ಮೋದಿಗಾಗಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ವಿಶೇಷ ಪೂಜೆ
Recommended Video
ಬೆಂಗಳೂರು, ಮೇ 20: ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲೆಂದು ರಾಜ್ಯ ಬಿಜೆಪಿಯು ಬೆಂಗಳೂರಿನ ಕಚೇರಿಯಲ್ಲಿ ವಿಶೇಷ ಪೂಜೆ ಮತ್ತು ಹೋಮ ಮಾಡಿಸಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಗಣಪತಿ ಹೋಮ, ರುದ್ರಯಾಗ, ಚಂಡಿಕಾ ಹೋಮ, ಶತ್ರು ಸಂಹಾರ ಯಾಗ ಸೇರಿದಂತೆ ಹಲವು ಹೋಮಹವನಗಳನ್ನುಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಶಾಸಕ ಅಶ್ವಥ್ ನಾರಾಯಣ, ಕಳಸಪ್ಪ ಬಂಡಿ, ದತ್ತಾತ್ರೇಯ ಪಾಟೀಲ್ ರೇವೂರ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಸೇರಿದಂತೆ ಮತ್ತಿತರ ಪ್ರಮುಖರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಹೋಮ, ವಿಶೇಷ ಪೂಜೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಚುನಾವಣೆ ಫಲಿತಾಂಶದ ಬಳಿಕ ರಾಜ್ಯದ ಘಟಾನುಘಟಿ ನಾಯಕರು ಸೋತು ಮನೆಗೆ ಹೋಗಲಿದ್ದಾರೆ ಎಂದರು.
ಮೋದಿ ಮತ್ತೆ ಪ್ರಧಾನಿ ಆಗುವುದನ್ನು ಯಾವ ಶಕ್ತಿಗಳೂ ತಡೆಯಲು ಸಾಧ್ಯವಾಗುವುದಿಲ್ಲ, 300 ಕ್ಕೂ ಅಧಿಕ ಸ್ಥಾನದಲ್ಲಿ ಗೆದ್ದು ಮೋದಿ ಅವರು ಮತ್ತೊಮ್ಮೆ ದೇಶದ ಜನರ ಆಶೋತ್ತರಗಳಿಗೆ ಸ್ಪಂದಿಸಲಿದ್ದಾರೆ ಎಂದರು.












Click it and Unblock the Notifications