ಎಸಿಬಿ ದುರ್ಬಳಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಣಕಹಳೆ
ಬೆಂಗಳೂರು. ಆಗಸ್ಟ್ 20 : ಅಮಿತ್ ಶಾ ಅವರು ತರಾಟೆಗೆ ತೆಗೆದುಕೊಂಡಿರುವ ಬಳಿಕ ಎಚ್ಚೇತ್ತಿರುವ ರಾಜ್ಯ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರುತ್ತಿದ್ದಾರೆ.
ಡಿಕೆ ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಾಡಿದ ಬಳಿಕ ಇದೀಗ ಎಸಿಬಿಯನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಇಂದು (ಭಾನುವಾರ) ಬೆಂಗಳೂರಿನ ಮೈಸೂರು ವೃತ್ತದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಎಸಿಬಿಯಲ್ಲಿ ಎಫ್‌ಐಆರ್ ದಾಖಲಾಯಿಸುವ ಮೂಲಕ ಎಸಿಬಿಯನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳಿತ್ತಿದೆ ಎಂದು ಆರ್ ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.

ಇದೇ ಎಸಿಬಿ ವಿಚಾರದಲ್ಲಿ ನಾಳೆಯಿಂದ ರಾಜ್ಯವ್ಯಾಪಿ ಪ್ರತಿಭಟನೆಯನ್ನು ಬಿಜೆಪಿ ಆಯೋಜಿಸಿದೆ. ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಬಳಿಕ ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು ಸಿಕ್ಕ ಸಣ್ಣ ಅವಕಾಶವನ್ನೂ ಪ್ರಬಲವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಯೋಚನೆ ಮಾಡುತ್ತಿದೆ.












Click it and Unblock the Notifications