ದೊರೆಸ್ವಾಮಿ ವಿರುದ್ಧ ಹೇಳಿಕೆ; ಯತ್ನಾಳ ಬೆಂಬಲಕ್ಕೆ ನಿಂತ ಬಿಜೆಪಿ

ಬೆಂಗಳೂರು, ಫೆಬ್ರವರಿ 29: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಕ್ಕೆ ಬಿಜೆಪಿ ಮುಖಂಡರು ನಿಂತಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಹಲವು ಬಿಜೆಪಿ ಮುಖಂಡರು ಯತ್ನಾಳ ಸರ್ಮಥನೆಯ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕೂಡ ಯತ್ನಾಳ ಸಮರ್ಥಿಸಿದ್ದರು.

ಕೊಡಗಿನಲ್ಲಿ ಶನಿವಾರ ಮಾತನಾಡಿರುವ ಸಚಿವ ಸುರೇಶ್ ಕುಮಾರ್ ಅವರು, ಯತ್ನಾಳ ಹೇಳಿಕೆ ಸರಿ ತಪ್ಪು ಎಂದು ನಾನು ಹೇಳುವುದಿಲ್ಲ. ಆದರೆ ದೊರೆಸ್ವಾಮಿ ಅವರು ಮೋದಿ ಬಗ್ಗೆ ಯಾವ ರೀತಿ ಮಾತನಾಡಿದ್ದರು ಎಂಬುದನ್ನು ನೀವೇ ನೋಡಿ ಎಂದು ಹೇಳಿದ್ದಾರೆ.

Karnataka BJP Leaders Defends MLA Yatnal Remark On Doreswamy

ಬಳ್ಳಾರಿಯಲ್ಲಿ ಮಾತನಾಡಿರುವ ಶಾಸಕ ಸೋಮಶೇಖರ ರೆಡ್ಡಿ ಅವರು, ಪಾಕಿಸ್ತಾನ್ ಏಜೆಂಟ್‌ಗಳಿಗೆ ಇನ್ನೇನು ಭಾರತದ ದೇಶಭಕ್ತರು ಎನ್ನಲಾಗುತ್ತದಾ ಎಂದು ಯತ್ನಾಳ ಹೇಳಿಕೆಯನ್ನು ಸಮರ್ಥಿಸಿದ್ದಾರೆ.

ಕಳೆದ ಫೆ 25 ರಂದು ವಿಜಯಪುರದಲ್ಲಿ ಯತ್ನಾಳ, ದೊರೆಸ್ವಾಮಿ ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವುದನ್ನು ನೋಡಿದ್ದೇವೆ. ಆ ಮುದುಕ ಪಾಕಿಸ್ತಾನ್ ಏಜೆಂಟ್ ಇದ್ದಂತೆ ಎಂದು ಹೇಳಿದ್ದರು. ಇದು ವಿವಾದ ಸೃಷ್ಠಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+