ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking News: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ

|
Google Oneindia Kannada News

ಬೆಂಗಳೂರು, ಜೂನ್ 10: ಕೊರೊನಾವೈರಸ್ ಸಂಕಷ್ಟದ ನಡುವೆ ಉಂಟಾಗಿದ್ದ ಆಡಳಿತಾರೂಢ ಬಿಜೆಪಿ ಆಂತರಿಕ ಬಿಕ್ಕಟ್ಟು ಬಗೆಹರಿದಿದೆ ಎನ್ನಬಹುದು. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ.

Recommended Video

High Command ಈ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ ನಾಯಕತ್ವ ಬದಲಾವಣೆ ಮಾಡೋದೂ ಇಲ್ಲ | Arun Singh | Oneindia Kannada

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಉದ್ಭವವಾಗಿಲ್ಲ, ಇದೆಲ್ಲ ಕಾಲ್ಪನಿಕ ಸಂಗತಿ, ಯಡಿಯೂರಪ್ಪ ವಿರುದ್ಧ ಸಹಿ ಸಂಗ್ರಹ, ದೂರು ನೀಡಿದ್ದಾರೆ ಎಂಬುದೆಲ್ಲ ಸತ್ಯಕ್ಕೆ ದೂರವಾದ ಮಾತು, ಸದ್ಯಕ್ಕಂತೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿಲ್ಲಎಂದು ಅರುಣ್ ಸಿಂಗ್ ಅವರು ಖಾಸಗಿ ಸುದ್ದಿ ವಾಹಿನಿ ಜೊತೆ ಮಾತನಾಡುತ್ತಾ ಹೇಳಿದರು.

Karnataka BJP in charge Arun Singh rules out change of leadership in the State

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಅನೇಕರು ಷಡ್ಯಂತ್ರ್ಯ ರೂಪಿಸಿ, ಹೈಕಮಾಂಡ್ ತನಕ ದೂರು ಹೋಗಿದೆ.. ಜೂನ್ 7ಕ್ಕೆ ಹೊಸ ನಾಯಕತ್ವದಲ್ಲಿ ಕರ್ನಾಟಕ ಬಿಜೆಪಿ ಹೊಸ ಸರ್ಕಾರ ಎಂದೆಲ್ಲ ಸುದ್ದಿ ಹಬ್ಬಿತ್ತು. ಇದರ ಜೊತೆಗೆ ಕ್ಯಾಬಿನೆಟ್ ಸಚಿವರ ಸ್ಥಾನಮಾನ ಬದಲಾವಣೆ ಬಗ್ಗೆ ಕೂಡಾ ಗಾಳಿಸುದ್ದಿ ಹಬ್ಬಿತ್ತು.

ಇದರ ಬೆನ್ನಲ್ಲೆ ಯಡಿಯೂರಪ್ಪ ಅವರು ಕೂಡಾ ಬಿಜೆಪಿ ಹೈಕಮಾಂಡ್ ಬಯಸಿದರೆ ತಕ್ಷಣವೇ ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಿಸಿದ್ದು, ರಾಜಕೀಯ ಪಡಸಾಲೆಯಲ್ಲಿ ಗುಸುಗುಸು ಸುದ್ದಿಗೆ ಮೈಕ್ ಹಿಡಿದಂತೆ ಆಗಿತ್ತು.

ಆದರೆ, ಯಡಿಯೂರಪ್ಪ ಅವರ ರಾಜೀನಾಮೆ ಹೇಳಿಕೆ ಬಗ್ಗೆ ಕೂಡಾ ಪ್ರತಿಕ್ರಿಯಿಸಿರುವ ಅರುಣ್ ಸಿಂಗ್, ಯಡಿಯೂರಪ್ಪ ಅವರ ಮಾತಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ, ಪಕ್ಷದ ವರಿಷ್ಠದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿ ಕಾರ್ಯ ನಿರ್ವಹಿಸುತ್ತೇವೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಇದು ಪಕ್ಷದ ಬಗ್ಗೆ ಅವರಿಗಿರುವ ಬದ್ಧತೆಯನ್ನು ತೋರಿಸುತ್ತದೆ ಎಂದರು.

English summary
Karnataka BJP in charge Arun Singh rules out change of leadership in the State
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X