನುಸುಳುಕೋರರು ದೇಶದೊಳಗೆ ಆಗಮಿಸುತ್ತಿದ್ದು, ಇದರಿಂದ ವಿವಿಧ ನಗರಗಳಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿದೆ, ಕೇಂದ್ರ ಸರ್ಕಾರವೂ ಘಟನೆಗೆ ಪರೋಕ್ಷವಾಗಿ ಕಾರಣವಾಗಿವೆ ಎಂದು ಅಶೋಕ್ ದೂರಿದರು.

ಕಳೆದ 10 ವರ್ಷಗಳಿಂದ ಅಸ್ಸಾಂ, ಬಂಗ್ಲಾ, ಕಾಶ್ಮೀರದ ಗಡಿಯಿಂದ ಅಕ್ರಮವಾಗಿ ನುಸುಳುಕೋರರು ದೇಶಕ್ಕೆ ಪ್ರವೇಶಿಸುತ್ತಿದ್ದಾರೆ. ಇದನ್ನು ತಡೆಗಟ್ಟುವಲ್ಲಿ ಕೇಂದ್ರದ ಯುಪಿಎ ಸರ್ಕಾರ ಸಂಪೂರ್ಣವಿಫಲವಾಗಿದೆ. ಕಾಂಗ್ರೆಸ್‌ನಿಂದ ದೇಶದ ರಕ್ಷಣೆ ಸಾಧ್ಯವಿಲ್ಲ. ಆದ್ದರಿಂದ ಕಾಂಗ್ರೆಸ್ ಮುಕ್ತ ಭಾರತವನ್ನು ನಿರ್ಮಾಣ ಮಾಡುವುದೇ ನಮ್ಮ ಸಂಕಲ್ಪವಾಗಿದೆ ಎಂದು ಘೋಷಿಸಿದರು.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೇಶದ ಸಮಸ್ಯೆಗಳ ಬಗ್ಗೆ ಅರಿವಿಲ್ಲ. ದಿಗ್ವಿಜಯ್‌ಸಿಂಗ್ ಬರೆದು ಕೊಟ್ಟ ಭಾಷಣವನ್ನು ಎಲ್ಲಾ ಕಡೆ ಮಾಡುತ್ತಾರೆ. ದೇಶದ ಸಮಸ್ಯೆಗಳ ಬಗ್ಗೆ ಅವರಿಗೆ ಸ್ವಲ್ಪವೂ ತಿಳುವಳಿಕೆ ಇಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮುನಿರಾಜು, ಮಹಾನಗರ ಘಟಕದ ಅಧ್ಯಕ್ಷ ಸುಬ್ಬಣ್ಣ, ಶಾಸಕರಾದ ರಘು, ವಿಜಯಕುಮಾರ್, ಸಂಸದ ಪಿ.ಸಿ.ಮೋಹನ್ ಮುಂತಾದವರು ಪಾಲ್ಗೊಂಡಿದ್ದರು. (ಪಾಟ್ನಾ ಸ್ಪೋಟದ ನಂತರ ಗೃಹ ಸಚಿವರು ಹೋಗಿದೆಲ್ಲಿಗೆ)

English summary
Karnataka Bharatiya Janata Party (BJP) condemned the serial blasts in Patna. On Monday, October 28 leaders protest in SBM circle against blast and alleged that Bihar government fail to make security arrangements in Patna. they urged Karnataka government to provide sufficient security for Narendra Modi’s scheduled rally in the State on November 17, Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X